AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Dutt: ಕೆಡಿ ಸಿನಿಮಾ ಸೆಟ್​ನಲ್ಲಿ ಸಂಜಯ್ ದತ್​ಗೆ ಗಾಯ, ನಡೆದಿದ್ದೇನು?

Sanjay Dutt: ಬಾಲಿವುಡ್ ನಟ ಸಂಜಯ್ ದತ್, ಕನ್ನಡ ಸಿನಿಮಾ ಒಂದರ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ ಎನ್ನಲಾಗಿತ್ತು, ಆ ಬಗ್ಗೆ ಸ್ವತಃ ಸಂಜಯ್ ದತ್ ಸ್ಪಷ್ಟನೆ ನೀಡಿದ್ದಾರೆ.

Sanjay Dutt: ಕೆಡಿ ಸಿನಿಮಾ ಸೆಟ್​ನಲ್ಲಿ ಸಂಜಯ್ ದತ್​ಗೆ ಗಾಯ, ನಡೆದಿದ್ದೇನು?
ಸಂಜಯ್ ದತ್
ಮಂಜುನಾಥ ಸಿ.
|

Updated on:Apr 12, 2023 | 10:30 PM

Share

ಬಾಲಿವುಡ್ (Bollywood) ನಟ ಸಂಜಯ್ ದತ್​ಗೆ (Sanjay Dutt) ಕನ್ನಡ ಸಿನಿಮಾ ಒಂದರ ಚಿತ್ರೀಕರಣದ (Shooting) ವೇಳೆ ನಡೆದ ಅವಘಡದಲ್ಲಿ ಗಾಯಗಳಾಗಿವೆ ಎಂಬ ಸುದ್ದಿ ಹರಿದಾಡುತ್ತಿದ್ದು, ಆ ಬಗ್ಗೆ ಟ್ವೀಟ್​ ಮೂಲಕ ಸ್ಪಷ್ಟನೆ ಕೊಟ್ಟಿರುವ ಸಂಜಯ್ ದತ್, ತಮಗೇನೂ ಆಗಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಆದರೆ ಸಿನಿಮಾ ಚಿತ್ರೀಕರಣದ ವೇಳೆ ಸಂಜಯ್ ದತ್​ಗೆ ಗಾಯವಾಗಿದೆ ಆದರೆ ಅದು ದೊಡ್ಡ ಗಾಯವಲ್ಲ ಎಂದು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದ್ದಾರೆ.

ವದಂತಿಗಳ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ನಟ ಸಂಜಯ್ ದತ್, ”ನಾನು ಗಾಯಗೊಂಡಿದ್ದೇವೆ ಎಂಬ ಸುದ್ದಿ ಹರದಾಡುತ್ತಿದೆ. ಆ ಸುದ್ದಿಗಳು ಸಂಪೂರ್ಣವಾಗಿ ಆಧಾರರಹಿತ, ನನಗೆ ಏನೂ ಆಗಿಲ್ಲ ದೇವರ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ನಾನು ಕೆಡಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದೇನೆ, ನನ್ನ ದೃಶ್ಯಗಳನ್ನು ಚಿತ್ರೀಕರಿಸುವಾಗ ಚಿತ್ರತಂಡವು ಹೆಚ್ಚಿನ ಎಚ್ಚರಿಕೆ ವಹಿಸುತ್ತಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿವಹಿಸಿ ವಿಚಾರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

ಸಂಜಯ್ ದತ್, ಬೆಂಗಳೂರಿನ ಮಾಗಡಿ ರಸ್ತೆಯ ಬಳಿ ಕೆಡಿ ಸಿನಿಮಾದ ಚಿತ್ರೀಕರಣದಲ್ಲಿರುವಾಗ ಸೆಟ್​ನಲ್ಲಿ ಸ್ಪೋಟಿಸಿದ ಬಾಂಬ್​ಒಂದರಿಂದಾಗಿ ಅವರ ಕೈ ಹಾಗೂ ಮುಖಕ್ಕೆ ಗಾಯಗಳಾಗಿವೆ ಎನ್ನಲಾಗಿತ್ತು. ಕೆಡಿ ಸಿನಿಮಾದ ಸಹ ನಿರ್ಮಾಪಕ ಸುಪ್ರೀತ್ ಹೇಳಿರುವಂತೆ ಸಿನಿಮಾ ಸೆಟ್​ನಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದಾಗ ಸಂಜಯ್ ದತ್ ಕಣ್ಣಿಗೆ ಗಾಯವಾಗಿದೆ.

ಇದನ್ನೂ ಓದಿ: Sanjay Dutt: ಕಾಶ್ಮೀರದಲ್ಲಿ ವಿಜಯ್ ಜೊತೆ ಸೇರಿದ ಸಂಜಯ್ ದತ್

ಕೆಡಿ ಸಿನಿಮಾದ ಸಹ ನಿರ್ಮಾಪಕ ಸುಪ್ರೀತ್ ಹೇಳಿರುವಂತೆ, ”ಶುಕ್ರವಾರ ಸಂಜೆ ಚಿತ್ರೀಕರಣ ಮುಗಿಯುವ ಸಮಯದಲ್ಲಿ ಅವಘಡವೊಂದು ಸಂಭವಿಸಿದೆ. ಕಾರಿನಲ್ಲಿ ಬಾಂಬ್ ಬ್ಲಾಸ್ಟ್ ನ ದೃಶ್ಯದ ಚಿತ್ರೀಕರಣ ಮಾಡುವಾಗ ಸಂಜಯ್ ದತ್ ಅವರ ಕಣ್ಣಿಗೆ ಗ್ಲಾಸ್ ಸಿಡಿದಿದು ರಕ್ತ ಬಂದಿದೆ. ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಸಂಜಯ್ ದತ್ ಶೀಘ್ರವೇ ಮುಂಬೈಗೆ ಸ್ಥಳಾಂತರಿಸಲಾಗಿದ್ದು, ಸಂಜಯ್ ದತ್ ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಅವಘಡದ ಬಳಿಕ ಶೂಟಿಂಗ್ ಅನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ” ಎಂದಿದ್ದಾರೆ.

ಕೆಜಿಎಫ್: ಚಾಪ್ಟರ್ 2 ಸಿನಿಮಾದಲ್ಲಿ ನಟಿಸಿದ್ದ ಸಂಜಯ್ ದತ್​ಗೆ ಆ ಸಿನಿಮಾದ ಬಳಿಕ ದಕ್ಷಿಣ ಭಾರತದಲ್ಲಿ ಭಾರಿ ಬೇಡಿಕೆ ಕುದುರಿದೆ. ಕೆಡಿ ಸಿನಿಮಾದ ಜೊತೆಗೆ ತಮಿಳನಲ್ಲಿ ವಿಜಯ್ ನಟಿಸಿ, ಲೋಕೇಶ್ ಕನಕರಾಜ್ ನಿರ್ದೇಶನ ಮಾಡುತ್ತರುವ ಲಿಯೋ ಸಿನಿಮಾಕ್ಕೂ ಅವರೇ ವಿಲನ್. ಕೆಲವು ದಿನಗಳ ಹಿಂದಷ್ಟೆ ಕಾಶ್ಮೀರದಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ತಮ್ಮ ಪಾತ್ರದ ಶೂಟಿಂಗ್ ಮುಗಿಸಿ ಬಳಿಕ ಕೆಡಿ ಸಿನಿಮಾದ ಚಿತ್ರೀಕರಣದಲ್ಲಿ ಸಂಜಯ್ ದತ್ ಭಾಗವಹಿಸಿದ್ದರು ಎನ್ನಲಾಗುತ್ತಿದೆ.

ಕೆಡಿ ಸಿನಿಮಾದಲ್ಲಿ ಸಂಜಯ್ ದತ್ ಮಾತ್ರವೇ ಅಲ್ಲದೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ತಮಿಳಿನ ವಿಜಯ್ ಸೇತುಪತಿ, ನಟ ರವಿಚಂದ್ರನ್ ಸಹ ನಟಿಸುತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಭಾರಿ ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ನಿರ್ದೇಶಕ ಪ್ರೇಮ್. ಇದು ಪೀರಿಯಡ್ ಸಿನಿಮಾ ಆಗಿರಲಿದೆ ಎಂಬ ಮಾತುಗಳು ಸಹ ಇದ್ದು 80ರ ಕಾಲಘಟ್ಟದಲ್ಲಿ ನಡೆಯುವ ಕತೆಯನ್ನು ಸಿನಿಮಾ ಒಳಗೊಂಡಿರಲಿದೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ವತಿಯಿಂದ ನಿರ್ಮಾಣ ಮಾಡಲಾಗುತ್ತಿದೆ.

ಇನ್ನು ಸಂಜಯ್ ದತ್ ದಕ್ಷಿಣದ ಸಿನಿಮಾಗಳ ಜೊತೆಗೆ ಬಾಲಿವುಡ್​ನಲ್ಲಿಯೂ ಬಹಳ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದಲ್ಲಿ ಸಂಜಯ್ ದತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರ ಹೊರತಾಗಿ ಗುಡ್ ಮಹಾರಾಜ ಹೆಸರಿನ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಗುಡ್​ಚಡಿ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಪ್ ಹೆಸರಿನ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Wed, 12 April 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು