AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 6ಕ್ಕೆ ಮತ್ತೆ ಬಿಡುಗಡೆ ಆಗಲಿದೆ ‘ಸಂಜು ವೆಡ್ಸ್ ಗೀತಾ 2’; ಈ ಬಾರಿ ಬದಲಾವಣೆ ಏನು?

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟಿಸಿದ್ದಾರೆ. ಈ ಮೊದಲು ಸಿನಿಮಾ ಬಿಡುಗಡೆ ಆಗಿದ್ದಾಗ ಚಿತ್ರದ ಅವಧಿ 2 ಗಂಟೆ 2 ನಿಮಿಷ ಇತ್ತು. ಈಗ ಅದಕ್ಕೆ 21 ನಿಮಿಷಗಳ ದೃಶ್ಯವನ್ನು ಸೇರಿಸಲಾಗಿದೆ. ಜೂನ್ 2ರಂದು ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ನಡೆಯಲಿದೆ. ಜೂನ್ 6ಕ್ಕೆ ಚಿತ್ರ ಬಿಡುಗಡೆ ಆಗಲಿದೆ.

ಜೂನ್ 6ಕ್ಕೆ ಮತ್ತೆ ಬಿಡುಗಡೆ ಆಗಲಿದೆ ‘ಸಂಜು ವೆಡ್ಸ್ ಗೀತಾ 2’; ಈ ಬಾರಿ ಬದಲಾವಣೆ ಏನು?
Srinagara Kitty, Rachita Ram
ಮದನ್​ ಕುಮಾರ್​
|

Updated on: May 23, 2025 | 9:51 PM

Share

ಶ್ರೀನಗರ ಕಿಟ್ಟಿ, ರಚಿತಾ ರಾಮ್ (Rachita Ram) ನಟನೆಯ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾ ಹಲವು ಕಾರಣಗಳಿಂದ ನಿರೀಕ್ಷೆ ಮೂಡಿಸಿತ್ತು. ಆದರೆ ಸಿನಿಮಾದ ರಿಲೀಸ್ ಸಂದರ್ಭದಲ್ಲಿ ಕೆಲವು ಸಮಸ್ಯೆಗಳು ಎದುರಾಗಿದ್ದವು. ಆದ್ದರಿಂದ ಜನವರಿ 17ರಂದು ಗಡಿಬಿಡಿಯಲ್ಲಿ ಸಿನಿಮಾವನ್ನು ತೆರೆಕಾಣಿಸಲಾಗಿತ್ತು. ‘ಸಂಜು ವೆಡ್ಸ್​ ಗೀತಾ 2’ (Sanju Weds Geetha 2) ನೋಡಿದ ಪ್ರೇಕ್ಷಕರು ಕಂಟೆಂಟ್, ಹಾಡುಗಳು, ಅದ್ದೂರಿ ಮೇಕಿಂಗ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದರು. ಆದರೂ ಕೂಡ ಇನ್ನೂ ಚೆನ್ನಾಗಿ ಸಿನಿಮಾ ಮಾಡಬಹುದಿತ್ತು ಎಂಬ ಅಭಿಪ್ರಾಯ ಸಹ ಕೆಲವರಿಂದ ಕೇಳಿಬಂದಿತ್ತು. ಆ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಗಮನ ಹರಿಸಿದರು. ಸಿನಿಮಾಗೆ ಹೊಸ ರೂಪ ನೀಡಲು ನಿರ್ಧರಿಸಿದರು.

ಜನವರಿ ತಿಂಗಳಲ್ಲಿ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಬಿಡುಗಡೆ ವೇಳೆ ಕೆಲವು ವಿಘ್ನಗಳು ಎದುರಾದ ಕಾರಣ ಎಲ್ಲವನ್ನೂ ಗಮನಿಸಲು ಚಿತ್ರತಂಡಕ್ಕೆ ಸಾಧ್ಯ ಆಗಿರಲಿಲ್ಲ. ಆದ್ದರಿಂದ ಮೂರೇ ದಿನದಲ್ಲಿ ಚಿತ್ರದ ಪ್ರದರ್ಶನವನ್ನು ಎಲ್ಲ ಕಡೆಗಳಲ್ಲಿ ನಿಲ್ಲಿಸಲಾಗಿತ್ತು. ಈಗ ಇದೇ ಸಿನಿಮಾಗೆ ಹೊಸದಾಗಿ 21 ನಿಮಿಷಗಳ ದೃಶ್ಯವನ್ನು ಮರು ಜೋಡಿಸಲಾಗಿದೆ. ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಹೊಸ ವರ್ಷನ್ ಜೂನ್ 6ರಂದು ರಿಲೀಸ್ ಆಗಲಿದೆ.

ಸಿನಿಮಾದ ಮರು ಬಿಡುಗಡೆ ಬಗ್ಗೆ ಮಾಹಿತಿ ನೀಡಲು ಚಿತ್ರತಂಡದವರು ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಮಾತನಾಡಿದರು. ‘ಯಾವುದೇ ಸಿನಿಮಾ ತಂಡದವರು ನಮ್ಮ ಬಳಿ ಬಂದಾಗ ಸಂಪೂರ್ಣ ಸಹಕಾರ ನೀಡುತ್ತೇವೆ. ಸಂಜು ವೆಡ್ಸ್ ಗೀತಾ-2 ಸಿನಿಮಾದ ನಿರ್ಮಾಪಕರು ಜೂನ್ 6ಕ್ಕೆ ರಿಲೀಸ್‌‌ ಮಾಡಬೇಕು ಎಂದುಕೊಂಡಿದ್ದಾರೆ. ಇವರಿಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸಿನಿಮಾಗೆ ಈಗ ಹೆಚ್ಚಿನ ದೃಶ್ಯಗಳನ್ನು ಸೇರಿಸಿದ್ದು ಮೊದಲಿಗಿಂತ ಉತ್ತಮವಾಗಿ ಸಿನಿಮಾ ಮೂಡಿಬಂದಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
Image
ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ
Image
ರಾಕಿಂಗ್ ಸ್ಟಾರ್ ಯಶ್ ಈ ವ್ಯಕ್ತಿಗೆ ಬಾಸ್ ಎಂದು ಕರೆಯುತ್ತಾರೆ ಯಶ್
Image
ಕಡಲ ತೀರದಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರ

ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡಿ, ‘ಬಿಡುಗಡೆಗೆ ಕೇವಲ ಮೂರು ದಿನ ಇರುವಾಗ ಸ್ಟೇ ತಂದಿದ್ದರಿಂದ ನಮಗೆ ಬಹಳ ತೊಂದರೆ ಆಯಿತು. ಎಲ್ಲ ಸೆಟಪ್ ಆಗಿದ್ದರಿಂದ ಸ್ಟೇ ವೆಕೇಟ್ ಮಾಡಿಸಿ ಸಿನಿಮಾ ಬಿಡುಗಡೆ ಮಾಡಲೇಬೇಕಿತ್ತು. ಬಳಿಕ ಮೂರು ದಿನದಲ್ಲಿ ಸಿನಿಮಾ ನಿಲ್ಲಿಸಿದೆವು. ಈಗ 20 ನಿಮಿಷಗಳ ಪ್ರಮುಖವಾದ ಹೃದಯಸ್ಪರ್ಶಿ ದೃಶ್ಯವನ್ನು ಸೇರಿಸಿ ರಿಲೀಸ್ ಮಾಡುತ್ತಿದ್ದೇವೆ’ ಎಂದರು.

ಇದನ್ನೂ ಓದಿ: ಇದು ಬರೀ ಸಿನಿಮಾ ಹಾಡಲ್ಲ, ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು

ನಾಗಶೇಖರ್ ಅವರು ಕೂಡ ಸಿನಿಮಾ ಬಗ್ಗೆ ಮಾತನಾಡಿದರು. ‘ಸ್ಟೇ ತಂದಿದ್ದರಿಂದ ನಿರ್ಮಾಪಕರು ಸಂಬಂಧವಿಲ್ಲದ ವಿಷಯಕ್ಕೆ ತೊಂದರೆ ಅನುಭವಿಸಬೇಕಾಯಿತು. 21 ನಿಮಿಷಗಳ ಸಿಜಿ ಪ್ಲ್ಯಾನ್ ಆಗಿತ್ತು. ಅದೇ ಚಿತ್ರದ ಹೃದಯಸ್ಪರ್ಶಿ ಭಾಗ. ಅದೇ ಇಲ್ಲದೆ ಸಿನಿಮಾ ಬಿಡುಗಡೆ ಆಗಿತ್ತು. ಈಗ 21 ನಿಮಿಷ ಸೇರಿಸಿ ಎಸ್. ಮಹೇಂದರ್ ಅವರಿಗೆ ತೋರಿಸಿದೆವು. ಬಹಳ ಚೆನ್ನಾಗಿದೆ ಎಂದು ಅವರು ಹೊಗಳಿದರು. ಎಸ್. ನಾರಾಯಣ್, ಎಪಿ. ಅರ್ಜುನ್ ಸೇರಿದಂತೆ 22 ನಿರ್ದೇಶಕರಿಗೆ ಸಿನಿಮಾ ತೋರಿಸುತ್ತಿದ್ದೇವೆ’ ಎಂದು ನಾಗಶೇಖರ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ