ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು  ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು. 

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ
ಮೃತ ಮಂಜುನಾಥ್​
Follow us
ರಾಜೇಶ್ ದುಗ್ಗುಮನೆ
|

Updated on:Apr 18, 2021 | 6:22 PM

ಕೊರೊನಾ ವೈರಸ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕರ್ನಾಟಕದಲ್ಲಿ ನಿನ್ನೆ (ಏಪ್ರಿಲ್​ 17) ಒಂದೇ ದಿನ 17 ಸಾವಿರ ಹೊಸ ಕೊರೊನಾ ಕೇಸ್​ಗಳು ಬಂದರೆ, ಭಾರತದಲ್ಲಿ ಇಂದು (ಏಪ್ರಿಲ್​ 18) 2.61 ಲಕ್ಷ ಕೊವಿಡ್​​ ಕೇಸ್​ಗಳು ಪತ್ತೆ ಆಗಿವೆ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗುತ್ತಿದೆ. ಹೀಗಿರುವಾಗಲೇ ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಮೃತಪಟ್ಟಿದ್ದಾರೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಸಂಯುಕ್ತ-2’ ಸಿನಿಮಾಗಳಿಗೆ ಮಂಜುನಾಥ್​ ಬಂಡವಾಳ ಹೂಡಿದ್ದರು. 2019ರಲ್ಲಿ ತೆರೆಕಂಡಿದ್ದ ಹಾಸ್ಯ ಭರಿತ ಕೆಮಿಸ್ಟ್ರಿ ಆಫ್​ ಕರಿಯಪ್ಪ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 0%ಲವ್ ಸಿನಿಮಾವನ್ನು ನಿರ್ಮಿಸಿ, ಅದರಲ್ಲಿ ನಟಿಸುತ್ತಿದ್ದರು. ಆದರೆ, ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳನ್ನು ಮುಂದೂಡಲಾಗಿತ್ತು. ಈಗ ಈ ಸಿನಿಮಾ ಪೂರ್ಣಗೊಳ್ಳುವುದರೊಳಗೆ ಅವರು ಮೃತಪಟ್ಟಿದ್ದಾರೆ.

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು  ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು.

ರಾಜ್ಯದಲ್ಲಿಂದು ಶನಿವಾರ (ಏಪ್ರಿಲ್​ 18) 17,489 ಜನರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,41,998ಕ್ಕೆ (11.41 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 80 ಜನರ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,270 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,09,549 ಜನರು ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. 1,19,160 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:  Corona Deaths In Karnataka : ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ 78 ಜನರ ಸಾವು.!

ಕರ್ನಾಟಕದಲ್ಲಿ ಸಮುದಾಯಕ್ಕೆ ಕೊರೊನಾ ಸೋಂಕು: ಡಾ.ಕೆ.ಸುಧಾಕರ್

Published On - 5:25 pm, Sun, 18 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ