ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು  ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು. 

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ
ಮೃತ ಮಂಜುನಾಥ್​

Updated on: Apr 18, 2021 | 6:22 PM

ಕೊರೊನಾ ವೈರಸ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕರ್ನಾಟಕದಲ್ಲಿ ನಿನ್ನೆ (ಏಪ್ರಿಲ್​ 17) ಒಂದೇ ದಿನ 17 ಸಾವಿರ ಹೊಸ ಕೊರೊನಾ ಕೇಸ್​ಗಳು ಬಂದರೆ, ಭಾರತದಲ್ಲಿ ಇಂದು (ಏಪ್ರಿಲ್​ 18) 2.61 ಲಕ್ಷ ಕೊವಿಡ್​​ ಕೇಸ್​ಗಳು ಪತ್ತೆ ಆಗಿವೆ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗುತ್ತಿದೆ. ಹೀಗಿರುವಾಗಲೇ ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಮೃತಪಟ್ಟಿದ್ದಾರೆ.

‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಸಂಯುಕ್ತ-2’ ಸಿನಿಮಾಗಳಿಗೆ ಮಂಜುನಾಥ್​ ಬಂಡವಾಳ ಹೂಡಿದ್ದರು. 2019ರಲ್ಲಿ ತೆರೆಕಂಡಿದ್ದ ಹಾಸ್ಯ ಭರಿತ ಕೆಮಿಸ್ಟ್ರಿ ಆಫ್​ ಕರಿಯಪ್ಪ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 0%ಲವ್ ಸಿನಿಮಾವನ್ನು ನಿರ್ಮಿಸಿ, ಅದರಲ್ಲಿ ನಟಿಸುತ್ತಿದ್ದರು. ಆದರೆ, ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳನ್ನು ಮುಂದೂಡಲಾಗಿತ್ತು. ಈಗ ಈ ಸಿನಿಮಾ ಪೂರ್ಣಗೊಳ್ಳುವುದರೊಳಗೆ ಅವರು ಮೃತಪಟ್ಟಿದ್ದಾರೆ.

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು  ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು.

YouTube video player

ರಾಜ್ಯದಲ್ಲಿಂದು ಶನಿವಾರ (ಏಪ್ರಿಲ್​ 18) 17,489 ಜನರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,41,998ಕ್ಕೆ (11.41 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 80 ಜನರ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,270 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,09,549 ಜನರು ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. 1,19,160 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:  Corona Deaths In Karnataka : ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ 78 ಜನರ ಸಾವು.!

ಕರ್ನಾಟಕದಲ್ಲಿ ಸಮುದಾಯಕ್ಕೆ ಕೊರೊನಾ ಸೋಂಕು: ಡಾ.ಕೆ.ಸುಧಾಕರ್

Published On - 5:25 pm, Sun, 18 April 21

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us