‘ಗೌರಿ’ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿದ ಸಾನ್ಯಾ ಅಯ್ಯರ್; ರಿಲೀಸ್ ಬಗ್ಗೆ ಕುತೂಹಲ
ಆಗಸ್ಟ್ ತಿಂಗಳಾಂತ್ಯದಲ್ಲಿ ‘ಗೌರಿ’ ಸಿನಿಮಾದ ಮುಹೂರ್ತ ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದಿತ್ತು. ಕೆಲವೇ ತಿಂಗಳಲ್ಲಿ ಸಿನಿಮಾ ಕೆಲಸಗಳನ್ನು ತಂಡ ಪೂರ್ಣಗೊಳಿಸಿದೆ.
ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರ ಮಗ ಸಮರ್ಜಿತ್ ಲಂಕೇಶ್ ‘ಗೌರಿ’ ಸಿನಿಮಾ ಮೂಲಕ ಹೀರೋ ಆಗುತ್ತಿದ್ದಾರೆ. ಅವರಿಗೆ ಜೊತೆಯಾಗಿ ಸಾನ್ಯಾ ಅಯ್ಯರ್ ನಟಿಸಿದ್ದಾರೆ. ಈ ಚಿತ್ರ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸೆಟ್ಟೇರಿತ್ತು. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಡಬ್ಬಿಂಗ್ ಕೆಲಸ ಮಾಡಿ ಮುಗಿಸಿದ್ದಾರೆ ಸಾನ್ಯಾ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್ ಮೂಲಕ ಸಾನ್ಯಾ ಜನಪ್ರಿಯತೆ ಹೆಚ್ಚಿತು.
ಡಬ್ಬಿಂಗ್ ಮಾಡುತ್ತಿರುವ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದಾರೆ ಸಾನ್ಯಾ. ‘ಗೌರಿ ಚಿತ್ರದ ಡಬ್ಬಿಂಗ್ ಕೆಲಸ ಮುಗಿದಿದೆ. ನನ್ನೊಂದಿಗೆ ಸದಾ ಉಳಿಯುವ ಮತ್ತು ನಿಮ್ಮ ಹೃದಯದಲ್ಲೂ ಒಂದು ಸ್ಥಾನ ಕಂಡುಕೊಳ್ಳುವ ಪಾತ್ರ. ಈ ವರ್ಷ ಗೌರಿ ಹಬ್ಬ ಇನ್ನೂ ಬೇಗನೆ ಬರಲಿದೆ’ ಎಂದು ಅವರು ಬರೆದುಕೊಂಡಿದ್ದಾರೆ. ಡಬ್ಬಿಂಗ್ ಸಂದರ್ಭದಲ್ಲಿ ಸಲಹೆ ನೀಡಿದ ಇಂದ್ರಜಿತ್ ಲಂಕೇಶ್ ಅವರಿಗೆ ಸಾನ್ಯಾ ಧನ್ಯವಾದ ಹೇಳಿದ್ದಾರೆ.
ಆಗಸ್ಟ್ ತಿಂಗಳಾಂತ್ಯದಲ್ಲಿ ‘ಗೌರಿ’ ಸಿನಿಮಾದ ಮುಹೂರ್ತ ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದಿತ್ತು. ಮುಹೂರ್ತ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಜಿ ಭೇಟಿ ನೀಡಿ ಸಮರ್ಜಿತ್‌ಗೆ ಆಶೀರ್ವಾದ ಮಾಡಿದ್ದರು. ಕೆಲವೇ ತಿಂಗಳಲ್ಲಿ ಸಿನಿಮಾ ಕೆಲಸಗಳನ್ನು ತಂಡ ಪೂರ್ಣಗೊಳಿಸಿದೆ.
View this post on Instagram
ಇದನ್ನೂ ಓದಿ: ಇಂದ್ರಜಿತ್ ಲಂಕೇಶ್ ಪುತ್ರನ ಮೊದಲ ಸಿನಿಮಾ ಹೆಸರು ‘ಗೌರಿ’; ಮುಹೂರ್ತಕ್ಕೆ ಸಿದ್ದರಾಮಯ್ಯ ಅತಿಥಿ
‘ಗೌರಿ’ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶನ ಇದೆ. ಮಗನಿಗಾಗಿ ಹೊಸ ರೀತಿಯ ಕಥೆ ರೆಡಿ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಪತ್ನಿ ಅರ್ಪಿತಾ ಬಂಡವಾಳ ಹೂಡಿದ್ದಾರೆ. ನಿರ್ಮಾಪಕಿಯಾಗಿ ಅವರಿಗೆ ಇದು ಮೊದಲ ಸಿನಿಮಾ. ‘ಕಾಂತಾರ’ ಸಿನಿಮಾ ಖ್ಯಾತಿಯ ನಟಿ ಮಾನಸಿ ಸುಧೀರ್ ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಖ್ಯಾತ ಸಂಗೀತ ಸಂಯೋಜಕ ಜೆಸ್ಸಿ ಗಿಫ್ಟ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ