Duniya Vijay: ನಟ ದುನಿಯಾ ವಿಜಯ್‌ಗೆ ಪಿತೃವಿಯೋಗ
Duniya Vijay Father Death: ನಟ ದುನಿಯಾ ವಿಜಯ್ ಅವರಿಗೆ ಪಿತೃ ವಿಯೋಗವಾಗಿದೆ. ಅವರ ತಂದೆ ರುದ್ರಪ್ಪ ಇಂದು ಇಹಲೋಕ ತ್ಯಜಿಸಿದ್ದಾರೆ.
ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 7.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು- ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆನೇಕಲ್ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ಇಹಲೋಕ ತ್ಯಜಿಸಿದ್ದರು.
ದುನಿಯಾ ವಿಜಯ್ ಹಂಚಿಕೊಂಡ ಪೋಸ್ಟ್:
ಇದನ್ನೂ ಓದಿ:
ಜಸ್ಟ್ ಮಿಸ್: ಉರಿಯುತ್ತಿದ್ದ ಕಾರನ್ನ ನಂದಿಸುವಾಗ ಅಗ್ನಿಶಾಮಕ ಸಿಬ್ಬಂದಿ ಮುಖದ ಮುಂದೆಯೇ ಬ್ಲಾಸ್ಟ್! ಮುಂದೇನಾಯ್ತು?
HR Suraj Revanna: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ರಾಜಕೀಯ ಅಖಾಡಕ್ಕೆ ಎಂಟ್ರಿ ಅಂತಿಮ?
Published On - 10:45 am, Thu, 18 November 21