ಯುವ ರಾಜ್​ಕುಮಾರ್ ಪತ್ನಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಸಪ್ತಮಿ ಗೌಡ

ಯುವ ರಾಜ್​ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ, ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನೀಡುವಂತೆ ನಟಿ ಸಪ್ತಮಿ ಗೌಡ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಯುವ ರಾಜ್​ಕುಮಾರ್ ಹಾಗೂ ಸಪ್ತಮಿ ಗೌಡ ನಡುವೆ ಆಪ್ತ ಸಂಬಂಧವಿದೆ ಎಂದು ಶ್ರೀದೇವಿ ಆರೋಪಿಸಿದ್ದರು.

ಯುವ ರಾಜ್​ಕುಮಾರ್ ಪತ್ನಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಸಪ್ತಮಿ ಗೌಡ
ಸಪ್ತಮಿ ಗೌಡ-ಶ್ರೀದೇವಿ
Follow us
ಮಂಜುನಾಥ ಸಿ.
|

Updated on: Jun 15, 2024 | 6:36 PM

ಚಂದನ್ ಗೌಡ-ನಿವೇದಿತಾ ವಿಚ್ಛೇದನದ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೆ ನಟ ಯುವ ರಾಜ್​ಕುಮಾರ್ (Yuva Rajkumar) ಹಾಗೂ ಶ್ರೀದೇವಿ ಭೈರಪ್ಪ ಅವರ ವಿಚ್ಛೇದನದ ಸುದ್ದಿ ರಾಜ್ಯದಾದ್ಯಂತ ಸದ್ದಾಯ್ತು. ನಟ ಯುವರಾಜ್ ಕುಮಾರ್, ಅಗೌರವ, ಮಾನಸಿಕ ಕ್ರೌರ್ಯದ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಯುವರಾಜ್ ಕುಮಾರ್ ಪರ ವಕೀಲ ಮಾಧ್ಯಮಗಳೊಟ್ಟಿಗೆ ಮಾತನಾಡಿ, ಶ್ರೀದೇವಿ ಅವರ ಚಾರಿತ್ಯ್ರದ ಬಗ್ಗೆ ಅನುಮಾನ ಬರುವಂಥಹಾ ಆರೋಪಗಳನ್ನು ಮಾಡಿದ್ದರು.

ಬಳಿಕ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದ ಶ್ರೀದೇವಿ, ಪತಿ ಯುವ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿದ್ದರು. ಅಲ್ಲದೆ, ಸಪ್ತಮಿ ಗೌಡ ಹೆಸರನ್ನು ಸಹ ಪ್ರಕರಣದಲ್ಲಿ ಎಳೆದು ತಂದಿದ್ದರು. ಸಪ್ತಮಿ ಗೌಡ ಹಾಗೂ ಯುವರಾಜ್ ಪರಸ್ಪರ ಸಂಬಂಧದಲ್ಲಿದ್ದಾರೆ. ತಾವು ಅಮೆರಿಕಕ್ಕೆ ತೆರಳಿದಾಗ ಯುವ ಹಾಗೂ ಸಪ್ತಮಿ ಸಜೀವನ ನಡೆಸಿದ್ದಾರೆ ಎಂದು ಶ್ರೀದೇವಿ ಭೈರಪ್ಪ ಆರೋಪ ಮಾಡಿದ್ದರು. ಸಪ್ತಮಿ ಗೌಡ ಅವರಿಗಾಗಿ ನನ್ನನ್ನು ಮನೆಯಿಂದ ಹೊರಗೆ ಹಾಕುವ ಪ್ರಯತ್ನವೂ ನಡೆದಿತ್ತು ಎಂದು ಸಹ ಶ್ರೀದೇವಿ ತಮ್ಮ ವಕೀಲರ ಮೂಲಕ ಆರೋಪ ಮಾಡಿದ್ದರು.

ಇದನ್ನೂ ಓದಿ:ಯುವ ರಾಜ್​ಕುಮಾರ್​ ಡಿವೋರ್ಸ್​ ವಿಚಾರದಲ್ಲಿ ಕೇಳಿಬಂತು ಸಪ್ತಮಿ ಗೌಡ ಹೆಸರು

ಇದೀಗ ನಟಿ ಸಪ್ತಮಿ ಗೌಡ, ಶ್ರೀದೇವಿ ಭೈರಪ್ಪ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿರುವ ಸಪ್ತಮಿ ಗೌಡ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧ ಶ್ರೀದೇವಿ, ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಸಪ್ತಮಿ ಆರೋಪ ಮಾಡಿದ್ದು, ಶ್ರೀದೇವಿ ಭೈರಪ್ಪ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡುವಂತೆ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಸಲ್ಲಿಸಿದ್ದರು.

ಅಂತೆಯೇ ನಿರ್ಭಂದಕಾಜ್ಞೆ ಆದೇಶಿಸಿರುವ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ, ಶ್ರೀದೇವಿ ಭೈರಪ್ಪ ಅವರಿಗೆ ನೊಟೀಸ್ ಜಾರಿ ಮಾಡುವಂತೆ ಆದೇಶ ಮಾಡಿದೆ. ಆದರೆ ಶ್ರೀದೇವಿ ಭೈರಪ್ಪ ಪ್ರಸ್ತುತ ವಿದೇಶದಲ್ಲಿದ್ದಾರೆ. ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣದಲ್ಲಿ ತೊಡಗಿದ್ದಾರೆ. ಪ್ರಸ್ತುತ ಯುವರಾಜ್ ಕುಮಾರ್ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ತಿಳಿದು ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ