‘ಒನ್ ಅಂಡ್ ಓನ್ಲಿ ಸುಖ’: ‘S\O ಮುತ್ತಣ್ಣ’ ಸಿನಿಮಾದ ಹೊಸ ಹಾಡು

Son Of Muthanna: ಪ್ರಣಂ ದೇವರಾಜ್ ನಾಯಕನಾಗಿ, ರಂಗಾಯಣ ರಘು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ಟೀಸರ್​ನಿಂದಲೇ ಈಗಾಗಲೇ ಗಮನ ಸೆಳೆದಿದೆ. ಅಪ್ಪ-ಮಗನ ಬಾಂಧವ್ಯದ ಕತೆ ಹೊಂದಿರುವ ಈ ಸಿನಿಮಾಕ್ಕೆ ಇದೀಗ ಯೋಗರಾಜ್ ಭಟ್ಟರು ಹಾಡು ಬರೆದಿದ್ದು, ಸಂಚಿತ್ ಹೆಗ್ಡೆ ಹಾಡು ಹಾಡಿದ್ದಾರೆ.

‘ಒನ್ ಅಂಡ್ ಓನ್ಲಿ ಸುಖ’: ‘S\O ಮುತ್ತಣ್ಣ’ ಸಿನಿಮಾದ ಹೊಸ ಹಾಡು
Muthanna

Updated on: May 10, 2025 | 11:20 PM

ದೇವರಾಜ್ ಪುತ್ರ, ಪ್ರಜ್ವಲ್ ದೇವರಾಜ್ (Prajwal Devaraj) ಸಹೋದರ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ‘S/O ಮುತ್ತಣ್ಣ’ ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ವಿಷಯಕ್ಕೆ ಗಮನ ಸೆಳೆಯುತ್ತಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಕನ್ನಡ ಚಿತ್ರರಂಗದ ಮುತ್ತಣ್ಣ ಶಿವರಾಜ್ ಕುಮಾರ್ ಅವರು ಟೀಸರ್ ಬಿಡುಗಡೆ ಮಾಡಿದ್ದರು. ಇದೀಗ ಭಟ್ಟರು ಸಾಹಿತ್ಯ ಒದಗಿಸಿರುವ ಹಾಡೊಂದನ್ನು ಸಂಚಿತ್ ಹೆಗ್ಡೆ ಇದೇ ಸಿನಿಮಾಕ್ಕೆ ಹಾಡಿದ್ದಾರೆ.

ಪುರಾತನ ಫಿಲಂಸ್ ನಿರ್ಮಾಣ ಮಾಡಿ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ಗಾಯಕ ಸಂಚಿತ್ ಹೆಗ್ಡೆ ತಮ್ಮ ಮಧುರ ಧ್ವನಿಯಲ್ಲಿ ಹಾಡಿದ್ದಾರೆ. ಸಚಿನ್ ಬಸ್ರೂರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದು, ಹಾಡುಗಳಿಗೆ ಅವರದ್ದೇ ರಾಗದ ಮಟ್ಟು. ಸಂಚಿತ್ ಹೆಗ್ಡೆ ರೆಕಾರ್ಡ್ ಮಾಡಿರುವ ಹೊಸ ಹಾಡು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.

‘S/O ಮುತ್ತಣ್ಣ’ ಸಿನಿಮಾ ತಂದೆ-ಮಗನ ಬಾಂಧವ್ಯದ ಕತೆ ಹೊಂದಿರುವ ಸಿನಿಮಾ ಆಗಿದೆ. ಸಿನಿಮಾನಲ್ಲಿ ರಂಗಾಯಣ ರಘು ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ನಡೆಯುತ್ತಿದೆ. ಹಾಡುಗಳ ರೆಕಾರ್ಡ್, ಡಬ್ಬಿಂಗ್ ಇನ್ನಿತರೆ ಕಾರ್ಯಗಳು ಅಂತಿಮ ಹಂತದಲ್ಲಿವೆ.

ಇದನ್ನೂ ಓದಿ:ಸೋನು ನಿಗಂ ವಿವಾದದ ಬಗ್ಗೆ ನಟ ಧನಂಜಯ್ ಮಾತು

ಜಾಕ್ ಮಂಜು ಅವರ ಮುಂದಾಳತ್ವದಲ್ಲಿ ಶಾಲಿನಿ‌ ಆರ್ಟ್ಸ್ ಸಂಸ್ಥೆ ಈ ಸಿನಿಮಾ ಅನ್ನು ಡಿಸ್ಟ್ರಿಬ್ಯೂಟ್ ಮಾಡಲಿದೆ. ಪುರಾತನ ಫಿಲಂಸ್ ನಿರ್ಮಾಣ ಮಾಡಿರುವ ಸಿನಿಮಾಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌. ನಾಯಕ ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಸಂದೀಪ ಮಂಜುನಾಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us