Puneeth: ಅಲ್ಪ ಜೀವಿತಾವಧಿಯಲ್ಲಿ ಅಪಾರ ಸಾಮಾಜಿಕ ಜವಾಬ್ದಾರಿ ಮೆರೆದಿದ್ದ ಚಂದನವನದ ಚಂದದ ನಟ ಪುನೀತ್
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಈ ದಂಪತಿ ಮಾಧ್ಯಮಗಳ ಮೂಲಕ ಸಹಾಯ ಯಾಚಿಸಿದ್ದರು. ಆ ವೇಳೆ ಪುನೀತ್ ಅವರು ನೆರವು ನೀಡಿದ್ದರು. ‘ಆ ವೇಳೆ ಭೇಟಿ ನೀಡಿದ ಪುನೀತ್ ರಾಜ್‌ಕುಮಾರ್ ಆ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೇ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಪೂರ್ತಿ ಬಿಲ್ 12.50 ಲಕ್ಷವನ್ನು ಭರಿಸಿದ್ದರು
ದಾವಣಗೆರೆ: ಚಂದನವನದ ಚಂದದ ನಟ ಪುನೀತ್ ರಾಜ್ ಕುಮಾರ್ (46) ವಿಧಿವಶರಾಗಿದ್ದಾರೆ. ಸ್ಯಾಂಡ್ವುಡ್ನ ಅನೇಕ ಹಿರಿಯ ಕಿರಿಯ ಕಲಾವಿದರು ಅಪ್ಪು ನಿಧನಕ್ಕೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಪ್ಪು ಅಗಲಿಕೆಯನ್ನು ಜೀರ್ಣಿಸಿಕೊಳ್ಳಲು ಮೌನರೋದನೆ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ದಾನಶೂರಕರ್ಣನಂತೆ ನಟ ಪುನೀತ್ ರಾಜ್ ಕುಮಾರ್ ತಮ್ಮ ಅಲ್ಪ ಜೀವಿತಾವಧಿಯಲ್ಲಿ ಅನೇಕರಿಗೆ ಖುದ್ದಾಗಿ ಸಹಾಯಹಸ್ತ ಚಾಚಿಸಿದ್ದರು. ಚನ್ನಗಿರಿ ತಾಲ್ಲೂಕಿನ ಕಣಸಾಲು ಬಡಾವಣೆಗೆಯ ಬಾಲಕಿ ಪ್ರೀತಿ ಅವರಿಗೆ ಸಹಾಯ ಮಾಡಿದ್ದರು ಎಂಬ ಸಂಗತಿ ಗೊತ್ತಾಗಿದೆ.
ಬಾಲಕಿಗೆ ಪುನೀತ್ ನೆರವು; ಶಸ್ತ್ರಚಿಕಿತ್ಸೆಯ ಪೂರ್ತಿ ಬಿಲ್ 12.50 ಲಕ್ಷ ಭರಿಸಿದ್ದರು ನಟನೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಪುನೀತ್ ರಾಜ್‌ಕುಮಾರ್ ಅವರು ಚನ್ನಗಿರಿ ತಾಲ್ಲೂಕಿನ ಕಣಸಾಲು ಬಡಾವಣೆಗೆಯ ಬಾಲಕಿ ಪ್ರೀತಿ ಅವರಿಗೆ ಸಹಾಯ ಮಾಡಿದ್ದರು ಎಂಬ ಸಂಗತಿ ಗೊತ್ತಾಗಿದೆ. ಕುಮಾರ್ ಹಾಗೂ ಮಂಜುಳಾ ದಂಪತಿಯ ಪುತ್ರಿಯಾದ ಪ್ರೀತಿ 2017ರಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.
ಆಗ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಈ ದಂಪತಿ ಮಾಧ್ಯಮಗಳ ಮೂಲಕ ಸಹಾಯ ಯಾಚಿಸಿದ್ದರು. ಆ ವೇಳೆ ಪುನೀತ್ ಅವರು ನೆರವು ನೀಡಿದ್ದರು. ‘ಆ ವೇಳೆ ಭೇಟಿ ನೀಡಿದ ಪುನೀತ್ ರಾಜ್‌ಕುಮಾರ್ ಆ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೇ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಪೂರ್ತಿ ಬಿಲ್ 12.50 ಲಕ್ಷವನ್ನು ಭರಿಸಿದ್ದರು’ ಪ್ರೀತಿ ಅವರ ಮಾವ ಹನುಮಂತಪ್ಪ ಗೆ ತಿಳಿಸಿದರು.
Puneeth Rajkumar No More : ಅಪ್ಪು ಪಾರ್ಥಿವ ಶರೀರದ ಮುಂದೆ ರಾಘಣ್ಣ ಭಾವುಕ |Tv9Kannada|
(sandalwood actor Puneeth Rajkumar had reimbursed full surgery bill of channagiri girl in manipal hospital bangalore)
Published On - 10:15 am, Sat, 30 October 21