ಕನ್ನಡ ಚಿತ್ರರಂಗದ ನಿರ್ಮಾಪಕ, ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಆನಂದ್ ಅಪ್ಪುಗೋಳ್ ಅವರನ್ನು ಇಡಿ ಅಧಿಕಾರಿಗಳು ಇಂದು (ಜನವರಿ 6) ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ನ ಅವ್ಯವಹಾರ ಪ್ರಕರಣದಲ್ಲಿ ಇವರು ಸುಮಾರು 250 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಿಎಂಎಲ್ಎ ಕಾಯಿದೆ ಅಡಿ ದೂರು ದಾಖಲಿಸಿದ್ದರು.
Enforcement Directorate has arrested Anand Balakrishna Appugol, chairman of Krantiveer Sangolli Rayanna Urban Co-operative Credit Society, Belagavi city under PMLA, 2002 in a case of cheating public money to the tune of Rs 250 crores.
— ANI (@ANI) January 6, 2022
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ಆನಂದ್ ನಿರ್ಮಾಣ ಮಾಡಿದ್ದರು. ಅವರು ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ನ ಅಧ್ಯಕ್ಷರಾಗಿದ್ದಾರೆ. ಅವರು ಈ ಬ್ಯಾಂಕ್ನಲ್ಲಿ ದೊಡ್ಡ ಮೊತ್ತದ ಅವ್ಯವಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ, ಆನಂದ್ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪ್ರಮುಖ ಆರೋಪ ಏನು?
ಸಂಗೊಳ್ಳಿ ರಾಯಣ್ಣ ಸೊಸೈಟಿ ಬೆಳಗಾವಿಯಲ್ಲಿ ಪ್ರಮುಖ ಶಾಖೆ ಹೊಂದಿದೆ. ಇದರ ಜತೆಗೆ ಉಳಿದ ಕಡೆಗಳಲ್ಲೂ ಇದು ಶಾಖೆ ಹೊಂದಿದೆ. 26 ಸಾವಿರ ಜನರಿಂದ ಈ ಬ್ಯಾಂಕ್ನವರು ಠೇವಣಿ ಸಂಗ್ರಹಿಸಿದ್ದರು. ಆನಂದ್ ಅಪ್ಪುಗೋಳ ಸೇರಿ ಸೊಸೈಟಿಯ 13 ಜನರು ಠೇವಣಿಯ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು ಎನ್ನುವುದು ಪ್ರಮುಖ ಆರೋಪ. ಇದಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿತ್ತು. ಕೆಲ ವರ್ಷಗಳ ಹಿಂದೆ ಆನಂದ್ ಅವರನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು. ಆ ಬಳಿಕ ಅವರು ಹೊರ ಬಂದಿದ್ದರು. ಈಗ ಮತ್ತೆ ಅವರ ಬಂಧನ ನಡೆದಿದೆ.
ಇದನ್ನೂ ಓದಿ: ‘ಟ್ವಿಸ್ಟ್ ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ’; ಆರ್ಯವರ್ಧನ್ ಕ್ಯಾರೆಕ್ಟರ್ ಬದಲಾದ ಬಗ್ಗೆ ನಟ ಅನಿರುದ್ಧ ಮಾತು
Valimai Movie: ಅಜಿತ್ ನಟನೆಯ ‘ವಲಿಮೈ’ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ
Published On - 8:10 pm, Thu, 6 January 22