Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿಯೂ ಬರುತ್ತಿದೆ ‘ಸ್ಕ್ಯಾಮ್’ 1992 ಬದಲಿಗೆ 1770

ಸ್ಕ್ಯಾಮ್ 1992 ವೆಬ್ ಸರಣಿ ಭಾರಿ ಜನಪ್ರಿಯತೆ ಗಳಿಸಿದೆ. ಇದೀಗ ಕನ್ನಡದಲ್ಲಿಯೂ ಸ್ಕ್ಯಾಮ್ ಹೆಸರಿನ ಸಿನಿಮಾ ಬರುತ್ತಿದೆ ಆದರೆ 1992 ಅಲ್ಲ 1770!

ಕನ್ನಡದಲ್ಲಿಯೂ ಬರುತ್ತಿದೆ 'ಸ್ಕ್ಯಾಮ್' 1992 ಬದಲಿಗೆ 1770
ಸ್ಕ್ಯಾಮ್ 1770
Follow us
ಮಂಜುನಾಥ ಸಿ.
|

Updated on: Apr 07, 2023 | 7:33 AM

ಷೇರುಮಾರುಕಟ್ಟೆ (Share Market) ಕಿಂಗ್ ಎಂದೇ ಕರೆಯಲಾಗುತ್ತಿದ್ದ ವಂಚಕ ಹರ್ಷದ್ ಮೆಹ್ತಾ ಜೀವನ ಆಧರಿಸಿದ ಸ್ಕ್ಯಾಮ್ 1992 (Scam 1992) ವೆಬ್ ಸರಣಿ (Web Series) ಭಾರಿ ಜನಪ್ರಿಯತೆ ಗಳಿಸಿದೆ. ಸೋನಿ ಲಿವ್​ನಲ್ಲಿ ಪ್ರಸಾರವಾಗಿದ್ದ ಈ ವೆಬ್ ಸರಣಿ ಭಾರತದ ಟಾಪ್ ವೆಬ್ ಸರಣಿಗಳಲ್ಲಿ ಒಂದು. ಇದೇ ವಿಷಯವುಳ್ಳ ಸಿನಿಮಾ ಬಂತಾದರೂ ವೆಬ್ ಸರಣಿಯ ಮಟ್ಟಿಗೆ ಹಿಟ್ ಆಗಲಿಲ್ಲ. ಇದೀಗ ಕನ್ನಡದಲ್ಲಿಯೂ ಸ್ಕ್ಯಾಮ್ ಸಿನಿಮಾ ಬರುತ್ತಿದೆ ಆದರೆ 1992 ಬದಲಿಗೆ 1770!

ಈಗಿನ ಶಿಕ್ಷಣ ಪದ್ಧತಿ ಹಾಗೂ ವಿದ್ಯಾರ್ಥಿಗಳ ಕುರಿತಾದ ಕತೆ ಒಳಗೊಂಡಿರುವ ‘ಸ್ಕ್ಯಾಮ್ (1770)’ ಸಿನಿಮಾ ಕನ್ನಡದಲ್ಲಿ ಬರುತ್ತಿದೆ. ದೇವರಾಜ್ ಆರ್ ನಿರ್ಮಿಸಿರುವ, ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಬೆಂಗಳೂರು ನಗರದ ಆಟದ ಮೈದಾನವೊಂದರಲ್ಲಿ ಸುಮಾರು 20 ತಂಡಗಳು ಭಾಗವಹಿಸಿರುವ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು. ಆ ತಂಡಗಳ ನಾಯಕರಗಳಾಗಿದ್ದ ವಿದ್ಯಾರ್ಥಿಗಳೇ ‘ಸ್ಕ್ಯಾಮ್ (1770)’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದು ವಿಶೇಷ.

ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಇಟ್ಟುಕೊಂಡು ರೂಪಿಸಲಾದ ಕತೆ ಇಟ್ಟುಕೊಂಡು ಮಾಡಿರುವ ಸಿನಿಮಾ ‘ಸ್ಕ್ಯಾಮ್ (1770)’. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇ ಬೇಕಾದ ಚಿತ್ರವಿದು ಎಂದು ನಿರ್ದೇಶಕ ವಿಕಾಸ್ ಪುಷ್ಪಗಿರಿ ತಿಳಿಸಿದ್ದಾರೆ.

ಡಿ.ಕ್ರಿಯೇಷನ್ಸ್ ಇತ್ತೀಚೆಗೆ ಆಕ್ಟ್-1978 ಮತ್ತು 19.20.21 ಎಂಬ ಸದಭಿರುಚಿ ಚಿತ್ರಗಳನ್ನು ನೀಡಿದ್ದು, ದೇವರಾಜ್ ಆರ್ ಅವರ ನಿರ್ಮಾಣದ ಈ ಚಿತ್ರಕ್ಕೆ ಡಾ.ಇಂದು ನಟೇಶ್ ಹಾಗೂ ಅಡ್ವೊಕೇಟ್ ನೇತ್ರಾವತಿ ಕಥೆ ಬರೆದಿದ್ದಾರೆ. ಚಿತ್ರ ಕಥೆಯನ್ನು ಶಂಕರ್ ರಾಮನ್ ಹಾಗೂ ವಿಕಾಸ್ ಪುಷ್ಪಗಿರಿ ಬರೆದಿದ್ದಾರೆ. ಸಂಭಾಷಣೆ ಬರೆದಿರುವುದು ಶಂಕರ್ ರಾಮನ್. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ-ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನವಿದೆ.

ಇದನ್ನೂ ಓದಿ: ತೆರೆಯ ಮೇಲೆ ಬರಲಿದೆ ಅಬ್ದುಲ್ ಕರೀಂ ತೆಲಗಿ ಹಗರಣ; ಸ್ಕ್ಯಾಮ್ 1992 ನಿರ್ದೇಶಕರಿಂದಲೇ ಸ್ಕ್ಯಾಮ್ 2003

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಖ್ಯಾತಿಯ ದಡ್ಡ ಪ್ರವೀಣ ರಂಜನ್, ಬಿ.ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗಾಗಲೇ “ಸ್ಕ್ಯಾಮ್ 1770” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಏಪ್ರಿಲ್ 15ಕ್ಕೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ, ವಿಡಿಯೋ ವೈರಲ್
ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ, ವಿಡಿಯೋ ವೈರಲ್