ನಿರ್ದೇಶಕರಿಗೂ ಪ್ರೋತ್ಸಾಹ ಧನ ನೀಡಿ; ಸರ್ಕಾರಕ್ಕೆ ಮನವಿ ಮಾಡಿದ ಟೆಶಿ ವೆಂಕಟೇಶ್​

ಇತ್ತೀಚೆಗೆ ಸರ್ಕಾರ ವಿಶೇಷ ಪ್ಯಾಕೇಜ್​ ಘೋಷಣೆ ಮಾಡಿತ್ತು. ಈ ಪ್ಯಾಕೇಜ್​ನಲ್ಲಿ ಹೂವು ಬೆಳೆಗಾರರು, ಆಟೋ ಚಾಲಕರಿಗೆ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಪರಿಹಾರ ಘೋಷಣೆ ಮಾಡಲಾಗಿತ್ತು.

ನಿರ್ದೇಶಕರಿಗೂ ಪ್ರೋತ್ಸಾಹ ಧನ ನೀಡಿ; ಸರ್ಕಾರಕ್ಕೆ ಮನವಿ ಮಾಡಿದ ಟೆಶಿ ವೆಂಕಟೇಶ್​
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
Rajesh Duggumane

| Edited By: Madan Kumar

May 20, 2021 | 4:23 PM

ಕೊವಿಡ್​ ನಿಯಂತ್ರಣಕ್ಕೆ ಹೇರಲಾದ ಲಾಕ್​ಡೌನ್​ನಿಂದ ಸಾಕಷ್ಟು ಕ್ಷೇತ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 1,250 ಕೋಟಿ ರೂಪಾಯಿ ಪ್ಯಾಕೇಜ್​ ಘೋಷಣೆ ಮಾಡಿತ್ತು. ಆದರೆ, ಈ ಪ್ಯಾಕೇಜ್​ನಲ್ಲಿ ಸ್ಯಾಂಡಲ್​ವುಡ್​ ನಿರ್ದೇಶಕರಿಗೆ ಯಾವುದೇ ಪರಿಹಾರ ನೀಡುವ ಬಗ್ಗೆ ಉಲ್ಲೇಖ ಇರಲಿಲ್ಲ. ಅಲ್ಲದೆ, ನಿರ್ದೇಶಕರ ಸಂಘದ ಸದಸ್ಯರಿಗೆ ಆರ್ಥಿಕ ಸಹಾಯ ಮಾಡುವಂತೆ ಸಂಘದ ಅಧ್ಯಕ್ಷ ಟೆಶಿ ವೆಂಕಟೇಶ್​ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಸರ್ಕಾರ ವಿಶೇಷ ಪ್ಯಾಕೇಜ್​ ಘೋಷಣೆ ಮಾಡಿತ್ತು. ಈ ಪ್ಯಾಕೇಜ್​ನಲ್ಲಿ ಹೂವು ಬೆಳೆಗಾರರು, ಆಟೋ ಚಾಲಕರಿಗೆ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಪರಿಹಾರ ಘೋಷಣೆ ಮಾಡಲಾಗಿತ್ತು. ಅಲ್ಲದೆ, ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದರು. ಆದರೆ, ನಿರ್ದೇಶಕರಿಗೆ ಪರಿಹಾರ ಕೊಡುವ ಬಗ್ಗೆ ಎಲ್ಲಿಯೂ ಉಲ್ಲೇಖ ಮಾಡಿರಲಿಲ್ಲ.

ಸರ್ಕಾರ ನಿರ್ದೇಶಕರ ಸಂಘದ ಸದಸ್ಯರಿಗೆ ಆರ್ಥಿಕ ಸಹಾಯ ಮಾಡಬೇಕು. ಸಂಕಷ್ಟದಲ್ಲಿರೋ ನಮಗೆ 10 ಸಾವಿರ ಪ್ರೋತ್ಸಾಹ ಧನ ನೀಡಿ ಎಂದು ಕೋರಿದ್ದೆವು. ಆದರೆ, ಅದನ್ನು ಸರ್ಕಾರ ಪರಿಗಣಿಸಿಲ್ಲ. ಇದನ್ನು ಸರ್ಕಾರ ಪರಿಗಣಿಸಬೇಕು ಎಂದು ಟೆಶಿ ವೆಂಕಟೇಶ್​ ಕೋರಿದ್ದಾರೆ.

ಇತ್ತೀಚೆಗೆ ಜಿಮ್​ ಮಾಲೀಕರ ಸಂಘದವರು ಸರ್ಕಾರದ ಮುಂದೆ ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಜಿಮ್ ಮಾಲೀಕರಿಗೆ ಹತ್ತು ರೂಪಾಯಿ ಕೂಡ ಆದಾಯ ಬರುತ್ತಿಲ್ಲ. ಇದರಿಂದಾಗಿ ಮನೆ ಬಾಡಿಗೆ, ಪವರ್ ಬಿಲ್, ವಾಟರ್ ಬಿಲ್ ಕಟ್ಟೋಕೆ ಸಾಕಷ್ಟು ಕಷ್ಟವಾಗುತ್ತಿದೆ. ಸರ್ಕಾರ ಜಿಮ್ ಮಾಲೀಕರಿಗೆ ಒಂದು ಪ್ಯಾಕೇಜ್ ಘೋಷಿಸಬೇಕು ಎಂದು ಕೋರಿದ್ದರು. ಈ ಬೆನ್ನಲ್ಲೇ ನಿರ್ದೇಶಕ ಸಂಘದವರೂ ಇದೇ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ರಾಜ್​ಕುಮಾರ್​ಗೆ ಯೋಗಾಸನ ಹೇಳಿಕೊಟ್ಟ ಹೊನ್ನಪ್ಪ ನಾಯ್ಕರ್​ ಕೊವಿಡ್​​ನಿಂದ ನಿಧನ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada