ಟಿವಿಯಲ್ಲಿ ಪ್ರಸಾರ ಕಾಣಲಿದೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ; ಇಲ್ಲಿದೆ ವಿವರ
‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ 2023ರ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ ಮತ್ತೊಮ್ಮೆ ಒಂದಾದರು. ಈ ಚಿತ್ರ ತೆಲುಗಿಗೂ ಡಬ್ ಆಗಿ ರಿಲೀಸ್ ಆಗಿದೆ. ಅಲ್ಲಿಯವರೂ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.
ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ಸೂಪರ್ ಹಿಟ್ ಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಥಿಯೇಟರ್ ಹಾಗೂ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ, ಹೇಮಂತ್ ಬಿ ರಾವ್ ನಿರ್ದೇಶನದ ಈ ಚಿತ್ರ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಭಾನುವಾರ (ಸೆಪ್ಟೆಂಬರ್ 10) ರಾತ್ರಿ 7:30ಕ್ಕೆ ಸಿನಿಮಾ ಪ್ರಸಾರ ಕಾಣಲಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ.
ರಕ್ಷಿತ್ ಶೆಟ್ಟಿ ಅವರು ಮನು ಆಗಿ ಕಾಣಿಸಿಕೊಂಡರು. ಆಳ ಪ್ರೇಮ ಕಥೆ ಹಾಗೂ ಆ ಪ್ರೀತಿ ಉಳಿಸಿಕೊಳ್ಳಲು ಕಥಾ ನಾಯಕ ಮಾಡುವ ಪ್ರಯತ್ನ ಮತ್ತು ಆ ಪ್ರೀತಿ ಕೊನೆಗೊಂಡಾಗ ಆಗೋ ನೋವಿನ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಚಿತ್ರದಲ್ಲಿ ತೋರಿಸಲಾಗಿದೆ. ಈ ಸಿನಿಮಾನ ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ವೀಕ್ಷಿಸಬಹುದು.
ಜೀ ಕನ್ನಡ ವಾಹಿನಿ ಪೋಸ್ಟ್
View this post on Instagram
‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ 2023ರ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ ಮತ್ತೊಮ್ಮೆ ಒಂದಾದರು. ಈ ಚಿತ್ರ ತೆಲುಗಿಗೂ ಡಬ್ ಆಗಿ ರಿಲೀಸ್ ಆಗಿದೆ. ಅಲ್ಲಿಯವರೂ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ರುಕ್ಮಿಣಿ ವಸಂತ್ ಪ್ರಿಯಾ ಆಗಿ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್-ಬಿನಲ್ಲಿ ಈ ದೃಶ್ಯಗಳ ಗಮನಿಸಿದಿರಾ?
ಇತ್ತೀಚೆಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಒಟಿಟಿಯಲ್ಲಿ ರಿಲೀಸ್ ಆಗಿದೆ. ಇದು ಮುಂದಿನ ದಿನಗಳಲ್ಲಿ ಟಿವಿಯಲ್ಲಿ ಪ್ರಸಾರ ಕಾಣಲಿದೆ. ‘ಸಪ್ತ ಸಾಗಾರದಾಚೆ ಎಲ್ಲೋ’ ಎಷ್ಟು ಟಿಆರ್ಪಿ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ