AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harish Rai Death: ಗೆದ್ದ ಕ್ಯಾನ್ಸರ್, ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಖಳನಟ ಹರೀಶ್ ರಾಯ್ ನಿಧನ: ‘ಓಂ’, ‘ನಲ್ಲ’ ಇತ್ತೀಚೆಗಿನ ಬ್ಲಾಕ್ ಬಸ್ಟರ್ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ಖಳನಟ ಹರೀಶ್ ರಾಯ್ ಅವರು ಇಂದು (ನವೆಂಬರ್ 06) ನಿಧನ ಹೊಂದಿದ್ದಾರೆ. ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಚಿಕಿತ್ಸೆಗಾಗಿ ಹಲವು ನಟ-ನಟಿಯರು ಆರ್ಥಿಕ ಸಹಾಯ ಮಾಡಿದ್ದರು.

Harish Rai Death: ಗೆದ್ದ ಕ್ಯಾನ್ಸರ್, ಖ್ಯಾತ ಖಳನಟ ಹರೀಶ್ ರಾಯ್ ನಿಧನ
Harish Roy
ಮಂಜುನಾಥ ಸಿ.
| Updated By: Digi Tech Desk|

Updated on:Nov 06, 2025 | 12:14 PM

Share

ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.

ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡಿರುವುದಾಗಿ ಹರೀಶ್ ರಾಯ್ ಹೇಳಿಕೊಂಡಿದ್ದರು.

ಇದನ್ನೂ ಓದಿ:ದರ್ಶನ್ ಸ್ಥಿತಿ ನೆನೆದು ಕಣ್ಣೀರು ಹಾಕಿದ ನಟ ಹರೀಶ್ ರಾಯ್

ಹಲವಾರು ಮಂದಿ ಸಿನಿಮಾ ಮಂದಿ ಹೋಗಿ ಹರೀಶ್ ರಾಯ್ ಅವರನ್ನು ಮಾತನಾಡಿಸಿ ತಾವು ಜೊತೆಗೆ ಇರುವುದಾಗಿ ಭರವಸೆ ನೀಡಿದ್ದರು. ಹಲವು ಯೂಟ್ಯೂಬರ್​​ಗಳು ಸಹ ಹೋಗಿದ್ದರು. ಕಳೆದ ಕೆಲ ತಿಂಗಳುಗಳಿಂದಲೂ ಸತತವಾಗಿ ಚಿಕಿತ್ಸೆಯನ್ನು ಪಡೆಯುತ್ತಲೇ ಇದ್ದರು ಹರೀಶ್ ರಾಯ್. ಇದೀಗ ಕೊನೆಗೆ ನಿಧನ ಹೊಂದಿದ್ದಾರೆ.

ಕರಾವಳಿ ಮೂಲಕ ಹರೀಶ್ ರಾಯ್ ಅವರು 90ರ ದಶಕದ ಹಲವಾರು ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ ಹರೀಶ್ ರಾಯ್ ಅವರು ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನಸಿಕೊಂಡು ಕಣ್ಣೀರು ಹಾಕಿದ್ದರು. ಹರೀಶ್ ರಾಯ್ ಅವರು ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ರಾಯ್ ಅವರು ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್ 1 ಹಾಗೂ ಕೆಜಿಎಫ್​​ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:53 am, Thu, 6 November 25