ನಟಿ ರಾಗಿಣಿ ಇನ್ನೂ 5 ದಿನ ಸಿಸಿಬಿ ವಶಕ್ಕೆ: ಮ್ಯಾಜಿಸ್ಟ್ರೇಟ್‌ ಕೋರ್ಟ್ ಆದೇಶ

[lazy-load-videos-and-sticky-control id=”zE1COkuNDdA”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳಿಂದ CCB ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನ್ಯಾಯಾಧೀಶರಾದ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇದರಿಂದ ರಾಗಿಣಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಇನ್ನೂ 5 ದಿನ ತನಿಖೆ ಮುಂದುವರಿಸಲಿದ್ದಾರೆ.  ತನಿಖೆ ಮುಗಿದ ಬಳಿಕ, 1ನೇ ಎಸಿಎಂಎಂ ಕೋರ್ಟ್‌ಗೆ ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ. ಇದಕ್ಕೂ ಮುನ್ನ ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡುವಂತೆ CCB […]

ನಟಿ ರಾಗಿಣಿ ಇನ್ನೂ 5 ದಿನ ಸಿಸಿಬಿ ವಶಕ್ಕೆ: ಮ್ಯಾಜಿಸ್ಟ್ರೇಟ್‌ ಕೋರ್ಟ್ ಆದೇಶ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 07, 2020 | 5:43 PM

[lazy-load-videos-and-sticky-control id=”zE1COkuNDdA”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳಿಂದ CCB ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನ್ಯಾಯಾಧೀಶರಾದ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇದರಿಂದ ರಾಗಿಣಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಇನ್ನೂ 5 ದಿನ ತನಿಖೆ ಮುಂದುವರಿಸಲಿದ್ದಾರೆ.  ತನಿಖೆ ಮುಗಿದ ಬಳಿಕ, 1ನೇ ಎಸಿಎಂಎಂ ಕೋರ್ಟ್‌ಗೆ ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ.

ಇದಕ್ಕೂ ಮುನ್ನ ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡುವಂತೆ CCB ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಡ್ರಗ್ಸ್ ಪ್ರಕರಣ ಸಂಬಂಧ ನಟಿ ರಾಗಿಣಿಯ ವಿಚಾರಣೆ ನಡೆಸುವ ಅಗತ್ಯವಿದೆ. ರಾಗಿಣಿ ದ್ವಿವೇದಿ CCB ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ನಾವು ಕೇಳಿದ ಪ್ರಶ್ನೆಗಳಿಗೆ ಅವರು ಸರಿಯಾಗಿ ಉತ್ತರಿಸುತ್ತಿಲ್ಲ ಎಂದು ಅಧಿಕಾರಿಗಳು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದರು ಎಂದು ಹೇಳಲಾಗಿದೆ.

ನ್ಯಾಯಾಧೀಶರ ಮುಂದೆ ರಾಗಿಣಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ CCB ಪೊಲೀಸರು ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಿಂದಲೇ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಿದ್ದರು.

ಕಸ್ಟಡಿ ಅವಧಿ ಮುಗಿದ ನಂತರ ಜಾಮೀನು ಅರ್ಜಿ ಬಗ್ಗೆ ತೀರ್ಮಾನ:  ಈ ಮಧ್ಯೆ, ನಟಿ ರಾಣಿಗಿ ಅವರು ಎನ್‌ಡಿಪಿಎಸ್‌ ವಿಶೇಷ‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿ ವಿಚಾರಣೆ ಬಾಕಿ ಇದೆ. ಸದ್ಯಕ್ಕೆ, ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡುವ ಸಾಧ್ಯತೆಯಿದೆ. ಆ ಕಡೆ, ಪೊಲೀಸ್‌ ಕಸ್ಟಡಿ ಅವಧಿ ಮುಗಿಯುವವರೆಗೂ ಅರ್ಜಿ ತೀರ್ಮಾನವಿಲ್ಲ. ಕಸ್ಟಡಿ ಅವಧಿ ಮುಗಿದ ನಂತರ ಜಾಮೀನು ಅರ್ಜಿ ಬಗ್ಗೆ ತೀರ್ಮಾನವಾಗಲಿದೆ.‌

Published On - 2:29 pm, Mon, 7 September 20

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್