Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಸುರೇಖಾ ಅವರಿಗೆ 66 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ
ಹಿರಿಯ ನಟಿ ಸುರೇಖಾ
Follow us
ಮದನ್​ ಕುಮಾರ್​
|

Updated on: Jun 06, 2021 | 12:06 PM

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಜಯಾ ಅವರು ನಿಧನರಾದ ಸುದ್ದಿ ಕೇಳಿಬಂದ ಬೆನ್ನಲ್ಲೇ ಮತ್ತೋರ್ವ ಹಿರಿಯ ನಟಿ ಸುರೇಖಾ ಮೃತರಾಗಿದ್ದಾರೆ. ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ಸ್ಟಾರ್​ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ಶನಿವಾರ (ಜೂ.5) ರಾತ್ರಿ 9.30ರ ಸುಮಾರಿಗೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಸುರೇಖಾ ಅವರಿಗೆ 66 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಸುರೇಖಾ ಬದುಕುಳಿಯಲಿಲ್ಲ. ಬನಶಂಕರಿ ಚಿತಾಗಾರದಲ್ಲಿ ಇಂದು (ಜೂ.6) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಸುರೇಖಾ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ಕಲಾವಿದೆ ಆಗಿದ್ದರು. ಹಲವು ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಅವರಿಗೆ ಅಪಾರ ಅಭಿಮಾನಿಗಳಿದ್ದರು. ಡಾ. ರಾಜ್​ಕುಮಾರ್​ ಅವರ ಹಲವಾರು ಸಿನಿಮಾಗಳಲ್ಲಿ ಸುರೇಖಾ ನಟಿಸಿದ್ದರು. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸುರೇಖಾ ಅಭಿನಯಿಸಿದ್ದರು. ಮಾಯಾ ಮನುಷ್ಯ, ನಾನು ಬಾಳಬೇಕು, ನಾನು ಅವನಿಲ್ಲೈ ಮುಂತಾದ ಸಿನಿಮಾಗಳಲ್ಲಿ ಅವರು ನಾಯಕಿ ಆಗಿದ್ದರು.

ಆಪರೇಷನ್ ಜಾಕ್ ಪಾಟ್​ನಲ್ಲಿ ಸಿಐಡಿ 999, ತ್ರಿಮೂರ್ತಿ, ಒಲವು ಗೆಲುವು, ಗಿರಿ ಕನ್ಯೆ, ಸಾಕ್ಷಾತ್ಕಾರ, ಕಸ್ತೂರಿ ನಿವಾಸ, ಹುಲಿಯ ಹಾಲಿನ ಮೇವು ಮುಂತಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಶಿವಕನ್ಯೆ, ಕಾವೇರಿ, ಕೆಸರಿನ ಕಮಲ, ಬ್ಯಾಂಕರ್ ಮಾರ್ಗಯ್ಯ, ಆಲೆಮನೆ, ನಾಗರಹೊಳೆ, ತಾಯಿ ದೇವರು, ಭಕ್ತ ಸಿರಿಯಾಳ ಮುಂತಾದ ಚಿತ್ರಗಳಲ್ಲಿ ಸುರೇಖಾ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಇದನ್ನೂ ಓದಿ:

ನಟಿ ಬಿ. ಜಯಾ ಮೃತದೇಹ ರಸ್ತೆ ಪಕ್ಕದಲ್ಲಿ ಯಾಕಿತ್ತು? ಕುಟುಂಬದವರಿಂದಲೇ ಸಿಕ್ತು ಸ್ಪಷ್ಟನೆ

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ