Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ನಟ ಅರ್ಜನ್​ ಗೌಡ ಅವರು ಆ್ಯಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ಕೊರೊನಾ ವೈರಸ್​ ಹಾವಳಿಗೆ ಹೆದರಿಕೊಂಡು ಮನೆಯಲ್ಲಿ ಕುಳಿತಿರುವಾಗ ಅರ್ಜುನ್​ ಗೌಡ ಅವರು ದೇವರು ಮೆಚ್ಚುವ ಕೆಲಸ ಮಾಡುತ್ತಿದ್ದಾರೆ.

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ
ನಟ ಅರ್ಜುನ್​ ಗೌಡ
Follow us
ಮದನ್​ ಕುಮಾರ್​
|

Updated on:Apr 30, 2021 | 12:45 PM

ಕೊರೊನಾ ವೈರಸ್​ನಿಂದಾಗಿ ಆಗುತ್ತಿರುವ ಕಷ್ಟಗಳು ಒಂದೆರಡಲ್ಲ. ಸರಿಯಾಗಿ ನಿರ್ವಹಣೆ ಇಲ್ಲದ ಕಾರಣ ರೋಗಿಗಳು ಆಸ್ಪತ್ರೆಯಲ್ಲಿ ಬೆಡ್​ ಸಿಗದೇ ಪರದಾಡುವಂತಾಗಿದೆ. ಸೂಕ್ತ ಸಮಯಕ್ಕೆ ಆಕ್ಸಿಜನ್​ ಸಿಗುತ್ತಿಲ್ಲ. ಇಂಥ ಕಠಿಣ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮ ಐಷಾರಾಮಿ ಬಂಗಲೆಗಳಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಆದರೆ ಸ್ಯಾಂಡಲ್​ವುಡ್​ ನಟ ಅರ್ಜುನ್​ ಗೌಡ ಅವರು ಬರೀ ಬಾಯಿ ಮಾತಿನಲ್ಲಿ ಸ್ಟೇ ಹೋಮ್​ ಸ್ಟೇ ಸೇಫ್​ ಎಂಬುದನ್ನು ಬಿಟ್ಟು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕನ್ನಡದಲ್ಲಿ ಶಿವರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​, ದರ್ಶನ್​ ಮುಂತಾದ ಸ್ಟಾರ್​ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್​ ಗೌಡ ಅವರಿಗೆ ಫಿಟ್​ನೆಸ್​ ಬಗ್ಗೆ ಅಪಾರ ಆಸಕ್ತಿ. ರುಸ್ತುಂ, ಒಡೆಯ, ಯುವರತ್ನ ಮುಂತಾದ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಆದರೆ ಈಗ ಅವರು ಆ್ಯಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ಕೊರೊನಾ ವೈರಸ್​ ಹಾವಳಿಗೆ ಹೆದರಿಕೊಂಡು ಮನೆಯಲ್ಲಿ ಕುಳಿತಿರುವಾಗ ಅರ್ಜುನ್​ ಗೌಡ ಅವರು ದೇವರು ಮೆಚ್ಚುವ ಕೆಲಸ ಮಾಡುತ್ತಿದ್ದಾರೆ.

ರೋಗಿಗಳನ್ನು ಮನೆಯಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗುವುದು, ಮೃತ ರೋಗಿಗಳ ದೇಹವನ್ನು ಸ್ಮಶಾನಕ್ಕೆ ತಲುಪಿಸುವ ಕೆಲಸದಲ್ಲಿ ಅರ್ಜುನ್​ ಗೌಡ ಮಗ್ನರಾಗಿದ್ದಾರೆ. ಅವರು ಮಾಡುತ್ತಿರುವ ಈ ಕೆಲಸದ ಬಗ್ಗೆ ಸ್ವತಃ ಅವರ ಕುಟುಂಬದವರಿಗೆ ಗೊತ್ತೇ ಇರಲಿಲ್ಲ. ಆದರೆ ಈಗ ಈ ವಿಚಾರ ಜಗಜ್ಜಾಹೀರಾಗುತ್ತಿರುವುದರಿಂದ ಮನೆಯವರಿಗೆ ವಿಷಯ ಮುಟ್ಟಿದೆ. ಮೊದಲಿಗೆ ತೀವ್ರವಾಗಿ ವಿರೋಧಿಸಿದ್ದ ಕುಟುಂಬದವರು ಈಗ ಮಗನ ಕೆಲಸಕ್ಕೆ ಬೆಂಬಲ ಸೂಚಿಸಿದ್ದಾರೆ. ಅರ್ಜುನ್​ ಗೌಡ ಮಾಡುತ್ತಿರುವ ಈ ಕೆಲಸಕ್ಕೆ ಸ್ಯಾಂಡಲ್​ವುಡ್​ನ ಅನೇಕರು ಭೇಷ್​ ಎನ್ನುತ್ತಿದ್ದಾರೆ. ನಿರ್ದೇಶಕ ಪನ್ನಗ ಭರಣ, ನಟಿ ರಕ್ಷಿತಾ ಪ್ರೇಮ್ ಸೇರಿದಂತೆ ಹಲವರು ಅರ್ಜುನ್​ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಸದ್ಯಕ್ಕಂತೂ ಕೊರೊನಾ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಜನರ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಹಾಗಾಗಿ ಅರ್ಜುನ್​ ಗೌಡ ಅವರಂತಹ ವ್ಯಕ್ತಿಗಳ ಸಹಾಯ ಈ ಸಮಾಜಕ್ಕೆ ಹೆಚ್ಚು ಅಗತ್ಯವಿದೆ. ಅದನ್ನು ಅರ್ಥ ಮಾಡಿಕೊಂಡಿರುವ ಅವರು ಇನ್ನೂ ಕೆಲವು ತಿಂಗಳ ಕಾಲ ಈ ಕೆಲಸವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಸದ್ಯಕ್ಕಂತೂ ಬೆಂಗಳೂರಿನಲ್ಲಿ ಜನರು ಅಂತ್ಯ ಸಂಸ್ಕಾರಕ್ಕೂ ಕಷ್ಟಪಡುತ್ತಿದ್ದಾರೆ. ಅಂಥ ಅನೇಕರಿಗೆ ಅರ್ಜುನ್​ ಗೌಡ ಸಹಾಯ ಮಾಡುವ ಮೂಲಕ ಮೆಚ್ಚುಗೆ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

ಬೀದಿಗೆ ಬಂತು ಶ್ರೀಕೃಷ್ಣ ಧಾರಾವಾಹಿ ನಟನ ಬದುಕು; ಕಣ್ಣೀರಿಟ್ಟ ಸುನಿಲ್​ ನಗರ್​

Published On - 12:33 pm, Fri, 30 April 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ