‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು…’; ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್

Sanya Iyer: ರೂಪೇಶ್ ಶೆಟ್ಟಿ ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಟಿಪ್ಸ್ ಒಂದನ್ನು ನೀಡಿದ್ದಾರೆ.

‘ಐ ಲವ್​ ಯೂ ಎಂದು ಹೇಳಬೇಡಿ, ಅದರ ಬದಲು...’;  ಟಿಪ್ಸ್ ಕೊಟ್ಟ ಸಾನ್ಯಾ ಐಯ್ಯರ್
ಸಾನ್ಯಾ
Follow us
ರಾಜೇಶ್ ದುಗ್ಗುಮನೆ
|

Updated on:Jun 23, 2023 | 8:57 AM

ನಟಿ ಸಾನ್ಯಾ ಐಯ್ಯರ್ (Sanya Iyer) ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಬಿಗ್ ಬಾಸ್​ಗೆ ಕಾಲಿಟ್ಟ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಸಾನ್ಯಾ ಎಲ್ಲರ ಗಮನ ಸೆಳೆದರು. ಮನೆಯಲ್ಲಿ ಇದ್ದಷ್ಟು ದಿನ ಅವರು ಎಲ್ಲರನ್ನೂ ರಂಜಿಸಿದರು. ಕೆಲವು ಕಿರಿಕ್​ಗಳನ್ನು ಮಾಡಿಕೊಂಡರು. ರೂಪೇಶ್ ಶೆಟ್ಟಿ (Roopesh Shetty) ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಂಚಿಕೊಂಡ ರೀಲ್ಸ್ ವೈರಲ್ ಆಗುತ್ತಿದೆ.

ಬಿಗ್ ಬಾಸ್​ನಿಂದ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ದೊಡ್ಮನೆಗೆ ಹೋಗಿ ಬಂದವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತವೆ. ಸಾನ್ಯಾ ಐಯ್ಯರ್ ಕೂಡ ಕಿರುತೆರೆ ಅಥವಾ ಹಿರಿತೆರೆಯಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ವಿವಿಧ ರೀತಿಯ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪುನೀತ್ ರಾಜ್​ಕುಮಾರ್ ಚಿತ್ರದ ಸಾಂಗ್​ಗೆ ರೀಲ್ಸ್ ಮಾಡಿದ್ದಾರೆ.

‘ಪರಮಾತ್ಮ’ ಸಿನಿಮಾದ ‘ಹೆಸರು ಪೂರ್ತಿ ಹೇಳದೆ..’ ಹಾಡು ಸೂಪರ್ ಹಿಟ್ ಆಗಿತ್ತು. ಪುನೀತ್ ರಾಜ್​ಕುಮಾರ್ ನಟನೆಯ ಸಿನಿಮಾದ ಹಾಡು ಈಗಲೂ ಜನರ ಫೇವರಿಟ್​. ಈ ಹಾಡಿಗೆ ಸಾನ್ಯಾ ರೀಲ್ಸ್ ಮಾಡಿದ್ದಾರೆ. ಲಕ್ಷಣವಾಗಿ ಸೀರೆ ಉಟ್ಟಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ‘ಐ ಲವ್​ ಯೂ ಹೇಳಬೇಡಿ ಅದರ ಬದಲು ಈ ಹಾಡನ್ನು ಹೇಳಿ’ ಎಂದಿದ್ದಾರೆ ಸಾನ್ಯಾ.

ಇದನ್ನೂ ಓದಿ: Sanya Iyer: ‘ಚಾರ್ಮಿಂಗ್ ಬ್ಯೂಟಿ’; ಸಾನ್ಯಾ ಐಯ್ಯರ್ ಹೊಸ ಫೋಟೋಗೆ ಫಿದಾ ಆದ ಫ್ಯಾನ್ಸ್

ಸಾನ್ಯಾ ಐಯ್ಯರ್ ಇತ್ತೀಚೆಗೆ ಹಲವು ಫೋಟೋಶೂಟ್ ಮಾಡಿಸಿದ್ದಾರೆ. ಎಲ್ಲಾ ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಬಳಿ ಅವರು ಫೋಟೋಶೂಟ್ ಮಾಡಿಸಿದ್ದರು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Fri, 23 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ