‘ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ

| Updated By: KUSHAL V

Updated on: Oct 10, 2020 | 11:32 AM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ […]

ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ
Follow us on

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.

ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಲ್ಲಿ ಸಂಜನಾ ಗಲ್ರಾನಿ ಹುಟ್ಟುಹಬ್ಬ ಆಚರಿಸಿಕೊಳ್ಳುವಂತಾಗಿದೆ. ಜೈಲಿನಲ್ಲಿರುವ ಸಂಜನಾ ತಮ್ಮ ಬರ್ತ್ ಡೇ ದಿನವಾದ ಇಂದು ಯಾರ ಸಂಪರ್ಕಕ್ಕೂ ಸಿಗದೆ ಇರಲು ಬಯಸಿದ್ದಾರೆ. ಕೇವಲ ಅಮ್ಮ-ಅಪ್ಪ ಕೊಟ್ಟ ಬಟ್ಟೆಯನ್ನು ತೊಟ್ಟು ಬರ್ತ್ ಡೇ ಆಚರಣೆ ಮಾಡಲಿದ್ದಾರೆ. ಸಂಜನಾಳಿಗೆ ಜೈಲಿನಲ್ಲಿ ಕೊಡೋ ರಾಗಿ ಮುದ್ದೆಯೇ ಇವತ್ತು ಟ್ರೀಟ್​ ಆಗಿದೆ. ಕನಸು ಮನಸಲ್ಲೂ ಊಹಿಸದ ಬರ್ತ್ ಡೇ ದಿನ ಇಂದು ಸಂಜನಾಳಿಗೆ ಸಿಕ್ಕಿದೆ.

ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸುತ್ತಿದ್ದೆವು:
ಮಗಳನ್ನ ಭೇಟಿ ಮಾಡಲು ಅನುಮತಿ ಇಲ್ಲ. ಪ್ರತಿ ಬಾರಿ ಅದ್ಧೂರಿಯಾಗಿ ಹುಟ್ಟು ಹಬ್ಬವನ್ನ ಆಚರಿಸಲಾಗುತ್ತಿತ್ತು. ಆದ್ರೆ ಈ ಬಾರಿ ಅವಳ ಹೆಸರಲ್ಲಿ ಪೂಜೆ ಸಹ ಮಾಡಿಸಿಲ್ಲ. ದೇವಸ್ಥಾನಕ್ಕೂ ಹೋಗಿಲ್ಲ. ಏನೂ ಮಾಡಿಲ್ಲ ಎಂದು ಸಂಜನಾ ತಾಯಿ ರೇಷ್ಮಾ ಗಲ್ರಾನಿ ಬೇಸರ ವ್ಯಕ್ತಪಡಿಸಿದ್ದಾರೆ.

Published On - 11:18 am, Sat, 10 October 20