
‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು ಈ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.
‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಅವರು ರಾಯಾ ಎಂಬ ಪಾತ್ರ ಮಾಡಿದ್ದಾರೆ. ಈ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ಈ ಟೀಸರ್ ಮೂಲಕ ತೋರಿಸಲಾಗಿದೆ. ಈ ಸಿನಿಮಾ ತುಂಬಾ ಬೋಲ್ಡ್ ಆಗಿರಲಿದೆ ಎಂಬುದು ಖಚಿತವಾಗಿದೆ. ಈಗಾಗಲೇ ಬೋಲ್ಡ್ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಸಂದೀಪ್ ರೆಡ್ಡಿ ವಂಗಾ ಕೂಡ ‘ಟಾಕ್ಸಿಕ್’ ಟೀಸರ್ ನೋಡಿ ಭೇಷ್ ಎಂದಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಂದೀಪ್ ರೆಡ್ಡಿ ವಂಗಾ ಅವರು ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್ ಟೀಸರ್ ನನ್ನನ್ನು ತಟ್ಟಿತು. ಸ್ಟೈಲ್, ಆ್ಯಟಿಟ್ಯೂಟ್, ಕೆಯಾಸ್.. ಹುಟ್ಟುಹಬ್ಬದ ಶುಭಾಶಯಗಳು ಯಶ್’ ಎಂದು ಸಂದೀಪ್ ರೆಡ್ಡಿ ವಂಗಾ ಅವರು ಟ್ವೀಟ್ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
TOXIC teaser just knocked me out.
Style. Attitude. Chaos.
Happy Birthday Yash 👑@TheNameIsYashhttps://t.co/EOzZLZIXBi— Sandeep Reddy Vanga (@imvangasandeep) January 8, 2026
ಗೀತು ಮೋಹನ್ದಾಸ್ ಅವರು ‘ಟಾಕ್ಸಿಕ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಟೀಸರ್ನಲ್ಲಿ ಇಷ್ಟು ಬೋಲ್ಡ್ ಸೀನ್ ಇರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಸಿನಿಮಾ ಯಾವ ರೀತಿ ಇರಬಹುದು ಎಂಬ ಕೌತುಕ ನಿರ್ಮಾಣ ಆಗಿದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಧುರಂಧರ್ 2’ ಕೂಡ ರಿಲೀಸ್ ಆಗಲಿದ್ದು, ಸಖತ್ ಪೈಪೋಟಿ ಏರ್ಪಡಲಿದೆ.
ಇದನ್ನೂ ಓದಿ: ‘ಟಾಕ್ಸಿಕ್’ ಟೀಸರ್ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್
‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಜೊತೆ ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಶಿ, ಕಿಯಾರಾ ಅಡ್ವಾಣಿ, ನಯನತಾರಾ, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಏಕಕಾಲಕ್ಕೆ ಈ ಸಿನಿಮಾ ಸಿದ್ಧವಾಗುತ್ತಿದೆ. ತಮಿಳು, ತೆಲುಗು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಿಗೆ ಡಬ್ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.