ಪ್ರೇಮಿಗಳ ದಿನಾಚರಣೆ ಮರು ಬಿಡುಗಡೆ ಆಗುತ್ತಿದೆ ಸೈಡ್-ಎ, ಸೈಡ್-ಬಿ

Sapta Sagaradaache Ello: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುವ ಅವಕಾಶ ಮಿಸ್ ಮಾಡಿಕೊಂಡಿದ್ದಿರಾ? ಈಗ ಮತ್ತೊಮ್ಮ ಅವಕಾಶ ಅರಸಿ ಬಂದಿದೆ.

ಪ್ರೇಮಿಗಳ ದಿನಾಚರಣೆ ಮರು ಬಿಡುಗಡೆ ಆಗುತ್ತಿದೆ ಸೈಡ್-ಎ, ಸೈಡ್-ಬಿ
Follow us
ಮಂಜುನಾಥ ಸಿ.
|

Updated on: Feb 13, 2024 | 8:10 PM

ಇನ್ನೇನಿದ್ದರೂ ಮಾಸ್, ಕಮರ್ಶಿಯಲ್, ಥ್ರಿಲ್ಲರ್ ಜಾನರ್​ನ ಸಿನಿಮಾಗಳದ್ದಷ್ಟೆ ಜಮಾನ, ಪ್ರೇಮಕಥೆಗಳ ಜಮಾನ ಮುಗಿಯಿತು ಎಂದು ಸಿನಿಮಾ ಪ್ರೇಮಿಗಳು ಗೊಣಗುತ್ತಿರುವಾಗಲೆ ಬಿಡುಗಡೆ ಆದ ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ, ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಮಾಸ್ ಪ್ರೇಕ್ಷನ ಕಣ್ಣಲ್ಲೂ ನೀರು ತರಿಸಿತು. ಸಿನಿಮಾದ ಎರಡೂ ಭಾಗಗಳು ಪ್ರೇಕ್ಷರ ಜೊತೆಗೆ ವಿಮರ್ಶಕರಿಗೂ ಬಹಳ ಇಷ್ಟವಾಗಿದೆ. ಸೈಡ್ ಎ ಹಾಗೂ ಸೈಡ್ ಬಿ ಎರಡೂ ಸಿನಿಮಾಗಳು ಈಗಾಗಲೇ ಒಟಿಟಿಯಲ್ಲಿ ಬಿಡುಗಡೆ ಆಗಿವೆ. ಹಾಗಿದ್ದರೂ ಈ ಎರಡೂ ಸಿನಿಮಾಗಳು ಮತ್ತೆ ಚಿತ್ರಮಂದಿರಕ್ಕೆ ಬರುತ್ತಿವೆ.

ಎರಡೂ ಸಿನಿಮಾಗಳು ಒಟಿಟಿಗೆ ಬಂದ ಬಳಿಕವಂತೂ ಹೆಚ್ಚು ಜನರಿಗೆ ತಲುಪಿದ್ದು ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುವ ಅನುಭವವನ್ನು ಮಿಸ್ ಮಾಡಿಕೊಂಡಿದ್ದಾಗಿ ಹೇಳಿಕೊಂಡಿದ್ದರು. ಇದೀಗ ಆ ಅವಕಾಶ ಈಗ ಮತ್ತೆ ಬಂದಿದೆ. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ವಿಶೇಷವೆಂದರೆ ಸಿನಿಮಾದ ಸೈಡ್ ಎ ಹಾಗೂ ಸೈಡ್ ಬಿ ಒಟ್ಟಿಗೆ ಬಿಡುಗಡೆ ಆಗುತ್ತಿದ್ದು, ಒಂದರ ಹಿಂದೆ ಒಂದು ಸಿನಿಮಾ ವೀಕ್ಷಿಸಬಹುದಾಗಿದೆ.

ಪ್ರೇಮಿಗಳ ದಿನಾಚರಣೆ ಪ್ರಯುಕ್ತವಾಗಿ ಪಿವಿಆರ್-ಐನಾಕ್ಸ್ ಮಲ್ಟಿಪ್ಲೆಕ್ಸ್​ಗಳಲ್ಲಿ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಆಸಕ್ತರು ಸಿನಿಮಾವನ್ನು ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ನೋಡಿ ಆನಂದಿಸಬಹುದಾಗಿದೆ. ತಮ್ಮ ಸಿನಿಮಾ ಮರು ಬಿಡುಗಡೆ ಆಗುತ್ತಿರುವ ಖುಷಿಯ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ನಿಗದಿತ ಪಿವಿಆರ್-ಐನಾಕ್ಸ್​ಗಳಲ್ಲಿ ಮಾತ್ರವೇ ಈ ಸಿನಿಮಾ ಮರು ಬಿಡುಗಡೆ ಆಗಲಿದೆ.

ಇದನ್ನೂ ಓದಿ:ದೈವ ಕೋಲದಲ್ಲಿ ಭಾಗವಹಿಸಿ ಆಶೀರ್ವಾದ ಪಡೆದ ರಕ್ಷಿತ್ ಶೆಟ್ಟಿ

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಂಡಿದ್ದೀರ? ಇಗೋ ನಿಮಗೆ ಮತ್ತೊಂದು ಅವಕಾಶ, ಮನು, ಪ್ರಿಯಾ, ಸುರಭಿ ಹಾಗೂ ಸೋಮನ ಕತೆಯನ್ನು ಮತ್ತೊಮ್ಮೆ ಚಿತ್ರಮಂದಿರದಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಒದಗಿ ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ ನಟಿ ರುಕ್ಮಿಣಿ ವಸಂತ್.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಹೇಮಂತ್ ರಾವ್ ನಿರ್ದೇಶನ ಮಾಡಿದ್ದು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಗೋಪಾಲ್ ರಾವ್ ದೇಶಪಾಂಡೆ, ಅಚ್ಯುತ್ ಕುಮಾರ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧನಾತ್ಮಕ ಪ್ರತಿಕ್ರಿಯೆಗಳು ಸಿನಿಮಾ ಪ್ರೇಮಿಗಳಿಂದ ವ್ಯಕ್ತವಾಗಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ