AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್​ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು

ನಟಿ ಸಂಜನಾ ಗಲ್ರಾನಿ ಅವರು ರಾಹುಲ್ ತೋನ್ಸೆ ವಿರುದ್ಧ ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. ರಾಹುಲ್‌ಗೆ 61.50 ಲಕ್ಷ ರೂಪಾಯಿ ದಂಡ ಮತ್ತು 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2018-19ರಲ್ಲಿ ನಡೆದ ಈ ಘಟನೆಯಲ್ಲಿ ರಾಹುಲ್ ಹೂಡಿಕೆ ಆಮಿಷದ ಮೂಲಕ ಸಂಜನಾರನ್ನು ವಂಚಿಸಿದ್ದ.

ಸಂಜನಾ ಗಲ್ರಾನಿಗೆ ವಂಚನೆ ಮಾಡಿದ ರಾಹುಲ್​ಗೆ 61 ಲಕ್ಷ ರೂ. ದಂಡ, ಆರು ತಿಂಗಳು ಜೈಲು
ರಾಹುಲ್-ಸಂಜನಾ
Follow us
Shivaprasad
| Updated By: ರಾಜೇಶ್ ದುಗ್ಗುಮನೆ

Updated on:Apr 07, 2025 | 7:05 AM

ನಟಿ ಸಂಜನಾ ಗಲ್ರಾನಿ (Sanjjana Galrani) ಅವರು ಸಿನಿಮಾ ಮೂಲಕ ಅಷ್ಟಾಗಿ ಸದ್ದು ಮಾಡುತ್ತಿಲ್ಲ. ಆದರೆ, ಒಂದಿಲ್ಲಾ ಒಂದು ಕಾರಣಕ್ಕೆ ಅವರು ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಈ ಮೊದಲು ವಂಚನೆಗೆ ಒಳಗಾದ ಪ್ರಕರಣ ಸುದ್ದಿ ಆಗಿತ್ತು. ರಾಹುಲ್ ತೋನ್ಸೆ ಇಂದ ವಂಚನೆ ಆಗಿದೆ ಎಂದು ಅವರು ದೂರಿದ್ದರು. ಈ ಪ್ರಕರಣದಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ. 61.50 ಲಕ್ಷ ರೂಪಾಯಿ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ನಟಿಗೆ ನ್ಯಾಯ ಸಿಕ್ಕಂತೆ ಆಗಿದೆ.

2018-19ರ ಪ್ರಕರಣ

2018-19ರಲ್ಲಿ ನಡೆದ ಘಟನೆ ಇದಾಗಿದೆ. ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡೋದಾಗಿ ರಾಹುಲ್ ಆಮಿಷವೊಡ್ಡಿದ್ದ. ಆ ಬಳಿಕ ಗಲ್ರಾನಿಯಿಂದ ರಾಹುಲ್ 45 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ. ಇಂದಿರಾ ನಗರ ಠಾಣೆಯಲ್ಲಿ ರಾಹುಲ್ ಹಾಗೂ ಆತನ ಕುಟುಂಬದ ವಿರುದ್ಧ ಸಂಜನಾ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಕೋರ್ಟ್​ ವಿಚಾರಣೆಯಲ್ಲಿ ರಾಹುಲ್ ತೋನ್ಸೆ ಅಪರಾಧಿ ಎಂದು ಸಾಬೀತಾಗಿದೆ. ಹೀಗಾಗಿ, ಶಿಕ್ಷೆ ವಿಧಿಸಲಾಗಿದೆ.

ರಾಹುಲ್ ಕ್ಯಾಸಿನೊ ಮಾಲೀಕ

ರಾಹುಲ್ ದೊಡ್ಡ ಉದ್ಯಮಿ. ರಾಹುಲ್ ಗೋವಾ ಹಾಗೂ ಕೊಲಂಬೋದಲ್ಲಿ ಕ್ಯಾಸಿನೊ ನಡೆಸುತ್ತಿದ್ದ. ಈ ಪ್ರಕರಣದಲ್ಲಿ ರಾಹುಲ್ ತಂದೆ ರಾಮಕೃಷ್ಣ, ತಾಯಿ ರಾಜೇಶ್ವರಿ ಕೂಡ ಶಾಮೀಲಾಗಿದ್ದರು ಎನ್ನಲಾಗಿತ್ತು. ಅವರ ವಿರುದ್ಧವೂ ಎಫ್​ಐಆರ್ ದಾಖಲಾಗಿತ್ತು.  ಇದಲ್ಲದೆ, ಉದ್ಯಮಿಗೆ 25 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪವೂ ಇವನ ಮೇಲೆ ಇದೆ.

ಇದನ್ನೂ ಓದಿ
Image
ಸಿಕಂದರ್ ಸೋಲು: ಅಭಿಮಾನಿಗಳ ಮಾತು ಕೇಳಲು ಒಪ್ಪಿದ ಸಲ್ಮಾನ್ ಖಾನ್
Image
ಫೋಟೋದಿಂದ ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು
Image
25.5 ಕೋಟಿ ರೂ ವಂಚನೆ: ರಾಹುಲ್ ತೋನ್ಸೆ ವಿರುದ್ಧ ಲುಕೌಟ್ ನೋಟಿಸ್
Image
ಕೋಟ್ಯಂತರ ರೂ ನಾಮ: ಸ್ಯಾಂಡಲ್​ವುಡ್ ಡ್ರಗ್ ಕೇಸ್ ಆರೋಪಿಯಿಂದ ವಂಚನೆ

ಸದ್ದು ಮಾಡಿದ್ದ ಸಂಜನಾ ವಿವಾಹ ವಿಚಾರ

ನಟಿ ಸಂಜನಾ ಅವರು 2021ರಲ್ಲಿ ವೈದ್ಯ ಅಜೀಜ್ ಪಾಶಾ ಅವರನ್ನು ವಿವಾಹ ಆದರು. ಅವರು ಮುಸ್ಲಿಂ ಧರ್ಮದವರನ್ನು ಮದುವೆ ಆದ ವಿಚಾರಕ್ಕೆ ಸಾಕಷ್ಟು ಟೀಕೆಗೆ ಒಳಗಾದರು. ಅಲ್ಲದೆ ಅವರು ಮಹಿರಾ ಎಂದು ಹೆಸರು ಬದಲಿಸಿಕೊಂಡಿದ್ದಕ್ಕೂ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಈ ದಂಪತಿಗೆ ಒಂದು ಮಗು ಇದೆ. ಮಗುವಿನ ಜೊತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಇದನ್ನೂ ಓದಿ: ಬೆಂಗಳೂರಿನ ಉದ್ಯಮಿಗೆ 25.5 ಕೋಟಿ ರೂ ವಂಚನೆ: ರಾಹುಲ್ ತೋನ್ಸೆ ವಿರುದ್ಧ ಲುಕೌಟ್ ನೋಟಿಸ್

ಸಂಜನಾ ಸಿನಿಮಾ ಜರ್ನಿ

ಸಂಜನಾ ಗಲ್ರಾನಿ ಅವರ ಸಿನಿಮಾ ಜರ್ನಿ ವಿಚಾರಕ್ಕೆ ಬರೋದಾದರೆ 2006ರ ‘ಗಂಡ ಹೆಂಡತಿ’ ಸಿನಿಮಾ ಮೂಲಕ ಸಾಕಷ್ಟು ಫೇಮಸ್ ಆದರು. ಆ ಬಳಿಕ ತೆಲುಗು, ತಮಿಳು ಭಾಷೆಗಳಲ್ಲಿ ನಟಿಸಿದರು. ಈಗ ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Mon, 7 April 25

ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ