AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Chandra Death: ಕೊರೊನಾದಿಂದ ಹಿರಿಯ ನಟ ಸುರೇಶ್​ ಚಂದ್ರ ನಿಧನ

ಸುರೇಶ್​ ಚಂದ್ರ ಅವರಿಗೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಕೆಲವು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Suresh Chandra Death: ಕೊರೊನಾದಿಂದ ಹಿರಿಯ ನಟ ಸುರೇಶ್​ ಚಂದ್ರ  ನಿಧನ
ಸುರೇಶ್​ ಚಂದ್ರ
ರಾಜೇಶ್ ದುಗ್ಗುಮನೆ
|

Updated on: Jun 11, 2021 | 3:11 PM

Share

ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಜನರನ್ನು ಕೊರೊನಾ ವೈರಸ್​ ಬಲಿ ತೆಗೆದುಕೊಂಡಿದೆ. ಇದರ ಅಟ್ಟಹಾಸ ಸದ್ಯಕ್ಕೆ ಮುಗಿಯುವ ರೀತಿಯಲ್ಲಿ ಕಾಣುತ್ತಿಲ್ಲ. ಈಗ ಕೊರೊನಾದಿಂದ ಪತ್ರಕರ್ತ, ಹಿರಿಯ ನಟ ಸುರೇಶ್​ ಚಂದ್ರ ಅವರು ನಿಧನರಾಗಿದ್ದಾರೆ.

ಸುರೇಶ್​ ಚಂದ್ರ ಅವರಿಗೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಕೆಲವು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಸುರೇಶ್​ ಚಂದ್ರ ಅವರು ಸಿನಿಮಾ ಪತ್ರಿಕೋದ್ಯಮದಲ್ಲಿದ್ದರು. ಹೀಗಾಗಿ, ಅವರಿಗೆ ಸ್ಟಾರ್​ ನಟರ ಜತೆ ಒಡನಾಟ ಉತ್ತಮವಾಗಿತ್ತು. ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಟಿಸುವಂತೆ ನಿರ್ದೇಶಕ ಎಸ್​. ನಾರಾಯಣ್​ ಕೋರಿದ್ದರು. ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಟ್ಟರು. ಅಲ್ಲಿಂದ ಇಲ್ಲಿವರೆಗೆ ಸುಮಾರು 50ಕ್ಕೂ ಅಧಿಕ ಚಿತ್ರಗಳಲ್ಲಿ ಸುರೇಶ್​ ಚಂದ್ರ ನಟಿಸಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾಗುತ್ತಲೇ ಇದ್ದಾರೆ. ಬಾಲಿವುಡ್ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್ಆರ್, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ:

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು