AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಹೊರ ಬಂದಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಜೈಲಿನಿಂದ ಹೊರ ಬಂದ ನಂತರ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ ಶೇರ್​ ಮಾಡಿಕೊಂಡಿರುವ ಪೋಸ್ಟ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 6:40 PM

Share

ಬೆಂಗಳೂರು: ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿ ಜಾಮೀನು ಪಡೆದು ಹೊರ ಬಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ಅವರು ಧನ್ಯವಾದ  ಹೇಳಿದ್ದಾರೆ.

ಸ್ಯಾಂಡಲ್​ವುಡ್ ಡ್ರಗ್​ ಕೇಸ್​ನಲ್ಲಿ ಸಂಜನಾ ಹೆಸರು ಕೇಳಿ ಬಂದಿತ್ತು. ರಾಗಿಣಿ ದ್ವಿವೇದಿ ಜೊತೆ ಅವರು ಕೂಡ ಜೈಲು ಸೇರಿದ್ದರು. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದು ಸಂಜನಾ ಬಿಡುಗಡೆ ಆಗಿದ್ದಾರೆ. ಈ ಸಮಯದಲ್ಲಿ ಕಾಳಜಿ ತೋರಿದ ಇನ್​​ಸ್ಟಾಗ್ರಾಂ ಖಾತೆಯ 10 ಲಕ್ಷ ಹಿಂಬಾಲಕರಿಗೆ ಸಂಜನಾ ಧನ್ಯವಾದ ಹೇಳಿದ್ದಾರೆ.

ಇನ್​ಬಾಕ್ಸ್​ನಲ್ಲಿ ಮೆಸೇಜ್​ ಮಾಡಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದ. ನಿಮ್ಮ ಪ್ರತಿ ಸಂದೇಶಗಳನ್ನು ನಾನು ಓದಿದ್ದೇನೆ. ನಿಮ್ಮ ಕಾಳಜಿಗೆ ಧನ್ಯವಾದ. ನನ್ನ ಆರೋಗ್ಯ ಸರಿ ಆದ ನಂತರದಲ್ಲಿ ನಾನು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯನಾಗುತ್ತೇನೆ. ನಿಮ್ಮ ಪ್ರೀತಿ-ಕಾಳಜಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದಿದ್ದಾರೆ.

ಸದ್ದು ಮಾಡಿದ್ದ ಸಂಜನಾ ಮತಾಂತರ ವಿಚಾರ ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಕಾಟನ್‌ಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ವಕೀಲರೊಬ್ಬರು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದರು. ಸಂಜನಾರನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರುನಾಮಕರಣ ಮಾಡಲಾಗಿತ್ತು ಎನ್ನಲಾಗಿದೆ. ಜೈಲಿನಿಂದ ಬಿಡುಗಡೆ ಬಳಿಕ ಸಂಜನಾ ಅಜ್ಞಾತ ಸ್ಥಳಕ್ಕೆ ಶಿಫ್ಟ್​ ಆಗಿದ್ದರು.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ