Yash: ಯಶ್​ ಮುಂದಿನ ಚಿತ್ರದ ಪಾತ್ರ ರಿವೀಲ್​; ಫ್ಯಾನ್ಸ್​ ಫುಲ್​ ಫಿದಾ

Rocking Star Yash: ಕೆಜಿಎಫ್​ 2 ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ.

Yash: ಯಶ್​ ಮುಂದಿನ ಚಿತ್ರದ ಪಾತ್ರ ರಿವೀಲ್​; ಫ್ಯಾನ್ಸ್​ ಫುಲ್​ ಫಿದಾ
ಅಭಿಮಾನಿಗಳು ಸಿದ್ಧಪಡಿಸಿದ ಫೋಟೋ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Jun 17, 2021 | 8:13 PM

‘ಕೆಜಿಎಫ್​ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್​ ಸೃಷ್ಟಿಸಿಕೊಂಡಿದೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗ ಯಶ್​ ಮುಂದಿನ ಸಿನಿಮಾ ಬಗ್ಗೆ ಅಚ್ಚರಿಯ ಅಪ್​ಡೇಟ್​ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ತೆರೆಕಂಡ ನಂತರದಲ್ಲಿ ಯಶ್​ ನಿರ್ದೇಶಕ ನರ್ತನ್ ​ಜತೆ ಕೈ ಜೋಡಿಸಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದ್ದು, ಈಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ. ಮೂಲಗಳ ಪ್ರಕಾರ ನರ್ತನ್​ ಸಿನಿಮಾದಲ್ಲಿ ಯಶ್​ ನೇವಿ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ.

ಯಶ್​ ಈರೆಗೆ ಈ ರೀತಿಯ ಪಾತ್ರ ನಿರ್ವಹಿಸಿಲ್ಲ. ಈಗ ಅವರು ಭಿನ್ನ ಪಾತ್ರ ಮಾಡುತ್ತಿರುವ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ. ಅಂದಹಾಗೆ, ನೌಕಾ ನೆಲೆಯ ಅಧಿಕಾರಿ ಎಂದರೆ, ಸಮುದ್ರ ದೃಶ್ಯಗಳು ಇರಲಿವೆಯೇ? ಹೌದು ಎಂದಾದರೆ ಶೂಟಿಂಗ್​ ಎಲ್ಲಿ ನಡೆಯಲಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕೆಜಿಎಫ್​ ಜುಲೈ ತಿಂಗಳಲ್ಲಿ ತೆರೆಗೆ ಬರುವ ಬಗ್ಗೆ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಕೊವಿಡ್​ ಕಾರಣದಿಂದ ಇನ್ನೂ ಚಿತ್ರರಂಗ ಓಪನ್​ ಆಗಿಲ್ಲ. ಹೀಗಾಗಿ, ಸಿನಿಮಾ ರಿಲೀಸ್​ ಸದ್ಯಕ್ಕೆ ಸಾಧ್ಯವಾಗೋದು ಅನುಮಾನವೇ. ಪ್ಯಾನ್​ ಇಂಡಿಯಾ ಚಿತ್ರವಾದ್ದರಿಂದ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರ ರಿಲೀಸ್​ ಮಾಡಬಹುದು.

ಕೆಜಿಎಫ್​ 2 ಚಿತ್ರದ ನಿರ್ದೇಶಕ ಪ್ರಶಾಂತ್​ ನೀಲ್​ ಈಗಾಗಲೆ ಸಲಾರ್​ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್​ ನಟನೆಯ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಹೀಗಿರುವಾಗಲೇ ಯಶ್​ ಹೊಸ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ.

ನರ್ತನ್​ ನಿರ್ದೇಶನದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಶಿವರಾಜ್​ಕುಮಾರ್​ ಹಾಗೂ ಶ್ರೀಮುರಳಿ ಕಾಂಬಿನೇಷನ್​ನಲ್ಲಿ ತೆರೆಗೆ ತಂದ ಮಫ್ತಿ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಕಾರಣಕ್ಕ ಯಶ್​-ನರ್ತನ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರದ ಮೇಲೆ ನಿರೀಕ್ಷೆ ಇದೆ.

ಇದನ್ನೂ ಓದಿ: ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Published On - 7:20 pm, Thu, 17 June 21

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್