AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಟ್ಜರ್ಲ್ಯಾಂಡ್​ನ ಚಳಿಯಲ್ಲಿ‘ಸಂಜು ವೆಡ್ಸ್ ಗೀತಾ 2‘ ಚಿತ್ರೀಕರಣ

Sanju Weds Geetha 2: ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಹಾಡುಗಳ ಚಿತ್ರೀಕರಣವನ್ನು ಸ್ವಿಡ್ಜರ್​​ಲ್ಯಾಂಡ್​ನಲ್ಲಿ ಮಾಡಲಾಗಿದೆ. ಅಲ್ಲಿನ ಅನುಭವದ ಬಗ್ಗೆ ಚಿತ್ರತಂಡ ಮಾತನಾಡಿದೆ.

ಸ್ವಿಟ್ಜರ್ಲ್ಯಾಂಡ್​ನ ಚಳಿಯಲ್ಲಿ‘ಸಂಜು ವೆಡ್ಸ್ ಗೀತಾ 2‘ ಚಿತ್ರೀಕರಣ
ಮಂಜುನಾಥ ಸಿ.
|

Updated on:Dec 30, 2023 | 7:47 PM

Share

ಕೆಲವು ತಿಂಗಳ ಹಿಂದೆ ‘ಸಂಜು ವೆಡ್ಸ್ ಗೀತಾ 2‘ (Sanju weds Geetha 2) ಸಿನಿಮಾದ ಚಿತ್ರೀಕರಣ ಅಂತಿಮ ಘಟ್ಟಕ್ಕೆ ಬಂದಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರತಂಡ ಸ್ವಿಟ್ಜರ್ ಲ್ಯಾಂಡ್ ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಳ್ಳಲೆಂದು ಸಿನಿಮಾದ ನಿರ್ದೇಶಕ‌ ನಾಗಶೇಖರ್ ಹಾಗೂ ಚಿತ್ರತಂಡ ಮಾದ್ಯಮಗಳ ಮುಂದೆ ಬಂದಿತ್ತು. ಅಶೋಕ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ನಾಗಶೇಖರ್ ಹಿಂದೆ ‘ಸಂಜು ವೆಡ್ಸ್ ಗೀತಾ’ ಮೊದಲ ಸಿನಿಮಾ ಮಾಡುವಾಗ ಆದ ಅನುಭವಗಳನ್ನು ಮೆಲಕು ಹಾಕಿದರು. ಅಲ್ಲದೆ ಈ ಚಿತ್ರ ಅದಕ್ಕಿಂತ ಚೆನ್ನಾಗಿ, ಸುಂದರವಾಗಿ ಮೂಡಿಬರುತ್ತಿದೆ. ಇತ್ತೀಚೆಗಷ್ಟೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಹಾಡುಗಳ ಚಿತ್ರೀಕರಣ ಮಾಡಿಕೊಂಡು ಬಂದಿದ್ದೇವೆ. ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’’ ಎಂದರು.

‘ಸಂಜು ವೆಡ್ಸ್ ಗೀತಾ’ ಸಿನಿಮಾಕ್ಕೆ ಪ್ರೇಕ್ಷಕರ ಪ್ರೇಮ ದೊರಕಿದ ಕಾರಣದಿಂದ ಭಾಗ ಎರಡು ಇಷ್ಟು ಅದ್ದೂರಿಯಾಗಿ ಮೂಡಿಬರುತ್ತಿದೆ. ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ. ನನ್ನ‌ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್ ಮೆಟ್ ಕುಮಾರ್ ಕೈಜೋಡಿಸಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಅದ್ಭುತವಾದ ಟ್ಯೂನ್ ಗಳನ್ನು ಮಾಡಿ ಕೊಟ್ಟಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ರಚಿತಾ ರಾಮ್, ಶ್ರೀನಗರ ಕಿಟ್ಟಿ ಇಬ್ಬರೂ ಅದ್ಭುತ ಅಭಿನಯ ನೀಡಿದ್ದಾರೆ. 2024ರ ಬ್ಲಾಕ್ ಬಸ್ಟರ್ ಸಿನಿಮಾ ಆಗಲಿದೆ ‘ಸಂಜು ವೆಡ್ಸ್ ಗೀತಾ’ ಎಂದರು.

ಇದನ್ನೂ ಓದಿ:ಸಂಜು ವೆಡ್ಸ್ ಗೀತಾ 2: ಅರುಣ್ ಸಾಗರ್ ಹಾಡಿದ ಚೈನೀಸ್ ಹಾಡು ಕೇಳಿ

ಇಂಥ ಒಳ್ಳೆ ನಿರ್ಮಾಪಕರು ನಮ್ಮ ಚಿತ್ರಕ್ಕೆ ಸಿಕ್ಕಿದ್ದಾರೆ. ಯಾವುದಕ್ಕೂ ಹಿಂದೇಟು ಹಾಕಲ್ಲ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಿರಿಯ ನಿರ್ದೇಶಕ ಎಸ್.ಮಹೇಂದರ್, ನಟ ಶರಣ್ ಆಗಮಿಸಿ ನಾಗಶೇಖರ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಬಗ್ಗೆ ಮಾತನಾಡಿದರು. ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ ‘‘ಸ್ವಿಟ್ಜರ್​ಲ್ಯಾಂಡ್​ನಲ್ಲಿ ಕೊರೆಯುವ ಚಳಿ ಇತ್ತು. ವಿಷಮ ಪರಿಸ್ಥಿತಿಯನ್ನು ಸಹಿಸಿಕೊಂಡು ಕೆಲಸ ಮಾಡಿದ್ದೇವೆ ಅದಕ್ಕೆ ತಕ್ಕಂತೆ ಹಾಡುಗಳು ತುಂಬಾ ಚೆನ್ನಾಗಿ ಬಂದಿವೆ ಎಂದರು.

ನಾಯಕಿ ರಚಿತಾ ರಾಮ್ ಮಾತನಾಡಿ ‘ಭಿನ್ನ ಶೇಡ್ಸ್ ಇರುವಂಥ ಗೀತಾ ಪಾತ್ರ ನನ್ನದು. ಸಿನಿಮಾ ಅಂದ್ರೆ ಖುಷಿ, ಕಷ್ಟ ಎರಡೂ ಇರುತ್ತೆ. ನಾವು ಹೋಗಿದ್ದೇ ಡಿಸೆಂಬರ್ ಚಳಿಯಲ್ಲಿ. ನಾಗಶೇಖರ್ ಏನೇ ಮಾಡಿದರೂ ಯೋಜನೆ ಹಾಕಿಕೊಂಡು ಮಾಡ್ತಾರೆ. ನಮಗೆ ಪ್ರಕೃತಿ ಕೂಡ ತುಂಬಾ ಬೆಂಬಲ ಮಾಡಿತು. ಅಲ್ಲಿ ಮಾಡಿದ ಎರಡು ಹಾಡುಗಳೂ ತುಂಬಾ ಚೆನ್ನಾಗಿ ಬಂದಿವೆ. ಲೊಕೇಶನ್ ಅದ್ಭುತ. ಸತ್ಯ ಹೆಗಡೆ ಸರ್ ಬೇರೆ ಬೇರೆ ಆ್ಯಂಗಲ್ ನಲ್ಲಿ ಶೂಟ್ ಮಾಡಿದ್ದಾರೆ. ಎಮೋಷನಲ್ ಸೀನ್ಸ್ ಬಹಳ ಚೆನ್ನಾಗಿ ಬಂದಿದೆ ಎಂದರು.

ಸಂಗೀತ ನಿರ್ದೇಶಕ‌ ಶ್ರೀಧರ ವಿ. ಸಂಭ್ರಮ ಚಿತ್ರದಲ್ಲಿ 5 ಸುಂದರ ಹಾಡುಗಳಿಗೆ ಸಂಗೀತ ನೀಡಿದ್ದು, ಕವಿರಾಜ ಅವರು ಸಾಹಿತ್ಯ ಬರೆದಿದ್ದಾರೆ. ನಿರ್ಮಾಪಕ ಚಲವಾದಿ ಕುಮಾರ್‌ ಮಾತನಾಡಿ, ನಾಗಶೇಖರ್ ನಾನು ಇಂಜಿನಿಯರಿಂಗ್ ಕ್ಲಾಸ್ ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚೆನ್ನಾಗಿ ಬರುತ್ತಿದೆ ಎಂದರು. ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್ ನ್ಯಾಷನಲ್ ಮೂವಿ ಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Sat, 30 December 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ