AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ

ಸ್ಯಾಂಡಲ್​ವುಡ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ನಿಧನ ಹೊಂದುತ್ತಿದ್ದಾರೆ. ಈಗ ಕನ್ನಡದ ಹಿರಿಯ ನಟ ರಾಜಾರಾಮ್​ ಮೃತಪಟ್ಟಿದ್ದಾರೆ. ಸೋಮವಾರ (ಮೇ 10) ಅವರು ನಿಧನ ಹೊಂದಿದ್ದಾರೆ. 

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ
ರಾಜಾರಾಮ್​
ರಾಜೇಶ್ ದುಗ್ಗುಮನೆ
|

Updated on:May 10, 2021 | 5:59 PM

Share

ಸ್ಯಾಂಡಲ್​ವುಡ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ನಿಧನ ಹೊಂದುತ್ತಿದ್ದಾರೆ. ಈಗ ಕನ್ನಡದ ಹಿರಿಯ ನಟ ರಾಜಾರಾಮ್​ ಮೃತಪಟ್ಟಿದ್ದಾರೆ. ಸೋಮವಾರ (ಮೇ 10) ಅವರು ನಿಧನ ಹೊಂದಿದ್ದಾರೆ. 

ಈ ವಿಚಾರವನ್ನು ನಟ ಸೃಜನ್​ ಲೋಕೇಶ್​ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ರಾಜಾರಾಮ್​ ಅಂಕಲ್​​ ನೀವು ನಮ್ಮನ್ನು ಬಿಟ್ಟು ತೆರಳಿರುವುದು ನಿಜಕ್ಕೂ ಬೇಸರವಾಗುತ್ತಿದೆ.  ನಿಮ್ಮನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ರಾಜಾರಾಮ್​ ಸಾವಿಗೆ ಕೊರೊನಾ ಕಾರಣ ಎನ್ನಲಾಗಿದೆ.  ಈ ವಿಚಾರ ಕುಟುಂಬದ ಕಡೆಯಿಂದ ಇನ್ನೂ ಅಧಿಕೃತವಾಗಿಲ್ಲ. ರಾಜಾರಾಮ್​ ಅವರಿಗೆ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಹೀಗಾಗಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಇಂದು (ಮೇ 10) ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ರಾಜಾರಾಮ್​ ಸಾವಿಗೆ ಕನ್ನಡ ಚಿತ್ರರಂಗದ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿ ಗಾಳಿಪಟ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರ ನಿರ್ವಹಿಸಿದ್ದರು. ಧಾರಾವಾಹಿಗಳಲ್ಲೂ ಕೂಡ ರಾಜಾರಾಮ್​ ಬಣ್ಣ ಹಚ್ಚಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ: ನೀವಿಲ್ಲದೆ ನಾ ಬದುಕುವುದಾದರೂ ಹೇಗೆ; ಕೊರೊನಾದಿಂದ ಅಮ್ಮ- ಅಕ್ಕನನ್ನು ಕಳೆದುಕೊಂಡ ವೇದಾ ಕೃಷ್ಣಮೂರ್ತಿ ಭಾವನಾತ್ಮಕ ಸಂದೇಶ 

Published On - 5:44 pm, Mon, 10 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ