‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ

|

Updated on: Jan 13, 2025 | 1:09 PM

Sanju Weds Geetha 2: ಜನವರಿ 10 ರಂದು ಬಿಡುಗಡೆ ಆಗಬೇಕಿದ್ದ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಬಿಡುಗಡೆಗೆ ತಡೆಯಾಜ್ಞೆ ನೀಡಲಾಗಿತ್ತು. ಆದರೆ ಇದೀಗ ತಡೆಯಾಜ್ಞೆ ತೆರವಾಗಿದ್ದು, ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಸಿನಿಮಾಕ್ಕೆ ತಡೆಯಾಜ್ಞೆ ನೀಡಲಾಗಿದ್ದಿದ್ದು ಏಕೆಂದು ನಿರ್ದೇಶಕರು ವಿವರಿಸಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ
Sanju Weds Geetha 2
Follow us on

ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟನೆಯ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಕಳೆದ ವಾರವೇ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಬಿಡುಗಡೆ ವಿರುದ್ಧ ಹೈದರಾಬಾದ್ ನ್ಯಾಯಲಯ ತಡೆಯಾಜ್ಞೆ ನೀಡಿದ ಕಾರಣ ಸಿನಿಮಾ ಬಿಡುಗಡೆ ರದ್ದಾಗಿತ್ತು. ಆದರೆ ಇದೀಗ ಕೋರ್ಟ್​ ತಡೆಯಾಜ್ಞೆ ರದ್ದಾಗಿದ್ದು, ಚಿತ್ರತಂಡ ಸಿನಿಮಾದ ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಜನವರಿ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ವಿರುದ್ಧ ಹೈದರಾಬಾದ್​ನ ಫೈನ್ಯಾನ್ಶಿಯರ್ ಒಬ್ಬರು ತಡೆ ನೀಡಿದ್ದರು. ಸಿನಿಮಾದ ನಿರ್ದೇಶಕ ನಾಗಶೇಖರ್ ಅವರು ತೆಲುಗಿನಲ್ಲಿ ನಿರ್ದೇಶನ ಮಾಡಿದ್ದ ‘ಗುರ್ತುಂದಾ ಸೀತಾಕಾಲಂ’ ಸಿನಿಮಾದ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ನಿರ್ಮಾಪಕರು, ಫೈನ್ಯಾನ್ಶಿಯರ್ ಹಾಗೂ ನಾಗಶೇಖರ್ ನಡುವೆ ಭಿನ್ನಾಭಿಪ್ರಾಯ ಇದ್ದ ಕಾರಣಕ್ಕೆ ಅವರು ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ‘ಸಂಜು ವೆಡ್ಸ್ ಗೀತಾ 2’ಕ್ಕೆ ನಾಗಶೇಖರ್ ನಿರ್ಮಾಪಕ ಅಲ್ಲದಿರುವ ಕಾರಣ ತಡೆ ಆಜ್ಞೆಯನ್ನು ತೆರವು ಮಾಡಲಾಗಿದೆ.

ಇದನ್ನೂ ಓದಿ:‘ಸಂಜು ವೆಡ್ಸ್ ಗೀತ 2’ ಬಿಡುಗಡೆಗೆ ಇದ್ದ ತೊಡಕು ನಿವಾರಣೆ: ವಿವರ ನೀಡಿದ ನಾಗಶೇಖರ್

ನಾಗಶೇಖರ್ ಅವರು ಇತ್ತೀಚೆಗಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವಂತೆ, ‘ಸಂಜು ವೆಡ್ಸ್ ಗೀತಾ 2’, ತಮ್ಮ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಸಿನಿಮಾ ಎಂದು ಭಾವಿಸಿ ಹೈದರಾಬಾದ್​ನ ಫೈನ್ಯಾನ್ಶಿಯರ್ ದೂರು ದಾಖಲಿಸಿದ್ದರಂತೆ. ಆದರೆ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ನಿರ್ಮಾಪಕ ನಾನಲ್ಲ, ಅದು ಸಂಪೂರ್ಣವಾಗಿ ಪವಿತ್ರಾ ಇಂಟರ್ನ್ಯಾಷನಲ್ ಮೂವಿ ಮೇಕರ್ಸ್ ನಿರ್ಮಾಣ ಸಂಸ್ಥೆಯ ಸಿನಿಮಾ ಆಗಿದೆ. ಇದೇ ಕಾರಣ ನೀಡಿ ತಡೆಯಾಜ್ಞೆ ರದ್ದು ಮಾಡಿಸಿದ್ದೇವೆ’ ಎಂದು ಹೇಳಿದ್ದರು.

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾಗಿ ನಟಿಸಿದ್ದಾರೆ. ರಚಿತಾ ರಾಮ್ ನಾಯಕಿ. ಸಿನಿಮಾದ ಕತೆ ಬರೆದಿರುವುದು ಚಕ್ರವರ್ತಿ ಚಂದ್ರಚೂಡ್. ನಾಗಶೇಖರ್ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಕೆಲ ಹಾಡುಗಳು ಈಗಾಗಲೇ ಬಿಡುಗಡೆ ಆಗಿವೆ. ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಾಗಿಲ್ಲ, ಬದಲಿಗೆ ನೇರವಾಗಿ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ. ಜನವರಿ 17 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ