AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್

Amulya blessed with twin babies: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಅವರ ಪತಿ ಜಗದೀಶ್ ಆರ್ ಚಂದ್ರ ಮಾಹಿತಿ ನೀಡಿದ್ದಾರೆ.

Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್
ಅಮೂಲ್ಯ, ಜಗದೀಶ್
TV9 Web
| Edited By: |

Updated on:Mar 01, 2022 | 2:33 PM

Share

ಸ್ಯಾಂಡಲ್​ವುಡ್ ನಟಿ ಅಮೂಲ್ಯ (Amulya) ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ (Jagdish R Chandra) ಮಾಹಿತಿ ನೀಡಿದ್ದಾರೆ. ಫೇಸ್​ಬುಕ್​ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದಿದ್ದಾರೆ. ಅಮೂಲ್ಯ ಅವರು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸ್ಯಾಂಡಲ್​ವುಡ್ ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ. ಅಭಿಮಾನಿಗಳು ಕೂಡ ನೆಚ್ಚಿನ ನಟಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಜಗದೀಶ್ ಆರ್ ಚಂದ್ರ ಹಂಚಿಕೊಂಡ ಮಾಹಿತಿ:

ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ‘ಚೆಲುವಿನ ಚಿತ್ತಾರ’ದ ಮೂಲಕ ನಾಯಕಿಯಾದ ಅವರು, ಅದರಲ್ಲಿನ ಪಾತ್ರ ಪೋಷಣೆಗೆ ಅಪಾರ ಜನಪ್ರಿಯತೆ ಗಳಿಸಿದರು. ಸಣ್ಣ ವಯಸ್ಸಿನಲ್ಲಿಯೇ ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಂಡ ಕೀರ್ತಿ ಅವರದ್ದು. ಗಣೇಶ್​, ಯಶ್​, ಲವ್ಲೀ ಸ್ಟಾರ್​ ಪ್ರೇಮ್​, ಕೃಷ್ಣ ಅಜಯ್​ ರಾವ್​, ದುನಿಯಾ ವಿಜಯ್​ ಮುಂತಾದ ಸ್ಟಾರ್​ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್​ ರೈ ಜತೆ ತೆರೆಹಂಚಿಕೊಂಡು ಅಪಾರ ಮೆಚ್ಚುಗೆ ಗಳಿಸಿದರು.

ಚಿತ್ರರಂಗದಲ್ಲಿ ​ಬೇಡಿಕೆ ಇರುವ ನಟಿಯಾಗಿ ಗುರುತಿಸಿಕೊಂಡಿದ್ದ ಅಮೂಲ್ಯ, 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್​ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್​ ಮೂಲಕ ಅಮೂಲ್ಯ ಕೆಲ ಸಮಯದ ಹಿಂದೆ ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್​ ಆಗಿ ನಟಿಸಿದ ಕೊನೇ ಸಿನಿಮಾ ‘ಮಾಸ್ತಿಗುಡಿ’. 2017ರಲ್ಲಿ ತೆರೆಕಂಡ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಪ್ರಸ್ತುತ ಅಮೂಲ್ಯ ಹಾಗೂ ಜಗದೀಶ್ ಪೋಷಕರಾಗಿದ್ದು, ಅಭಿಮಾನಿಗಳು ಶುಭಾಶಯ ಹೇಳುತ್ತಿದ್ದಾರೆ.

ಇದನ್ನೂ ಓದಿ:

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಅಮೂಲ್ಯಗೆ ಬೇಬಿ ಶವರ್; ರಾಧಿಕಾ ಪಂಡಿತ್, ಗಣೇಶ್ ಸೇರಿ ಹಲವರು ಭಾಗಿ, ಇಲ್ಲಿವೆ ಫೋಟೋಗಳು

Published On - 12:26 pm, Tue, 1 March 22

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್