ಒಂದೇ ಪಾರ್ಟ್​​ನಲ್ಲಿ ಮುಗಿಯಲ್ಲ ‘ಸಪ್ತ ಸಾಗರದಾಚೆ ಎಲ್ಲೋ’; ರಕ್ಷಿತ್ ಬರ್ತ್​​​ಡೇಗೆ ಬಿಗ್ ಅನೌನ್ಸ್​ಮೆಂಟ್

Sapta Sagaradaache Yello Movie: ರಕ್ಷಿತ್ ಶೆಟ್ಟಿ ಜನ್ಮದಿನಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತಂಡದ ಕಡೆಯಿಂದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಎರಡು ಭಾಗದಲ್ಲಿ ಸಿನಿಮಾ ಬರುತ್ತಿದೆ ಎಂದಿದೆ ಚಿತ್ರತಂಡ.

ಒಂದೇ ಪಾರ್ಟ್​​ನಲ್ಲಿ ಮುಗಿಯಲ್ಲ ‘ಸಪ್ತ ಸಾಗರದಾಚೆ ಎಲ್ಲೋ’; ರಕ್ಷಿತ್ ಬರ್ತ್​​​ಡೇಗೆ ಬಿಗ್ ಅನೌನ್ಸ್​ಮೆಂಟ್
ರಕ್ಷಿತ್
Follow us
ರಾಜೇಶ್ ದುಗ್ಗುಮನೆ
|

Updated on:Jun 06, 2023 | 11:29 AM

ಸಿನಿಮಾಗಳನ್ನು ಎರಡು ಭಾಗದಲ್ಲಿ ರಿಲೀಸ್ ಮಾಡುವ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ‘ಬಾಹುಬಲಿ’, ‘ಕೆಜಿಎಫ್​’, ‘ಪೊನ್ನಿಯಿನ್ ಸೆಲ್ವನ್​’ ಸೇರಿ ಅನೇಕ ಸಿನಿಮಾಗಳು ವಿವಿಧ ಪಾರ್ಟ್​​ಗಳಲ್ಲಿ ಮೂಡಿ ಬಂದಿವೆ. ಈಗ ಇದಕ್ಕೆ ಹೊಸ ಸೇರ್ಪಡೆ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ (SSE Movie) ಸಿನಿಮಾ. ಇಂದು (ಜೂನ್ 6) ರಕ್ಷಿತ್ ಶೆಟ್ಟಿ ಅವರ ಜನ್ಮದಿನ. ಈ ವಿಶೇಷ ದಿನದಂದು ರಕ್ಷಿತ್ ಶೆಟ್ಟಿ (Rakshit Shetty) ಕಡೆಯಿಂದ ಈ ಘೋಷಣೆ ಆಗಿದೆ. ಪಾರ್ಟ್​ ಎ ಹಾಗೂ ಪಾರ್ಟ್​ ಬಿ ಆಗಿಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ರಿಲೀಸ್ ಆಗಲಿದೆ.

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ಸಿನಿಮಾ ಕೆಲಸಗಳ ವಿಚಾರದಲ್ಲಿ ರಕ್ಷಿತ್ ಶೆಟ್ಟಿ ಅವರು ಎಂದಿಗೂ ಗಡಿಬಿಡಿ ಮಾಡಿದವರಲ್ಲ. ತುಂಬಾನೇ ಶ್ರದ್ಧೆಯಿಂದ ಅವರು ಸಿನಿಮಾ ಮಾಡುತ್ತಾರೆ. ಈ ಕಾರಣಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಾಕಷ್ಟು ಸಮಯ ಹಿಡಿದಿದೆ. ಈಗ ಈ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವ ಘೋಷಣೆ ಕೇಳಿ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಹೀರೋ/ಹೀರೋಯಿನ್​ಗಳ ಬರ್ತ್​ಡೇ ದಿನ ವಿಶೇಷ ಪೋಸ್ಟರ್, ಟೀಸರ್ ರಿಲೀಸ್ ಆಗೋದು ಕಾಮನ್. ಅದೇ ರೀತಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತಂಡದ ಕಡೆಯಿಂದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಎರಡು ಭಾಗದಲ್ಲಿ ಸಿನಿಮಾ ಬರುತ್ತಿದೆ ಎಂದಿರುವ ಚಿತ್ರತಂಡ ಜೂನ್ 15ರಂದು ರಿಲೀಸ್ ದಿನಾಂಕ ಅನೌನ್ಸ್​ ಮಾಡಲಿದೆ.

‘ನಿಮ್ಮ ಮನು ಇಂದು ವಿಶೇಷ ಪ್ರಕಟಣೆಯೊಂದಿಗೆ ಬಂದಿದ್ದಾನೆ. ಸಮಯ, ಪ್ರೀತಿ ಮತ್ತು ಕನಸುಗಳ SSE ಈಗ ಎರಡು ಭಾಗಗಳಲ್ಲಿ ನಿಮ್ಮ ಮುಂದೆ ತರಲಾಗುತ್ತಿದೆ. ಸೈಡ್ ಎ ಮತ್ತು ಸೈಡ್ ಬಿ. ಚಿತ್ರದ ಚಿತ್ರೀಕರಣ ಮುಗಿದಿದೆ. ಎರಡೂ ಪಾರ್ಟ್​​ಗಳ ಬಿಡುಗಡೆ ದಿನಾಂಕವನ್ನು ಜೂನ್ 15 ರಂದು ಪ್ರಕಟಿಸಲಾಗುವುದು’ ಎಂದು ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ? ಇಲ್ಲಿದೆ ಇವರ ಗೆಳೆತನದ ಕಥೆ

ಈ ಸಿನಿಮಾದ ಮೂಲಕ ಒಂದು ಗಂಭೀರವಾದ ಪ್ರೇಮಕತೆಯನ್ನು ನಿರ್ದೇಶಕ ಹೇಮಂತ್​ ರಾವ್​ ಹೇಳಲಿದ್ದಾರೆ. ರಕ್ಷಿತ್​ಗೆ ಜೊತೆಯಾಗಿ ರುಕ್ಮಿಣಿ ವಸಂತ್​ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಇದೆ. ಈ ಮೊದಲು ರಿಲೀಸ್ ಆದ ರಕ್ಷಿತ್-ಹೇಮಂತ್ ಕಾಂಬಿನೇಷನ್​ನ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರ ಕೂಡ ಗಂಭೀರ ಕಥೆಯನ್ನೇ ಹೊಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:27 am, Tue, 6 June 23

ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹೊಸ ಹೋಸ್ಟ್ ನನ್ನಂತೆ ನಡೆಸಿಕೊಡುತ್ತಾರೋ ಇಲ್ಲವೋ ಬೇರೆ ವಿಚಾರ: ಸುದೀಪ್
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಬಲಪಡಿಸುತ್ತೇವೆ: ಸಚಿವ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ಎತ್ತಿನ ಜನ್ಮದಿನ ಆಚರಣೆ: ಕೇಕ್ ಕತ್ತರಿಸಿ..ಊರಿಗೆಲ್ಲ ಊಟ ಹಾಕಿಸಿದ ರೈತ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ನ್ಯಾಯಾಲಯದಿಂದ ಪುನಃ ಆಸ್ಪತ್ರೆಗೆ ವಾಪಸ್ಸು ಹೋದ ದರ್ಶನ್ ತೂಗುದೀಪ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಕುಮಾರ ಬಂಗಾರಪ್ಪ ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ್ದಾರೆ: ರೇಣುಕಾಚಾರ್ಯ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ
ದರ್ಶನ್ ಮೇಲಿನ ಅಭಿಮಾನ ಹೆಚ್ಚಾಗಿದೆಯೇ ಹೊರತು ಕಮ್ಮಿಯಾಗಿಲ್ಲ: ಅಭಿಮಾನಿ
ಶ್ರೀಲಂಕಾ ಅಧ್ಯಕ್ಷರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶ್ರೀಲಂಕಾ ಅಧ್ಯಕ್ಷರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿದ ಕಾರ್ಮಿಕ
ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿದ ಕಾರ್ಮಿಕ
ರೇಣುಕಾಸ್ವಾಮಿ ಹತ್ಯೆ ಕೇಸ್​; ದರ್ಶನ್ ವಿಚಾರಣೆಯ ನೇರ ಪ್ರಸಾರ ಇಲ್ಲಿದೆ..
ರೇಣುಕಾಸ್ವಾಮಿ ಹತ್ಯೆ ಕೇಸ್​; ದರ್ಶನ್ ವಿಚಾರಣೆಯ ನೇರ ಪ್ರಸಾರ ಇಲ್ಲಿದೆ..