ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು

ಕೊವಿಡ್​ ಕಾರಣಕ್ಕೆ ಹೇರಿದ್ದ ಲಾಕ್​ಡೌನ್​​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಶೂಟಿಂಗ್​ಗೆ ಅನುಮತಿ ಸಿಕ್ಕಿರುವುದರಿಂದ ಮತ್ತೆ ಸಿನಿಮಾ ಕೆಲಸಗಳು ಆರಂಭಗೊಂಡಿವೆ.

ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು
ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಚುರುಕಾಯ್ತು ಸಿನಿಮಾ ಕೆಲಸಗಳು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 30, 2021 | 4:20 PM

ಕೊವಿಡ್​ ಕಾರಣಕ್ಕೆ ಹೇರಿದ್ದ ಲಾಕ್​ಡೌನ್​​ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಶೂಟಿಂಗ್​ಗೆ ಅನುಮತಿ ಸಿಕ್ಕಿರುವುದರಿಂದ ಮತ್ತೆ ಸಿನಿಮಾ ಕೆಲಸಗಳು ಆರಂಭಗೊಂಡಿವೆ. ಸಾಕಷ್ಟು ಚಿತ್ರತಂಡಗಳು ಈಗಾಗಲೇ ಶೂಟಿಂಗ್​ ಆರಂಭಿಸಿವೆ. ಇನ್ನು, ಅನೇಕ ಚಿತ್ರತಂಡಗಳು ಸುದ್ದಿಗೋಷ್ಠಿ ನಡೆಸಿ, ಸಿನಿಮಾ ಪ್ರಚಾರ ಕಾರ್ಯ ಆರಂಭಿಸಿವೆ.

‘ಹೆದರದಿರು ಓ ಮನಸೇ’ ಆಲ್ಬಮ್​ ಸಾಂಗ್ ಬಿಡುಗಡೆ ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ. ನಟ, ನಿರ್ಮಾಪಕ, ಉದ್ಯಮಿ ಮಹೇಂದ್ರ ಮುನ್ನೋತ್ ಕೊವಿಡ್​ ಬಗ್ಗೆ ಜಾಗೃತಿ ಮೂಡಿಸುವ ಹಾಡನ್ನು ಸಿದ್ಧಪಡಿಸಿದ್ದು, ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಇದು ರಿಲೀಸ್​ ಆಗಿದೆ.

ಕೊರೊನಾ ಸಂಕಷ್ಟಕ್ಕೆ ಸಿಲುಕಿದ ಮಾನವ ಸಂಕುಲಕ್ಕೆ ಧೈರ್ಯ ಹೇಳುವ ‘ಹೆದರದಿರು ಓ ಮನಸೇ’ ಎನ್ನುವ ಹಾಡು ಇತ್ತೀಚೆಗೆ ರಿಲೀಸ್​ ಆಗಿದೆ. ಈ ಆಲ್ಬಮ್​ಗೆ ನಿರ್ದೇಶಕ ಹರಿಹರನ್ ಆಕ್ಷನ್ ಕಟ್ ಹೇಳಿದರೆ ಎ.ಟಿ. ರವೀಶ್ ಸಂಗೀತ, ರೇವಣ್ಣ ನಾಯಕ್ ಸಾಹಿತ್ಯ ಬರೆದಿದ್ದಾರೆ. ಮಹೇಂದ್ರ ಅವರು ಇದನ್ನು ನಿರ್ಮಿಸಿ, ನಟಿಸಿದ್ದಾರೆ. ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಜಯರಾಜ್ ಹಾಗೂ ಮಾಜೀ ಕಾರ್ಯದರ್ಶಿ ಭಾಮಾ ಹರೀಶ್ ಜೊತೆಗೂಡಿ ಈ ಹಾಡು ಲೋಕಾರ್ಪಣೆ ಮಾಡಿದರು. ಹಾಗೇ ಇದೇ ಸಂದರ್ಭದಲ್ಲಿ ಆತ್ಮ ನಿರ್ಭರ ಗೀತೆಯನ್ನು ಬಿಡುಗಡೆ ಗೊಳಿಸಲಾಗಿದೆ.

‘ಅನಿರೀಕ್ಷಿತ’ ಟ್ರೇಲರ್ ರಿಲೀಸ್​ ಮಿಮಿಕ್ರಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ದಯಾನಂದ್ ಈಗ ಅವರು ನಿರ್ದೇಶನಕ್ಕೆ ಇಳಿದಿದ್ದಾರೆ. ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತದೆ. ಇಂತಹ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ‘ಅನಿರೀಕ್ಷಿತ’ ಚಿತ್ರ ನಿರ್ದೇಶನ ಮಾಡಲಾಗಿದೆ. ಈ ಚಿತ್ರದ ಟ್ರೇಲರ್​ ರಿಲೀಸ್​ ಆಗಿದೆ.

ಲಾಕ್ ಡೌನ್ ತೆರವು ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ. ಸಿನಿಮಾ ಮಂದಿರ ಓಪನ್​ ಮಾಡಲು ಅನುಮತಿ ದೊರಕಿದ ಕೂಡಲೆ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಜೊತೆಯಾಗಿ ಏನು ಮಾಡ್ತಿದ್ದಾರೆ ತಮನ್ನಾ-ವಿಜಯ್​ ಸೇತುಪತಿ? ಇದು ಸಿನಿಮಾ ಸಮಾಚಾರ ಅಲ್ಲವೇ ಅಲ್ಲ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ