ಟಿವಿಯಲ್ಲಿ ಪ್ರಸಾರ ಕಾಣಲಿದೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ; ಇಲ್ಲಿದೆ ವಿವರ

‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ 2023ರ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ ಮತ್ತೊಮ್ಮೆ ಒಂದಾದರು. ಈ ಚಿತ್ರ ತೆಲುಗಿಗೂ ಡಬ್ ಆಗಿ ರಿಲೀಸ್ ಆಗಿದೆ. ಅಲ್ಲಿಯವರೂ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ಟಿವಿಯಲ್ಲಿ ಪ್ರಸಾರ ಕಾಣಲಿದೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ; ಇಲ್ಲಿದೆ ವಿವರ
ರಕ್ಷಿತ್-ರಶ್ಮಿಕಾ

Updated on: Mar 09, 2024 | 10:48 AM

ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ಸೂಪರ್ ಹಿಟ್ ಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಥಿಯೇಟರ್ ಹಾಗೂ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ರಕ್ಷಿತ್ ಶೆಟ್ಟಿ ನಿರ್ಮಾಣದ, ಹೇಮಂತ್ ಬಿ ರಾವ್ ನಿರ್ದೇಶನದ ಈ ಚಿತ್ರ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಭಾನುವಾರ (ಸೆಪ್ಟೆಂಬರ್ 10) ರಾತ್ರಿ 7:30ಕ್ಕೆ ಸಿನಿಮಾ ಪ್ರಸಾರ ಕಾಣಲಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ.

ರಕ್ಷಿತ್ ಶೆಟ್ಟಿ ಅವರು ಮನು ಆಗಿ ಕಾಣಿಸಿಕೊಂಡರು. ಆಳ ಪ್ರೇಮ ಕಥೆ ಹಾಗೂ ಆ ಪ್ರೀತಿ ಉಳಿಸಿಕೊಳ್ಳಲು ಕಥಾ ನಾಯಕ ಮಾಡುವ ಪ್ರಯತ್ನ ಮತ್ತು ಆ ಪ್ರೀತಿ ಕೊನೆಗೊಂಡಾಗ ಆಗೋ ನೋವಿನ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಚಿತ್ರದಲ್ಲಿ ತೋರಿಸಲಾಗಿದೆ. ಈ ಸಿನಿಮಾನ ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ವೀಕ್ಷಿಸಬಹುದು.

ಜೀ ಕನ್ನಡ ವಾಹಿನಿ ಪೋಸ್ಟ್

‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಸಿನಿಮಾ 2023ರ ಸೆಪ್ಟೆಂಬರ್ 1ರಂದು ರಿಲೀಸ್ ಆಯಿತು. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ರಾವ್ ಮತ್ತೊಮ್ಮೆ ಒಂದಾದರು. ಈ ಚಿತ್ರ ತೆಲುಗಿಗೂ ಡಬ್ ಆಗಿ ರಿಲೀಸ್ ಆಗಿದೆ. ಅಲ್ಲಿಯವರೂ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ರುಕ್ಮಿಣಿ ವಸಂತ್ ಪ್ರಿಯಾ ಆಗಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್-ಬಿನಲ್ಲಿ ಈ ದೃಶ್ಯಗಳ ಗಮನಿಸಿದಿರಾ?

ಇತ್ತೀಚೆಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಒಟಿಟಿಯಲ್ಲಿ ರಿಲೀಸ್ ಆಗಿದೆ. ಇದು ಮುಂದಿನ ದಿನಗಳಲ್ಲಿ ಟಿವಿಯಲ್ಲಿ ಪ್ರಸಾರ ಕಾಣಲಿದೆ. ‘ಸಪ್ತ ಸಾಗಾರದಾಚೆ ಎಲ್ಲೋ’ ಎಷ್ಟು ಟಿಆರ್​ಪಿ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us