Shankanada Aravind: ಕನ್ನಡದ ಹಿರಿಯ ನಟ ಶಂಖನಾದ ಅರವಿಂದ್​​ ಕೊವಿಡ್​ಗೆ ಬಲಿ

Shankanada Aravind Death News: ಅರವಿಂದ್​ ಅವರಿಗೆ ಕೊವಿಡ್​ ಸೋಂಕು ತಗುಲಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾದ್ದರಿಂದ 13 ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Shankanada Aravind: ಕನ್ನಡದ ಹಿರಿಯ ನಟ ಶಂಖನಾದ ಅರವಿಂದ್​​ ಕೊವಿಡ್​ಗೆ ಬಲಿ
ಶಂಕನಾದ್ ಅರವಿಂದ್
Follow us
ರಾಜೇಶ್ ದುಗ್ಗುಮನೆ
|

Updated on:May 07, 2021 | 3:31 PM

ಕೊರೊನಾ ವೈರಸ್​ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊವಿಡ್​ ಎರಡನೇ ಅಲೆಗೆ ಚಿತ್ರರಂಗದ ಸಾಕಷ್ಟು ಮಂದಿ ನಿಧನ ಹೊಂದಿದ್ದಾರೆ. ಈಗ ಕನ್ನಡದ ಹಿರಿಯ ನಟ, ನಿರ್ಮಾಪಕ ಶಂಖನಾದ ಅರವಿಂದ್ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಮಂದಿ ಸಂತಾಪ ಸೂಚಿಸಿದ್ದಾರೆ. ಅರವಿಂದ್​ ಅವರಿಗೆ ಕೊವಿಡ್​ ಸೋಂಕು ತಗುಲಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾದ್ದರಿಂದ 13 ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಮೇ 7) ಮಧ್ಯಾಹ್ನ ನಿಧನ ಹೊಂದಿದ್ದಾರೆ.

250 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಶಂಕನಾದ ಅರವಿಂದ್ ನಟಿಸಿದ್ದಾರೆ. ಸಾಕಷ್ಟು ಪೋಷಕ ಪಾತ್ರಗಳಿಗೆ ಶಂಕನಾದ ಅರವಿಂದ್ ಜೀವ ತುಂಬಿದ್ದಾರೆ. ಕಾಶೀನಾಥ್‌ಗೆ ಅವರು ಆಪ್ತರಾಗಿದ್ದರು. ಶಂಕನಾದ ಅರವಿಂದ್ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನನ್ನು ಅಗಲಿದ್ದಾರೆ. ಮೂರು ತಿಂಗಳ ಹಿಂದೆ ಅರವಿಂದ್​ ಮಡದಿ ರಮಾ ಅರವಿಂದ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾದರು. ತಮಿಳು ನಟ ಪಾಂಡು ಅವರು ಮೇ 6ರಂದು ನಿಧನರಾದರು. ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಕಾಶಿನಾಥ್‌, ಜಗ್ಗೇಶ್ ಸಿನಿಮಾಗಳಲ್ಲಿ ಶಂಕನಾದ್​ ಅರವಿಂದ್​ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಅರವಿಂದ್​ ಹೆಸರಿನ ಹಿಂದೆ ಶಂಖನಾದ ಸೇರಿಕೊಳ್ಳಲೂ ಒಂದು ಕಾರಣ ಇದೆ. 1986ರಲ್ಲಿ ‘ಶಂಖನಾದ’ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾದಲ್ಲಿ ಅರವಿಂದ್ ಪ್ರಧಾನ ಪಾತ್ರ ನಿರ್ವಹಿಸಿದ್ದರು. ಆ ಸಿನಿಮಾಕ್ಕೆ ಭಾರಿ ಮೆಚ್ಚುಗೆ ಸಿಕ್ಕಿದ್ದಲ್ಲದೆ, ರಾಷ್ಟ್ರ ಪ್ರಶಸ್ತಿಯೂ ದೊರಕಿತ್ತು. ಅಂದಿನಿಂದ ಅರವಿಂದ್  ಅವರನ್ನು ಶಂಕನಾದ ಅರವಿಂದ್​ ಎಂದು ಕರೆಯಲು ಆರಂಭಿಸಿದರು.

ಇದನ್ನೂ ಓದಿ: ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

ಕೊವಿಡ್​ ಸಂಕಷ್ಟಕ್ಕೆ ಅನುಷ್ಕಾ-ವಿರಾಟ್​ 2 ಕೋಟಿ ರೂ. ದೇಣಿಗೆ; ನಿಧಿ ಸಂಗ್ರಹಕ್ಕೆ ಮುಂದಾದ ದಂಪತಿ

Published On - 2:42 pm, Fri, 7 May 21

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ