AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣನ್​ ನಿಧನ; ಪೊಲೀಸ್​ ಠಾಣೆಗೆ ದೂರು ನೀಡಿದ ಪುತ್ರ

Gopalakrishnan Death: ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣನ್​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಪುತ್ರ ಮಹೇಂದ್ರ ಅವರು ವೈದ್ಯರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣನ್​ ನಿಧನ; ಪೊಲೀಸ್​ ಠಾಣೆಗೆ ದೂರು ನೀಡಿದ ಪುತ್ರ
ಗೋಪಾಲಕೃಷ್ಣನ್
TV9 Web
| Updated By: ಮದನ್​ ಕುಮಾರ್​|

Updated on:Dec 16, 2021 | 12:42 PM

Share

ಅನೇಕ ಸಿನಿಮಾಗಳಿಗೆ ಛಾಯಾಗ್ರಾಹಕನಾಗಿ ಕೆಲಸ ಮಾಡಿದ್ದ ಗೋಪಾಲಕೃಷ್ಣನ್​ (Cinematographer Gopalakrishnan) ಅವರು ಇಂದು (ಡಿ.16) ನಿಧನರಾದರು. ಅನಾರೋಗ್ಯದ ಕಾರಣ ಬೆಂಗಳೂರಿನ ಮಹಾವೀರ್​ ಜೈನ್​ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಹೃದಯಾಘಾತದಿಂದ (Heart Attack) ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ ಗೋಪಾಲಕೃಷ್ಣನ್​ ಸಾವಿನ ಬಗ್ಗೆ ಅವರ ಪುತ್ರ ಮಹೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ತಂದೆಯ ನಿಧನಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆಯ ವೈದ್ಯರ ವಿರುದ್ಧ ಮಹೇಂದ್ರ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ (High Ground Police Station) ದೂರು ನೀಡಿದ್ದಾರೆ.

ಹಲವು ದಿನಗಳ ಹಿಂದೆ ಗೋಪಾಲಕೃಷ್ಣನ್​ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಕಿವಿಯ ಶಸ್ತ್ರ ಚಿಕಿತ್ಸೆ ಸಲುವಾಗಿ ಮಹಾವೀರ್ ಜೈನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಅ.23ರಂದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅ.28ರಂದು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಆ ಬಳಿಕ ಅವರ ಆರೋಗ್ಯ ಸಮಸ್ಯೆ ಉಲ್ಬಣ ಆಗಿತ್ತು.

ಶಸ್ತ್ರ ಚಿಕಿ‌ತ್ಸೆ ನೆರವೇರಿದ ನಂತರ ಗೋಪಾಲಕೃಷ್ಣನ್​ ಅವರು ಚಿಂತಾಜನಕ ಸ್ಥಿತಿ ತಲುಪಿದ್ದರು. ದೇಹದ ಬಲಭಾಗದ ಸ್ವಾದೀನ ಕಳೆದುಕೊಂಡು ಅವರು ಪ್ರಜ್ಞಾಹೀನ ಸ್ಥಿತಿಗೆ ಅವರು ಹೋಗಿದ್ದರು. ತಂದೆಯ ಸ್ಥಿತಿಗೆ‌ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಅವರ ಮಗ ಮಹೇಂದ್ರ ಆರೋಪಿಸಿದ್ದಾರೆ. ಹಾಗಾಗಿ ವೈದ್ಯರ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ

ನಟ ಪುನೀತ್​ಗೆ ಹೃದಯಾಘಾತ ಬೆನ್ನಲ್ಲೇ ಬೆಚ್ಚಿಬಿದ್ದ ಸಿಟಿ ಜನ: ಜಿಮ್​ಗಳಿಂದ ದೂರವಾಗಿ, ಹಾರ್ಟ್​ ಚೆಕಪ್​ಗೆ ಜಯದೇವ ಆಸ್ಪತ್ರೆಗೆ ದೌಡು

Published On - 12:29 pm, Thu, 16 December 21

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!