AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕನಾದ ಹಿರಿಯ ನಟ ಮೂಗು ಸುರೇಶ್; ‘ಕ್ಷಮೆಯಿರಲಿ ತಂದೆ’ ಬಿಡುಗಡೆಗೆ ಸಿದ್ಧ

ಖ್ಯಾತ ನಟ ಮೂಗು ಸುರೇಶ್ ಅವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ‘ಕ್ಷಮೆಯಿರಲಿ ತಂದೆ’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಮಂಜುನಾಥ್ ಹೆಗ್ಡೆ, ರೇಣುಕಾಬಾಲಿ, ವಿನ್ಯಾ ಶೆಟ್ಟಿ, ಶ್ರೀಮಂತ ಜೊತೆ ಮೂಗು ಸುರೇಶ್ ಕೂಡ ನಟಿಸಿದ್ದಾರೆ. ಜೂನ್ 12ರಂದು ಈ ಚಿತ್ರ ರಿಲೀಸ್ ಆಗಲಿದೆ.

ನಿರ್ದೇಶಕನಾದ ಹಿರಿಯ ನಟ ಮೂಗು ಸುರೇಶ್; ‘ಕ್ಷಮೆಯಿರಲಿ ತಂದೆ’ ಬಿಡುಗಡೆಗೆ ಸಿದ್ಧ
Kshame Irali Thande Team
ಮದನ್​ ಕುಮಾರ್​
|

Updated on: May 28, 2026 | 3:32 PM

Share

ಹಿರಿಯ ನಟ ಮೂಗು ಸುರೇಶ್ (ಎಂ.ಎನ್. ಸುರೇಶ್) ಅವರು ಹಲವು ವರ್ಷಗಳಿಂದ  ಕನ್ನಡ ಚಿತ್ರರಂಗದಲ್ಲಿ (Kannada Film Industry) ಸಕ್ರಿಯರಾಗಿದ್ದಾರೆ. ಹಾಸ್ಯನಟನಾಗಿ ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಇಷ್ಟು ವರ್ಷಗಳ ಅನುಭವದಿಂದ ಅವರು ಈಗ ಹೊಸ ಹೆಜ್ಜೆ ಇಟ್ಟಿದ್ದಾರೆ. ಹೌದು, ಇದೇ ಮೊದಲ ಬಾರಿಗೆ ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ ಬಡ್ತಿ ಪಡೆದಿದ್ದಾರೆ. ‘ಕ್ಷಮೆಯಿರಲಿ ತಂದೆ’ ಸಿನಿಮಾಗೆ ಮೂಗು ಸುರೇಶ್ (Moogu Suresh) ಅವರು ನಿರ್ದೇಶನ ಮಾಡುವುದರ ಜೊತೆಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ.

ಎಂ.ಎನ್. ಸುರೇಶ್ ಅವರು ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿದ್ದಾರೆ. ‘ಕ್ಷಮೆಯಿರಲಿ ತಂದೆ’ ಸಿನಿಮಾಗೆ ಅವರು ಈಗಾಗಲೇ ಶೂಟಿಂಗ್ ಮುಗಿಸಿದ್ದಾರೆ. ಜೂನ್ 12ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಮೋಷನ್ ಪೋಸ್ಟರ್ ಹಾಗೂ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲಾಯಿತು.

ಚಂದನವನದ ಹೆಸರಾಂತ ನಿರ್ದೇಶಕರಾದ ಟಿ.ಎಸ್. ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ಮೇಕಪ್ ರಾಮಕೃಷ್ಣ ಅವರು ‘ಕ್ಷಮೆಯಿರಲಿ ತಂದೆ’ ಚಿತ್ರದ ಸುದ್ದಿಗೋಷ್ಠಿಗೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮೋಷನ್ ಪೋಸ್ಟರ್, ಲಿರಿಕಲ್ ವಿಡಿಯೋ ಅನಾವರಣ ಮಾಡಿದರು. ಟ್ರೇಲರ್ ನೋಡಿದ ಅವರು ಸಿನಿಮಾಗೆ ಶುಭ ಹಾರೈಸಿದರು.

‘ಕ್ಷಮೆಯಿರಲಿ ತಂದೆ’ ಸಿನಿಮಾದ ಪೋಷನ್ ಪೋಸ್ಟರ್:

ಎಂ.ಎನ್. ಸುರೇಶ್ ಅವರು ನಿರ್ಮಾಪಕನಾಗಿ ಹಾಗೂ ನಿರ್ದೇಶಕರಾಗಿ ಗೆಲುವು ಪಡೆಯಲಿ ಎಂದು ಎಲ್ಲರೂ ಹಾರೈಸಿದರು. ಈ ವೇಳೆ ಸುರೇಶ್ ಅವರು ಮಾತನಾಡಿದರು. ‘ನಾನು ಕೆಲವು ಸಿನಿಮಾಗಳಿಗೆ ಸಹ-ನಿರ್ಮಾಪಕನಾಗಿದ್ದೆ. ಪೂರ್ಣ‌ಪ್ರಮಾಣದ ನಿರ್ಮಾಪಕನಾಗಿರುವುದು ಈ ಸಿನಿಮಾದಿಂದ. ನಾನು ನಿರ್ದೇಶನ ಮಾಡಬೇಕೆಂದುಕೊಂಡಿರಲಿಲ್ಲ. ನನ್ನ ಕಾರ್ಯವೈಖರಿಯನ್ನು ಹತ್ತಿರದಿಂದ ಬಲ್ಲ ಸ್ನೇಹಿತರು ನೀವೇ ನಿರ್ದೇಶನ ಮಾಡಿ ಅಂತ ಹೇಳಿದರು’ ಎಂದಿದ್ದಾರೆ ಸುರೇಶ್.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು

‘ಇದು ನನ್ನ ಮೊದಲ ನಿರ್ದೇಶನದ ಸಿನಿಮಾ ಆದ್ದರಿಂದ ಬೇರೆಯವರು ದುಡ್ಡು ಹಾಕುವುದು ಬೇಡ ಅಂತ ನಾನು ಕೂಡಿಟ್ಟಿದ್ದ ಹಣವನ್ನೇ ಈ ಸಿನಿಮಾಗೆ ಹಾಕಿ ನಿರ್ಮಾಣ ಮಾಡಿದ್ದೇನೆ. ಇದಕ್ಕೆ ನನ್ನ ಕುಟುಂಬದ ಸಹಕಾರವೂ ಇದೆ. ಶೀರ್ಷಿಕೆಯೇ ತಿಳಿಸುವಂತೆ ಇದೊಂದು ತಂದೆ-ಮಗನ ಬಾಂಧವ್ಯದ ಸಿನಿಮಾ. ಹರೀಶ್ ಅವರು ಕಥೆ ಬರೆದಿದ್ದಾರೆ’ ಎಂದು ಎಂ.ಎನ್. ಸುರೇಶ್ ಅವರು ಮಾಹಿತಿ ನೀಡಿದರು. ಸೂರ್ಯಕಾಂತ್ ಅವರ ಛಾಯಾಗ್ರಹಣ, ಮುತ್ತುರಾಜ್ ಅವರ ಸಂಕಲನ, ಪುಣ್ಯೇಶ್ ಕುಮಾರ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
3705.30 ಕೋಟಿ ರೂ. ಬರ ಪರಿಹಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಮನವಿ
3705.30 ಕೋಟಿ ರೂ. ಬರ ಪರಿಹಾರಕ್ಕೆ ಸಿಎಂ ಡಿಕೆ ಶಿವಕುಮಾರ್ ಮನವಿ
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ