Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ

777 Charlie Tax Free: ಖ್ಯಾತ ನಿರ್ದೇಶಕ ಮಂಸೋರೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ ಮೂಲಕ ಸರ್ಕಾರದ ತಾರತಮ್ಯವನ್ನು ಅವರು ಪ್ರಶ್ನಿಸಿದ್ದಾರೆ.

‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
ಮಂಸೋರೆ, ರಕ್ಷಿತ್ ಶೆಟ್ಟಿ, ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಮದನ್​ ಕುಮಾರ್​

Updated on:Jun 19, 2022 | 10:23 AM

ಬಾಕ್ಸ್​ ಆಫೀಸ್​ನಲ್ಲಿ ಯಶಸ್ಸು ಕಂಡಿರುವ ‘777 ಚಾರ್ಲಿ’ (777 Charlie) ಸಿನಿಮಾಗೆ ಕರ್ನಾಟಕ ಸರ್ಕಾರದಿಂದ ತೆರಿಗೆ ವಿನಾಯಿತಿ ಸಿಕ್ಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka CM Basavaraj Bommai) ಅವರು ಈ ಚಿತ್ರವನ್ನು ನೋಡಿದ್ದರು. ನಾಯಿ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆಯನ್ನು ತೆರೆ ಮೇಲೆ ನೋಡಿ ಅವರು ಭಾವುಕರಾಗಿದ್ದರು. ಅದರ ಬೆನ್ನಲ್ಲೆ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಕೇವಲ ಒಂದು ಸಿನಿಮಾಗೆ ಮಾತ್ರ ಈ ರೀತಿ ವಿನಾಯಿತಿ ನೀಡಿದ್ದರ ಬಗ್ಗೆ ಖ್ಯಾತ ನಿರ್ದೇಶಕ ಮಂಸೋರೆ (Mansore) ಅವರು ಪ್ರಶ್ನೆ ಮಾಡಿದ್ದಾರೆ. ಇನ್ನುಳಿದ ಕನ್ನಡ ಸಿನಿಮಾಗಳಿಗೂ ಇದೇ ರೀತಿಯ ಬೆಂಬಲ ಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಅವರು ಬಹಿರಂಗ ಪತ್ರದಲ್ಲಿ ಬರೆದಿದ್ದಾರೆ. ಮಂಸೋರೆ ಬರೆದ ಪತ್ರ ಈ ರೀತಿ ಇದೆ..

ಕರ್ನಾಟಕದ ಮುಖ್ಯಮಂತ್ರಿಗಳಾದ Chief Minister of Karnataka ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ.

ನನ್ ಹೆಸರು ಮಂಸೋರೆ, ಕನ್ನಡ ಸಿನಿಮಾ ನಿರ್ದೇಶಕ. ತಾವು ಕನ್ನಡ ಸಿನಿಮಾ, ‘777 ಚಾರ್ಲಿ’ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ ಶೇ.100 ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನಿಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನಿಮಾಗೂ ತಾವು ಶೇ.100 ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು.

ಇದನ್ನೂ ಓದಿ
Image
777 Charlie Movie: ‘777 ಚಾರ್ಲಿ’ ಸಿನಿಮಾಗೆ ಬಂಪರ್ ಆಫರ್​; ತೆರಿಗೆ ವಿನಾಯಿತಿ ನೀಡಿದ ಸರ್ಕಾರ
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
Tejasvi Surya: ‘777 ಚಾರ್ಲಿ’ ನೋಡಿದ ತೇಜಸ್ವಿ ಸೂರ್ಯ; ರಕ್ಷಿತ್​ ಶೆಟ್ಟಿ ಸಿನಿಮಾ ಬಗ್ಗೆ ಸಂಸದ ನೀಡಿದ ವಿಮರ್ಶೆ ಇಲ್ಲಿದೆ..
Image
777 Charlie: ನಾಯಿಯ ಸಿನಿಮಾ ನೋಡಲು ನಾಯಿಗೇ ಅವಕಾಶ ಇಲ್ಲ; ಡಯಾನಾಗೆ ತೀವ್ರ ನಿರಾಸೆ

ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ. ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನಿಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನಿಮಾಗಳಿಗೆ ಶೇ.100 ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ? ಕನ್ನಡದ ಸಿನಿಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ?

ಇದನ್ನೂ ಓದಿ: ಕೌತುಕ ಮೂಡಿಸಿದ ‘19.20.21’ ಕನ್ನಡ ಸಿನಿಮಾ; ಮಂಸೋರೆ ಹೊಸ ಚಿತ್ರ ಅನೌನ್ಸ್​

ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನಿಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ. ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ. ವೈಕುಂಠರಾಜು ಅವರ ಸಿನಿಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ  ಉಲ್ಲೇಖಿಸಲಾಗಿದೆ). ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನಿಮಾಗಳಿಗೂ ಶೇ.100 ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ?

ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನಿಮಾಗೆ ಮಾತ್ರ ಶೇ.100 ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರಾ ಎಂದು ತಿಳಿಯಲು ಡಾ. ಬಿ.ಆರ್. ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳುತ್ತಿದ್ದೇನೆ, ದಯವಿಟ್ಟು ತಿಳಿಸಿ.

ಇದನ್ನೂ ಓದಿ: ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ

ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನಿಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾಹರಣೆಗೆ ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನಿಮಾ ಇದೆ. ಜೊತೆಗೆ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನಿಮಾಗಳು ಅತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನಿಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ ಶೇ.100 ತೆರಿಗೆ ವಿನಾಯಿತಿ ಕೇವಲ ಒಂದು ಸಿನಿಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ.

ಚಾರ್ಲಿ ಸಿನಿಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನಿಮಾಗೆ ಮಾತ್ರ ಶೇ.100 ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್​ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನಿಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ.

ಸಿನಿಮಾ ನಿರ್ದೇಶಕ

ಮಂಸೋರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:23 am, Sun, 19 June 22

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್