AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adheera Poster: ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ

KGF Chapter 2: ನಟ ಸಂಜಯ್​ ದತ್​ ಅವರಿಗೆ ಇಂದು (ಜು.29) ಹುಟ್ಟುಹಬ್ಬದ ಸಂಭ್ರಮ. ಆ ಪ್ರಯುಕ್ತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಂಜುಗೆ ಜನ್ಮದಿನದ ಶುಭಕೋರಲಾಗಿದೆ.

Adheera Poster: ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ
ಖಡಕ್​ ಪೋಸ್ಟರ್​ ಮೂಲಕ ಅಧೀರ ಸಂಜಯ್​ ದತ್​ ಹುಟ್ಟುಹಬ್ಬಕ್ಕೆ ಶುಭಕೋರಿದ ‘ಕೆಜಿಎಫ್ 2’ ತಂಡ
TV9 Web
| Edited By: |

Updated on:Jul 29, 2021 | 11:31 AM

Share

ಬಾಲಿವುಡ್​ ನಟ ಸಂಜಯ್​ ದತ್​ (Sanjay Dutt) ಅವರ ಆಗಮನದಿಂದಾಗಿ ಯಶ್​ (Yash) ಅಭಿನಯದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿತು. ಈಗ ಆ ನಿರೀಕ್ಷೆಯನ್ನು ದುಪ್ಟಟ್ಟು ಮಾಡಲು ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಅಧೀರ ಎಂಬ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದಾರೆ. ಇಂದು (ಜು.29) ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು, ಸಂಜಯ್​ ದತ್​ಗೆ ಶುಭಕೋರಲಾಗಿದೆ. ಸಂಜಯ್​ ಅಭಿಮಾನಿಗಳಿಗೆ ಈ ಪೋಸ್ಟರ್​ ಸಖತ್​ ಇಷ್ಟ ಆಗಿದೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಅಧೀರನ ಲುಕ್​ ವೈರಲ್​ ಆಗುತ್ತಿದೆ.

ಸಂಜಯ್ ದತ್​ ನಿಭಾಯಿಸಿರುವ ಅಧೀರ ಎಂಬ ಈ ಪಾತ್ರ ತುಂಬ ಕ್ರೂರವಾಗಿರಲಿದೆ. ಅದನ್ನು ಆರಂಭದಿಂದಲೂ ನಿರ್ದೇಶಕ ಪ್ರಶಾಂತ್​ ನೀಲ್​ ಹೇಳುತ್ತಲೇ ಬಂದಿದ್ದಾರೆ. ಈ ಹಿಂದೆ ಬಿಡುಗಡೆ ಆಗಿದ್ದ ಪೋಸ್ಟರ್​ನಲ್ಲಿಯೂ ಆ ಬಗ್ಗೆ ಪ್ರಶಾಂತ್ ನೀಲ್​ ಪ್ರಸ್ತಾಪ ಮಾಡಿದ್ದರು. ಈಗ ಹೊಸ ಪೋಸ್ಟರ್​ ಜೊತೆ ಅವರು ಹಂಚಿಕೊಂಡಿರುವ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ‘ಯುದ್ಧ ಇರುವುದು ಪ್ರಗತಿಗಾಗಿ. ನನ್ನ ಈ ಮಾತನ್ನು ರಣಹದ್ದುಗಳು ಕೂಡ ಒಪ್ಪಿಕೊಳ್ಳುತ್ತವೆ’ ಎಂಬ ಡೈಲಾಗ್ ಅನ್ನು ಪ್ರಶಾಂತ್​ ನೀಲ್​ ಪೋಸ್ಟ್​​ ಮಾಡಿದ್ದಾರೆ.

ಪಾತ್ರವರ್ಗದಿಂದಲೇ ಈ ಸಿನಿಮಾ ಕೌತುಕ ಕೆರಳಿಸಿದೆ. ಬಾಲಿವುಡ್​ ನಟಿ ರವೀನಾ ಟಂಡನ್​ ಅವರು ರಮಿಕಾ ಸೇನ್​ ಎಂಬ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿ ಪ್ರಕಾಶ್​ ರೈ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್​ ಮುಗಿದಿದ್ದು ಕೊನೇ ಹಂತದ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರೊಳಗೆ ‘ಕೆಜಿಎಫ್​ 2’ ರಿಲೀಸ್​ ಆಗಿರಬೇಕಿತ್ತು. ಆದರೆ ಕೊರೊನಾ ಎರಡನೇ ಅಲೆ ಕಾರಣದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಈಗ ಹೊಸ ರಿಲೀಸ್​ ಡೇಟ್​ ಘೋಷಣೆಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ.

ಇದನ್ನೂ ಓದಿ:

Sanjay Dutt Birthday: ಸಂಜಯ್​ ದತ್ ಬದುಕಿನ 308 ಪ್ರೇಯಸಿಯರು ಮತ್ತು ಮೂವರು ಪತ್ನಿಯರ ಬಗ್ಗೆ ಅಚ್ಚರಿಯ ಮಾಹಿತಿ

ಸಂಜಯ್​ ದತ್​ ಮಗಳು ತ್ರಿಶಲಾ ಬಾಯ್​ ಫ್ರೆಂಡ್​ ಸತ್ತಿದ್ದು ಹೇಗೆ? ಸ್ಟಾರ್ ಪುತ್ರಿಗೆ ಕಿರಿಕಿರಿ ತಂದ ಪ್ರಶ್ನೆ!

Published On - 10:25 am, Thu, 29 July 21

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!