ದರ್ಶನ್ ಹಲ್ಲೆ ಆರೋಪ ಪ್ರಕರಣ: ಪೊಲೀಸರಿಗೆ ಇನ್ನೂ ಸಿಗದ ಭದ್ರತಾ ಸಿಬ್ಬಂದಿ ಪ್ರಕಾಶ್

Darshan Case: ನಟ ದರ್ಶನ್ ಅವರು ಮೈಸೂರಿನಲ್ಲಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿರುವ ಪ್ರಕರಣದ ತನಿಖೆ ಮುಂದುವರೆಯುತ್ತಿದೆ. ಆದರೆ, ಪೊಲೀಸರಿಗೆ ಮುಖ್ಯವಾಗಿ ಬೇಕಾಗಿದ್ದ ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇತ್ತ ಬೆಂಗಳೂರಿನಲ್ಲಿ ನಿರ್ಮಾಪಕ ಉಮಾಪತಿ ತನಿಖೆ ಚುರುಕುಗೊಳಿಸಲು ಮನವಿ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ.

ದರ್ಶನ್ ಹಲ್ಲೆ ಆರೋಪ ಪ್ರಕರಣ: ಪೊಲೀಸರಿಗೆ ಇನ್ನೂ ಸಿಗದ ಭದ್ರತಾ ಸಿಬ್ಬಂದಿ ಪ್ರಕಾಶ್
ನಟ ದರ್ಶನ್​ (ಫೈಲ್ ಚಿತ್ರ)
Follow us
TV9 Web
| Updated By: Digi Tech Desk

Updated on:Jul 20, 2021 | 10:11 AM

ಮೈಸೂರು: ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೊಟೆಲ್​ನಲ್ಲಿ ಸಿಬ್ಬಂದಿಯ ಮೇಲೆ ದರ್ಶನ್ (Darshan) ನಡೆಸಿದ್ದಾರೆ ಎನ್ನಲಾದ ಹಲ್ಲೆ ಪ್ರಕರಣದ ಪೊಲೀಸ್ ತನಿಖೆ ಮುಂದುವರೆಯುತ್ತಿದೆ. ದೇವರಾಜ ವಿಭಾಗದ ಎಸಿಪಿ ಎಂ.ಎನ್.ಶಶಿಧರ್ ನೇತೃತ್ವದಲ್ಲಿ ಮಾಹಿತಿ ಸಂಗ್ರಹಣೆ ನಡೆಸಲಾಗುತ್ತಿದೆ. ಘಟನೆ ದಿನದಂದು ಹೊಟೆಲ್​ನಲ್ಲಿ ಹಾಜರಿದ್ದ ಎಲ್ಲಾ ಸಿಬ್ಬಂದಿಗಳ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆದರೆ ಅಲ್ಲಿನ ಭದ್ರತಾ ಸಿಬ್ಬಂದಿ ಪ್ರಕಾಶ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ಈ ಮೊದಲು ಪ್ರಕಾಶ್ ಮಾತನಾಡಿದ್ದಾರೆ ಎನ್ನಲಾದ ವಿಡಿಯೊವೊಂದು ಎಲ್ಲೆಡೆ ಹರಿದಾಡಿದ್ದು, ಅದರಲ್ಲಿ ಪ್ರಕಾಶ್ ದರ್ಶನ್ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಅವರ ಹೇಳಿಕೆ ಬಹಳ ಮಹತ್ವದ್ದಾಗಿದೆ. ಅದಾಗ್ಯೂ ಪೊಲೀಸರಿಗೆ ಪ್ರಕಾಶ್ ಅವರ ಸುಳಿವು ಲಭ್ಯವಾಗದಿರುವುದರಿಂದ ಮಾಹಿತಿ ಸಂಗ್ರಹಣೆ ಕಾರ್ಯದಲ್ಲಿ ತುಸು ಹಿನ್ನೆಡೆಯಾಗಿದೆ. 

ಘಟನೆ ನಡೆದ ದಿನದಂದು ಹಾಜರಿದ್ದ ಉಳಿದೆಲ್ಲಾ ಸಿಬ್ಬಂದಿಗಳ ಹೇಳಿಕೆಯನ್ನು ಈಗಾಗಲೇ ಪಡೆದಿರುವ ಪೊಲೀಸರು ತನಿಖೆಯ ಮುಂದಿನ ಹಂತವಾಗಿ ನಟ ದರ್ಶನ್ ಮತ್ತು ಅವರ ಸ್ನೇಹಿತರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಘಟನೆ ನಡೆದ ದಿನದಂದು ದರ್ಶನ್ ಜೊತೆಯಿದ್ದ ಎಲ್ಲರಿಗೂ ಪೊಲೀಸರು ನೋಟಿಸ್ ನೀಡುವ ಸಾಧ್ಯತೆ ಇದೆ.

ನಿಲ್ಲದ ದರ್ಶನ್- ಇಂದ್ರಜಿತ್ ವಾರ್; ತನಿಖೆ ಚುರುಕುಗೊಳಿಸಲು ಉಮಾಪತಿ ಮನವಿ ಸಾಧ್ಯತೆ ಬೆಂಗಳೂರು: ನಟ ದರ್ಶನ್ ಮತ್ತು ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರ ಆರೋಪ ಪ್ರತ್ಯಾರೋಪಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಜೊತೆಗೆ ಅವರು ನೀಡುತ್ತಿರುವ ಹೇಳಿಕೆಗಳಿಂದ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ದರ್ಶನ್​ಗೆ ವಂಚನೆ ಯತ್ನಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಲು ಮನವಿ ನೀಡುವ ಸಾಧ್ಯತೆ ಇದೆ. 25 ಕೋಟಿ ರೂ. ಲೋನ್ ವಂಚನೆ ಯತ್ನಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಉಮಾಪತಿ ತಮ್ಮ ವಕೀಲರನ್ನು ಭೇಟಿಯಾಗಲಿದ್ದು, ಅವರ ಬಳಿ ಚರ್ಚಿಸಲಿದ್ದಾರೆ. ನಂತರ ಅವರ ವಕೀಲರು ತನಿಖೆಯನ್ನು ಚುರುಕುಗೊಳಿಸುವಂತೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ನನ್ನ ಪ್ರೀತಿ, ನಂಬಿಕೆ, ಸ್ಫೂರ್ತಿಗೆ ಇನ್ನೊಂದು ಹೆಸರು ಡಿ ಬಾಸ್’; ದರ್ಶನ್​ ಬೆಂಬಲಕ್ಕೆ ನಿಂತ ಯುವ ನಟ

ಇದನ್ನೂ ಓದಿ: ನಿರಂತರ ಬೆದರಿಕೆ; ದರ್ಶನ್​ ಹಿಂಬಾಲಕ ವಿರುದ್ಧ ಸೈಬರ್​ ಪೊಲೀಸರಿಗೆ ಇಂದ್ರಜಿತ್​ ದೂರು

(Sandalwood actor Darshan assault case investigation goes on but the watchman Prakash is hidden from Police)

Published On - 10:02 am, Tue, 20 July 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್