AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ನಿಮಿಷ ಹೆಚ್ಚುವರಿ ದೃಶ್ಯಗಳೊಟ್ಟಿಗೆ ಮತ್ತೆ ಬಿಡುಗಡೆ ಆಗುತ್ತಿದೆ ‘ಸಂಜು ವೆಡ್ಸ್ ಗೀತಾ 2’

Sanju Weds Geetha 2: ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ನಟನೆಯ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಜನವರಿ 17 ರಂದು ಬಿಡುಗಡೆ ಆಗಿತ್ತು. ಆದರೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಲಿಲ್ಲ. ಇದೇ ಕಾರಣಕ್ಕೆ ಇದೀಗ ‘ಸಂಜು ವೆಡ್ಸ್ ಗೀತಾ 2’ ಸಿನಿಮಾವನ್ನು ಮರು ಬಿಡುಗಡೆ ಆಗಲಿದೆ. 20 ನಿಮಿಷದ ಹೆಚ್ಚುವರಿ ದೃಶ್ಯಗಳನ್ನು ಸೇರಿಸಲಾಗುತ್ತದೆಯಂತೆ.

20 ನಿಮಿಷ ಹೆಚ್ಚುವರಿ ದೃಶ್ಯಗಳೊಟ್ಟಿಗೆ ಮತ್ತೆ ಬಿಡುಗಡೆ ಆಗುತ್ತಿದೆ ‘ಸಂಜು ವೆಡ್ಸ್ ಗೀತಾ 2’
Sanju Weds Geetha 2
ಮಂಜುನಾಥ ಸಿ.
|

Updated on: Jan 24, 2025 | 5:17 PM

Share

ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟಿಸಿ ನಾಗಶೇಖರ್ ನಿರ್ದೇಶನ ಮಾಡಿದ್ದ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಅಸಲಿಗೆ ಜನವರಿ 10 ರಂದು ಬಿಡುಗಡೆ ಸಿನಿಮಾ ಬಿಡುಗಡೆ ಆಗಬೇಕಿತ್ತು ಆದರೆ ಸಿನಿಮಾ ಮೇಲೆ ಕೇಸು ದಾಖಲಾದ ಕಾರಣ ಸಿನಿಮಾದ ಬಿಡುಗಡೆ ಒಂದು ವಾರ ತಡವಾಗಿ ಜನವರಿ 17 ರಂದು ತೆರೆಗೆ ಬಂತು. ಸಿನಿಮಾದ ಬಗ್ಗೆ ಅಷ್ಟೇನೂ ಒಳ್ಳೆಯ ವಿಮರ್ಶೆಗಳು ಪ್ರಕಟವಾಗಲಿಲ್ಲ. ಸಿನಿಮಾ ನೋಡಿದವರು ಸಹ ಕೆಲವು ಕೊರತೆಗಳನ್ನು ಗುರುತಿಸಿದ್ದರು. ಇದೇ ಕಾರಣಕ್ಕೆ ಇದೀಗ ‘ಸಂಜು ವೆಡ್ಸ್ ಗೀತಾ 2’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ.

‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಒಂದಷ್ಟು ಆತಂಕ ಸೃಷ್ಟಿಯಾಗಿದ್ದ ಕಾರಣ ತುಸು ಆತುರದಲ್ಲಿ ಸಿನಿಮಾ ಬಿಡುಗಡೆ ಮಾಡಬೇಕಾಯ್ತು. ಸಿನಿಮಾದ ಕೆಲ ಕೊರತೆಗಳನ್ನು ಸರಿ ಮಾಡಲು ಚಿತ್ರತಂಡಕ್ಕೆ ಸಾಧ್ಯ ಆಗಿರಲಿಲ್ಲ. ಹಾಗಾಗಿ ಕಳೆದ ಜನವರಿ 20ರಿಂದಲೇ ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರದರ್ಶನವನ್ನು ವಿತರಕರಿಗೆ ಹೇಳಿ ಎಲ್ಲಾ ಕೇಂದ್ರಗಳಲ್ಲಿ ಸ್ಥಗಿತಗೊಳಿಸಲಾಗಿದೆ. ಈಗ ಹೊಸದಾಗಿ 20 ನಿಮಿಷಗಳ ಹೃದಯ ಸ್ಪರ್ಶಿ ಚಿತ್ರಣವನ್ನು ಚಿತ್ರಕ್ಕೆ ಮರು ಜೋಡಿಸಲಾಗುತ್ತಿದೆ, ಇನ್ಮುಂದೆ ನವನವೀನ ರೂಪದಲ್ಲಿ ‘ಸಂಜು ವೆಡ್ಸ್ ಗೀತಾ 2’ ಮೂಡಿಬರುತ್ತಿದೆ, ಚಿತ್ರದ ರೀ-ರಿಲೀಸ್ ದಿನಾಂಕವನ್ನು ಅತಿ ಶೀಘ್ರದಲ್ಲೇ ಪ್ರಕಟಿಸುವುದಾಗಿ ನಿರ್ಮಾಪಕ ಛಲವಾದಿ‌ ಕುಮಾರ್ ಹಾಗೂ ನಿರ್ದೇಶಕ ನಾಗಶೇಖರ್ ಅವರುಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ

ಹೆಚ್ಚುವರಿ ದೃಶ್ಯಗಳನ್ನು ಸೇರಿಸುತ್ತಿರುವ ಕಾರಣ ಸಿನಿಮಾಕ್ಕೆ ಮತ್ತೊಮ್ಮೆ ಸೆನ್ಸಾರ್ ಸಹ ಮಾಡಿಸಬೇಕಾಗಿದೆ. ಅಲ್ಲದೆ ಕೆಲವು ಹೊಸ ದೃಶ್ಯಗಳನ್ನು ಚಿತ್ರೀಕರಣ ಮಾಡಿಸಿ ಸೇರಿಸುವ ಯೋಜನೆಯನ್ನು ಸಹ ಚಿತ್ರತಂಡ ಹಾಕಿಕೊಂಡಿದೆ. ಕಾಮಿಡಿ ದೃಶ್ಯಗಳು, ಸೆಂಟಿಮೆಂಟ್ ಹಾಗೂ ಆಕ್ಷನ್ ದೃಶ್ಯಗಳನ್ನು ಸೇರಿಸಲಾಗುತ್ತದೆಯಂತೆ ಜೊತೆಗೆ ಕೆಲವೆಡೆ ಮ್ಯೂಸಿಕ್ ಅನ್ನು ಬದಲಾಯಿಸುವ ಸಾಧ್ಯತೆ ಇದೆ. ಎಡಿಟಿಂಗ್ ಅನ್ನು ಸಹ ಮಾಡಲಾಗುತ್ತದೆ.

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ನಟಿಸಿದ್ದಾರೆ. ಈ ಮೊದಲು ‘ಸಂಜು ವೆಡ್ಸ್ ಗೀತಾ’ ಸಿನಿಮಾ ನಿರ್ದೇಶನ ಮಾಡಿದ್ದ ನಾಗಶೇಖರ್ ಅವರೇ ಈ ಸಿನಿಮಾದ ನಿರ್ದೇಶನವನ್ನು ಸಹ ಮಾಡಿದ್ದಾರೆ. ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ರೇಷ್ಮೆ ಬೆಳೆಗಾರನ ಪಾತ್ರದಲ್ಲಿ ನಟಿಸಿದ್ದಾರೆ. ರಚಿತಾ ರಾಮ್ ಶ್ರೀಮಂತರ ಪುತ್ರಿ. ಕಿಟ್ಟಿ ಕೊಡುವ ರೇಷ್ಮೆ ಸೀರೆ ಧರಿಸಿ ‘ಮಿಸ್ ಕರ್ನಾಟಕ’ ಕಾಂಪಿಟೇಷನ್ ಗೆಲ್ಲುತ್ತಾರೆ. ಹೀಗೆ ಕತೆ ಲವ್ ಸ್ಟೋರಿ ಇನ್ನಿತರೆ ವಿಷಯಗಳ ಸುತ್ತ ಸುತ್ತುತ್ತದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ