ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಇನ್ನಿಲ್ಲ
ನಿಮಿಷಾಂಬ ಪ್ರೊಡಕ್ಷನ್ಸ್ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ದರು. ಆದರೆ, ಕೊರೊನಾ ಸೋಂಕಿಗೆ ತುತ್ತಾಗಿ ನಂತರ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡ ಕಾರಣ ಚಿಕಿತ್ಸೆ ಫಲಕಾರಿಯಾಗಿದೆ ಅರ್ಧದಾರಿಯಲ್ಲೇ ತಮ್ಮ ಪಯಣ ಮುಗಿಸಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಕನ್ನಡ ಚಿತ್ರರಂಗದ ಮೇಲೂ ಕೊರೊನಾ ಕರಿನೆರಳು ಬಿದ್ದು ಸೂತಕದ ಛಾಯೆ ಆವರಿಸಿದೆ. ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 23 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಮಣಿಪಾಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಶೇಖರ್ ಅವರಿಗೆ ಕೊರೊನಾ ವಾಸಿಯಾಗಿತ್ತಾದರೂ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡಿತ್ತು. ಪರಿಣಾಮವಾಗಿ ಇಂದು (ಏ.29) ಮುಂಜಾನೆ ಸುಮಾರು 3-4 ಗಂಟೆಯ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.
ನಿಮಿಷಾಂಬ ಪ್ರೊಡಕ್ಷನ್ಸ್ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ದರು. ಆದರೆ, ಕೊರೊನಾ ಸೋಂಕಿಗೆ ತುತ್ತಾಗಿ ನಂತರ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡ ಕಾರಣ ಚಿಕಿತ್ಸೆ ಫಲಕಾರಿಯಾಗಿದೆ ಅರ್ಧದಾರಿಯಲ್ಲೇ ತಮ್ಮ ಪಯಣ ಮುಗಿಸಿದ್ದಾರೆ.
ಮೊನ್ನೆ ಮೊನ್ನೆಯಷ್ಟೇ ನಿರ್ಮಾಪಕ ಕೋಟಿ ರಾಮು ಸಹ ಕೊರೊನಾ ಸೋಂಕಿನಿಂದ ನಿಧನರಾಗಿದ್ದು ಅವರ ಸಾವಿನ ಬೆನ್ನಲ್ಲೇ ಕನ್ನಡ ಚಿತ್ರರಂಗದ ಮತ್ತೊಬ್ಬ ಅನ್ನದಾತನನ್ನು ಕೊವಿಡ್ ಕಿತ್ತುಕೊಂಡಿದೆ. ಕೊರೊನಾ ಸೋಂಕಿನ ಎರಡನೇ ಅಲೆ ಗಂಭೀರವಾಗಿದ್ದು ಸೋಂಕಿನ ತೀವ್ರತೆಯಿಂದ ಅನೇಕರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆಯುತ್ತಿದ್ದಾರೆ.
ಇದನ್ನೂ ಓದಿ: ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ಕೋಟಿ ರಾಮು ಕೊವಿಡ್ಗೆ ಬಲಿ
ಎಚ್ಚರ..ಗಾಳಿಯಲ್ಲೂ ಹರಡುತ್ತದೆ ಕೊರೊನಾ; ನೀವು ಸೋಂಕಿನಿಂದ ಪಾರಾಗಲು ತಪ್ಪದೆ ಈ ಮುನ್ನೆಚ್ಚರಿಕಾ ಕ್ರಮ ವಹಿಸಿ