Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ

ಗೋವಿಂದಪುರ ಡ್ರಗ್ಸ್​ ಕೇಸ್​ಗೆ ಸಂಬಂಧಿಸಿದಂತೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸೋನಿಯಾ, ಡಿಜೆ ವಚನ್​ ಚಿನ್ನಪ್ಪ, ಉದ್ಯಮಿ ಭರತ್​ ಮುಂತಾದವರ ಮನೆಯಲ್ಲಿ ಶೋಧಕಾರ್ಯ ನಡೆದಿದೆ.

ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ
ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ಪೊಲೀಸರ ವಶಕ್ಕೆ
Follow us
TV9 Web
| Updated By: ಮದನ್​ ಕುಮಾರ್​

Updated on:Aug 30, 2021 | 12:51 PM

ಚಿತ್ರರಂಗದ ಜೊತೆ ನಂಟು ಹೊಂದಿರುವ ಡ್ರಗ್ಸ್​ ದಂಧೆಯ ಜಾಲ ದೊಡ್ಡದಾಗಿದೆ. ತನಿಖೆ ನಡೆಸಿದಂತೆಲ್ಲ ಹೊಸ ಹೊಸ ಸೆಲೆಬ್ರಿಟಿಗಳ ಹೆಸರುಗಳು ಹೊರಬರುತ್ತಿವೆ. ಸೋಮವಾರ (ಆ.30) ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವಿಂದಪುರ ಡ್ರಗ್ಸ್​ ಕೇಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ. ಸೋನಿಯಾ​, ಡಿಜೆ ವಚನ್​ ಚಿನ್ನಪ್ಪ, ಉದ್ಯಮಿ ಭರತ್​ ಮುಂತಾದವರ ಮನೆಯ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.

ಡ್ರಗ್ ಪೆಡ್ಲರ್ ಥಾಮಸ್ ಈ ಹಿಂದೆ ನೀಡಿದ್ದ ಮಾಹಿತಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್ ಮುಂತಾದ ಕಡೆ ಇರುವ ಸೆಲೆಬ್ರಿಟಿಗಳ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಾದಕ ವಸ್ತುಗಳು ಪತ್ತೆ ಆಗಿದ್ದು, ಹಲವರಿಗೆ  ಬಂಧನ ಭೀತಿ ಎದುರಾಗಿದೆ.

ತಮ್ಮ ಫ್ಲ್ಯಾಟ್‌ನಲ್ಲಿ ಉದ್ಯಮಿ ಭರತ್‌ ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದರು ಎನ್ನಲಾಗಿದೆ. ಸೆಲೆಬ್ರಿಟಿಗಳ ಜೊತೆಗೂ ಅವರು ಸಂಪರ್ಕ ಹೊಂದಿದ್ದರು. ಕಾರ್ಯಚರಣೆ ಬಳಿಕ ಅವರನ್ನು ಗೋವಿಂದಪುರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಡ್ರಗ್ಸ್ ಪೆಡ್ಲರ್ ಥಾಮಸ್ ಜೊತೆ ಸಂಪರ್ಕದಲ್ಲಿದ್ದರು ಎಂಬ ಹಿನ್ನೆಲೆಯಲ್ಲಿ ಈ ದಾಳಿ ಮಾಡಲಾಗಿದೆ. ಡಿಜೆ ವಚನ್​ ಚಿನ್ನಪ್ಪ ಮನೆಯಲ್ಲಿ 50 ಗ್ರಾಂ ಗಾಂಜಾ ಪತ್ತೆ ಆಗಿದ್ದು, ಅವರನ್ನೂ ವಶಕ್ಕೆ ಪಡೆಯಲಾಗಿದೆ.

ಸೋನಿಯಾ ನಿವಾಸದಲ್ಲಿ ಪೊಲೀಸರಿಗೆ 40 ಗ್ರಾಂ ಗಾಂಜಾ ಪತ್ತೆ ಆಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಇರಲಿಲ್ಲ. ನಾಪತ್ತೆ ಆಗಿದ್ದ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದರು. ಖಾಸಗಿ ಹೋಟೆಲ್​ನ ವಾಶ್​ರೂಮ್​ನಲ್ಲಿ ಅವಿತು ಕುಳಿತಿದ್ದ ಅವರನ್ನು ನಂತರ ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಮೂವರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:

ಡ್ರಗ್ಸ್​ ಕೇಸ್​: ರಾಣಾ ದಗ್ಗುಬಾಟಿ, ರಾಕುಲ್, ರವಿತೇಜ ಸೇರಿ ಟಾಲಿವುಡ್​ನ 8 ಸೆಲೆಬ್ರಿಟಿಗಳಿಗೆ ಇಡಿ ಸಮನ್ಸ್​

Armaan Kohli: ಡ್ರಗ್ಸ್​ ಕೇಸ್​ ಆರೋಪಿ ಅರ್ಮಾನ್​ ಕೊಹ್ಲಿ ಯಾರು? ಹಿನ್ನೆಲೆ ಏನು? ಮಾಡಿಕೊಂಡ ವಿವಾದ ಒಂದೆರಡಲ್ಲ

Published On - 9:04 am, Mon, 30 August 21

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ