Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್ ಜೊತೆ 27 ಸಿನಿಮಾ ಮಾಡಿದ್ದ ಖ್ಯಾತ ನಿರ್ದೇಶಕ ಎಟಿ ರಘು ನಿಧನ

ಖ್ಯಾತ ಕನ್ನಡ ಚಿತ್ರ ನಿರ್ದೇಶಕ ಎ.ಟಿ. ರಘು ಅವರು 76 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 'ಮಂಡ್ಯದ ಗಂಡು' ಸೇರಿದಂತೆ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಚಿತ್ರರಂಗ ಶೋಕ ಸಾಗರದಲ್ಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿನಿಪ್ರಿಯರು ಪ್ರಾರ್ಥಿಸಿದ್ದಾರೆ.

ಅಂಬರೀಷ್ ಜೊತೆ 27 ಸಿನಿಮಾ ಮಾಡಿದ್ದ ಖ್ಯಾತ ನಿರ್ದೇಶಕ ಎಟಿ ರಘು ನಿಧನ
ರಘು-ಅಂಬರೀಷ್
Follow us
ರಾಜೇಶ್ ದುಗ್ಗುಮನೆ
|

Updated on: Mar 21, 2025 | 7:34 AM

ಸ್ಯಾಂಡಲ್​ವುಡ್​ಗೆ ಶುಕ್ರವಾರವೇ ಒಂದು ಶಾಕಿಂಗ್ ಸುದ್ದಿ ಸಿಕ್ಕಿದೆ. ಸಿನಿಮಾಗಳು ರಿಲೀಸ್ ಶುಭ ಶುಕ್ರವಾರದ ಆರಂಭಕ್ಕೂ ಮೊದಲೇ ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಎಟಿ ರಘು (AT Raghu) ನಿಧನ ಹೊಂದಿದ್ದಾರೆ. ‘ಮಂಡ್ಯದ ಗಂಡು’ ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎಟಿ ರಘು ಅವರು ನಿರ್ದೇಶನ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿನಿಪ್ರಿಯರು ಕೋರಿದ್ದಾರೆ.

ರಘು ಅವರಿಗೆ 76 ವರ್ಷ ವಯಸ್ಸಾಗಿತ್ತು. ಗುರುವಾರ (ಮಾರ್ಚ್​ 20) ರಾತ್ರಿ ಅವರು ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಾ ಇದ್ದರು. ನಿರಂತರವಾಗಿ ಅವರು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಸದ್ಯ ಬೆಂಗಳೂರಿನ ಆರ್​ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದೆ. ಇಂದು (ಮಾರ್ಚ್ 21) ಮದ್ಯಾಹ್ನ 2 ಗಂಟೆ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಎಟಿ ರಘು ಅವರು ಹುಟ್ಟಿದ್ದು ಕೊಡಗಿನಲ್ಲಿ. ಕೊಡವ ಸಮುದಾಯಕ್ಕೆ ಸೇರಿದ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಿರ್ಮಾಪಕರನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡರು. ಅವರು ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ
Image
ವಿಚ್ಛೇದನ ಪಡೆದ ದಿನ ಹಾಡಿನ ಮೂಲಕ ಅನೈತಿಕ ಸಂಬಂಧದ ಬಗ್ಗೆ ಮಾತನಾಡಿದ ಧನಶ್ರೀ
Image
ಬೆಟ್ಟಿಂಗ್​ಗೆ ಪ್ರಚಾರ: ಪ್ರಕಾಶ್ ರೈ, ವಿಜಯ್ ಸೇರಿ ಹಲವು ನಟರ ಮೇಲೆ ಪ್ರಕರಣ
Image
ಬರ್ತಿದೆ ‘ಚಿ: ಸೌಜನ್ಯ’ ಸಿನಿಮಾ; ನೈಜ ಘಟನೆ ಹೇಳ ಹೊರಟ ಹರ್ಷಿಕಾ
Image
ಒಟಿಟಿಯಲ್ಲಿ ಕಾಲೇಜ್ ಕಹಾನಿ ಕಥೆ; ಫನ್​ ಇರೋ ಸಿನಿಮಾನ ಮಿಸ್ ಮಾಡಬೇಡಿ

1980ರಲ್ಲಿ ರಿಲೀಸ್ ಆದ ‘ನ್ಯಾಯ ನೀತಿ ಧರ್ಮ’ ಅವರ ನಿರ್ದೇಶನದ ಮೊದಲ ಸಿನಿಮಾ. ಅಂಬರೀಷ್, ಆರತಿ, ದ್ವಾರಕೀಶ್ ಅವರು ಚಿತ್ರದಲ್ಲಿ ನಟಿಸಿದರು. ಈ ಸಿನಿಮಾ ಮೂಲಕ ಅಂಬರೀಷ್ ಜೊತೆ ರಘು ಅವರಿಗೆ ಒಳ್ಳೆಯ ಒಡನಾಟ ಬೆಳೆಯಿತು. ಅಂಬರೀಷ್ ನಟನೆಯ ‘ಆಶ’, ‘ಅವಳ ನೆರಳು’, ‘ಮಂಡ್ಯದ ಗಂಡು’, ‘ಮಿಡಿದ ಹೃದಯಗಳು’ ಸೇರಿ 27 ಸಿನಿಮಾಗಳನ್ನು ರಘು ನಿರ್ದೇಶನ ಮಾಡಿದ್ದರು ಅನ್ನೋದು ವಿಶೇಷ.

ಇದನ್ನೂ ಓದಿ: ವಿಚ್ಛೇದನ ಪಡೆದ ದಿನವೇ ಹಾಡಿನ ಮೂಲಕ ಪತಿಯ ಅನೈತಿಕ ಸಂಬಂಧದ ಬಗ್ಗೆ ಹೇಳಿದ ಧನಶ್ರೀ ವರ್ಮಾ

ರಘು ಅವರು ಹಿಂದಿ, ಮಲಯಾಳಂ ಚಿತ್ರರಂಗದಲ್ಲೂ ಕೆಲಸ ಮಾಡಿದ್ದಾರೆ. ‘ಆಶ’ ಚಿತ್ರವನ್ನು ಅವರು ಹಿಂದಿಗೆ ‘ಮೆರಿ ಅದಾಲತ್’ ಹೆಸರಿನಲ್ಲಿ ರಿಮೇಕ್ ಮಾಡಿದರು. ಇದರಲ್ಲಿ ರಜನಿಕಾಂತ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ 1984ರಲ್ಲಿ ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.