‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ.

‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’ ಚಿತ್ರಗಳ ನಿರ್ಮಾಪಕ ಸಿ. ಜಯರಾಮ್​ ನಿಧನ
ಸಿ. ಜಯರಾಮ್​
Follow us
TV9 Web
| Updated By: ಮದನ್​ ಕುಮಾರ್​

Updated on: Sep 09, 2021 | 9:57 AM

ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಹಿರಿಯ ನಿರ್ಮಾಪಕ ಸಿ. ಜಯರಾಮ್​​ ಅವರು ಸೆ.8ರಂದು ಬೆಂಗಳೂರಿನಲ್ಲಿ ಕೊನೆಯುಸಿರು ಎಳೆದಿದ್ದು, ಗುರುವಾರ (ಸೆ.9) ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರಾಗಿ ಸಿ. ಜಯರಾಮ್​ ಗುರುತಿಸಿಕೊಂಡಿದ್ದರು. ಅನೇಕ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿದ್ದರು. ಶಂಕರ್​ ನಾಗ್​ ನಟನೆಯ ‘ಆಟೋ ರಾಜ’, ಅನಂತ್​ ನಾಗ್​ ಅಭಿನಯದ ‘ನಾ ನಿನ್ನ ಬಿಡಲಾರೆ’, ವಿಷ್ಣುವರ್ಧನ್​ ಹಾಗೂ ರಜನಿಕಾಂತ್​ ನಟಿಸಿದ್ದ ‘ಗಲಾಟೆ ಸಂಸಾರ’ ಶ್ರೀನಾಥ್​-ಆರತಿ ಜೋಡಿಯ ‘ಪಾವನ ಗಂಗಾ’ ಮುಂತಾದ ಸಿನಿಮಾಗಳನ್ನು ಸಿ. ಜಯರಾಮ್​ ನಿರ್ಮಾಣ ಮಾಡಿದ್ದರು.

ಸಿ. ಜಯರಾಮ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಗೌರಿ-ಗಣೇಶ್​ ಹಬ್ಬದ ಸಂದರ್ಭದಲ್ಲಿಯೇ ಈ ಕಹಿ ಸುದ್ದಿ ಕೇಳಿಬಂದಿರುವುದು ನೋವಿನ ಸಂಗತಿ. ಸಿ. ಜಯರಾಮ್​ ಅವರ ಪುತ್ರ ‘ಮಿಲನ’ ಪ್ರಕಾಶ್ ಕೂಡ​ ಚಂದನವನದಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ. ಪುನೀತ್​ ನಟನೆಯ ‘ಮಿಲನ’, ದರ್ಶನ್​ ಅಭಿನಯದ ‘ತಾರಕ್​’ ಮುಂತಾದ ಸಿನಿಮಾಗಳಿಗೆ ಪ್ರಕಾಶ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​

ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ