AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಸ್ಟಾರ್ ನಟನ ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ

ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಅವರು ತೆಲುಗು ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ನಾನಿ ನಟನೆಯ ಈ ಚಿತ್ರದ ಟ್ರೈಲರ್‌ನಲ್ಲಿ ಸಾನ್ವಿ ಅವರ ಧ್ವನಿ ಕೇಳಬಹುದು. ಪಾಪ್ ಹಾಡುಗಳಿಗೆ ಹೆಸರಾಗಿರುವ ಸಾನ್ವಿ ಅವರು ಭವಿಷ್ಯದಲ್ಲಿ ಗಾಯಕಿಯಾಗುವ ಸಾಧ್ಯತೆಯಿದೆ. ನಾನಿ ಹೇಳಿದ ಮಾತನ್ನು ನೀವೇ ಕೇಳಿ.

ತೆಲುಗು ಸ್ಟಾರ್ ನಟನ ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ
ಸುದೀಪ್-ಸಾನ್ವಿ
ರಾಜೇಶ್ ದುಗ್ಗುಮನೆ
|

Updated on: Apr 25, 2025 | 12:49 PM

Share

ಕಿಚ್ಚ ಸುದೀಪ್ (Kichcha Sudeep) ಮಗಳು ಸಾನ್ವಿ ಅವರು ಇನ್ನೂ ಶಿಕ್ಷಣೆ ಪಡೆಯುತ್ತಿದ್ದಾರೆ. ಹೀಗಿರುವಾಗಲೇ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸುದೀಪ್ ಮಗಳಿಗೆ ಹಾಡೋದು ಎಂದರೆ ಎಲ್ಲಿಲ್ಲದ ಪ್ರೀತಿ. ಭವಿಷ್ಯದಲ್ಲಿ ಅವರು ಗಾಯಕಿ ಆದರೂ ಅಚ್ಚರಿ ಏನಿಲ್ಲ. ಈಗ ಅವರು ತೆಲುಗು ಸಿನಿಮಾಗೆ ಧ್ವನಿ ಆಗಿದ್ದಾರೆ. ಯಾವುದು ಆ ಸಿನಿಮಾ? ನಾನಿ ನಟನೆಯ ‘ಹಿಟ್ 3’. ಈ ವಿಚಾರವನ್ನು ಸ್ವತಃ ನಾನಿ ಅವರೇ ರಿವೀಲ್ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.

ಸಾನ್ವಿ ಅವರ ಧ್ವನಿ ಬೇರೆಯದೇ ರೀತಿ ಇದೆ. ಪಾಪ್ ಇಂಗ್ಲಿಷ್ ಹಾಡುಗಳನ್ನು ಅವರು ಅದ್ಭುತವಾಗಿ ಹಾಡುತ್ತಾರೆ. ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ‘ಅಪ್ಪಾ ಐ ಲವ್​ ಯೂ ಪಾ..’ ಎಂದು ಹಾಡಿ ಎಲ್ಲರನ್ನೂ ಗಮನ ಸೆಳೆದಿದ್ದರು. ಈಗ ಅವರಿಗೆ ತೆಲುಗು ಸಿನಿಮಾಗೆ ಧ್ವನಿ ಆಗಿದ್ದಾರೆ ಅನ್ನೋದು ವಿಶೇಷ. ‘ಹಿಟ್ 3’ ಟ್ರೇಲರ್​ನಲ್ಲಿ ಬರೋ ಒಂದು ಆಲಾಪದಲ್ಲಿ ಸಾನ್ವಿ ಧ್ವನಿ ಇದೆ.

ಇದನ್ನೂ ಓದಿ
Image
‘ಕಾಶ್ಮೀರಕ್ಕೆ ಯಾವಾಗಲೂ ಹೋಗೋಲ್ಲ’; ಗಟ್ಟಿ ನಿರ್ಧಾರ ಮಾಡಿದ್ದ ಶಾರುಖ್
Image
ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಹಣ ಎಷ್ಟು?
Image
ನಟಿಯಾಗೋ ಪ್ಲ್ಯಾನ್ ಇರಲಿಲ್ಲ; ರಚಿತಾ ನಟಿ​ ಆಗಿರದಿದ್ದರೆ ಏನಾಗಿರುತ್ತಿದ್ದರು
Image
ಕಾರ್ತಿಕ್ ಖಾತೆಯಿಂದ ಫೋಟೋ ಕದ್ದು ಪೋಸ್ಟರ್ ಮಾಡಿದ ಕರಣ್ ಜೋಹರ್

‘ಹಿಟ್ 3’ ಸಿನಿಮಾದ ಟ್ರೇಲರ್ ಕೆಲ ದಿನಗಳ ಹಿಂದೆ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಟ್ರೇಲರ್ ಕೊನೆ ಆಗೋ ಸಂದರ್ಭದಲ್ಲಿ ಹಿನ್ನೆಲೆ ಸಂಗೀತದ ಜೊತೆ ಒಂದು ಧ್ವನಿಯ ಆಲಾಪ ಬರುತ್ತದೆ. ಇದು ಯಾರದ್ದು ಎಂಬ ವಿಚಾರ ಅನೇಕರಿಗೆ ಗೊತ್ತಿರಲಿಲ್ಲ. ಅದು ಸಾನ್ವಿ ಅವರದ್ದು ಎಂದಿರೋ ನಾನಿ ಅವರು, ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

View this post on Instagram

A post shared by Filmy Center (@filmy.centra)

ನಾನಿ ಹಾಗೂ ಸಾನ್ವಿ ಮಧ್ಯೆ ಪರಿಚಯ ಬೆಳೆಯೋಕೆ ಕಾರಣ ಆಗಿದ್ದು, ‘ಈಗ’ ಸಿನಿಮಾ. ರಾಜಮೌಳಿ ನಿರ್ದೇಶನದ ಈ ಚಿತ್ರದಲ್ಲಿ ನಾನಿ ಹೀರೋ ಆಗಿ ಕಾಣಿಸಿಕೊಂಡರೆ, ಸುದೀಪ್ ವಿಲನ್ ಪಾತ್ರ ಮಾಡಿದ್ದರು. ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ನಾನಿ ಪರಿಚಯ ಸಾನ್ವಿಗೆ ಆಗಿತ್ತು. ಆ ಬಾಂಡಿಂಗ್ ಈಗಲೂ ಮುಂದುವರಿದಿದೆ. ಭವಿಷ್ಯದಲ್ಲಿ ಸಂಗೀತ ಲೋಕವನ್ನು ಸಾನ್ವಿ ಆಯ್ಕೆ ಮಾಡಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸೆಟ್ಟೇರಿತು ಕಿಚ್ಚ ಸುದೀಪ್ ನಟನೆಯ ‘ಬಿಲ್ಲ ರಂಗ ಬಾಷ’; BRB ಫಸ್ಟ್ ಲುಕ್ ರಿವೀಲ್

‘ಹಿಟ್ 3’ ಸಿನಿಮಾ ವಿಚಾರಕ್ಕೆ ಬರೋದಾದರೆ, ನಾನಿ ಹಾಗೂ ಶ್ರೀನಿಧಿ ಶೆಟ್ಟಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೇ 1ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?