ನಲಪಾಡ್, ರೇವಣ್ಣಗೆ ಜಾಮೀನು ಕೊಡಿಸಿದ್ದ ಹಿರಿಯ ವಕೀಲರಿಂದ ದರ್ಶನ್ ಪರ ವಾದ

ನಟ ದರ್ಶನ್ ತೂಗುದೀಪ ಪರವಾಗಿ ಹೈಕೋರ್ಟ್​ನ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಕೆಲ ವಾರಗಳ ಹಿಂದಷ್ಟೆ ಎಚ್​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಸಿಗುವಂತೆ ಮಾಡಿದ್ದರು.

ನಲಪಾಡ್, ರೇವಣ್ಣಗೆ ಜಾಮೀನು ಕೊಡಿಸಿದ್ದ ಹಿರಿಯ ವಕೀಲರಿಂದ ದರ್ಶನ್ ಪರ ವಾದ
ಹಿರಿಯ ವಕೀಲ ಸಿವಿ ನಾಗೇಶ್
Follow us
ಮಂಜುನಾಥ ಸಿ.
|

Updated on: Jun 21, 2024 | 11:36 AM

ದರ್ಶನ್ (Darshan) ಪರವಾಗಿ ವಕೀಲರಾದ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ಈಗಾಗಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಾದಿಸುತ್ತಿದ್ದಾರೆ. ಇದೀಗ ಈ ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ನೇಮಿಸಲಾಗಿದೆ. ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಎಚ್​ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಿಸಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ.

ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ ದರ್ಶನ್ ಪರವಾಗಿ ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದರು. ಇದೀಗ ಸಿವಿ ನಾಗೇಶ್ ಅವರು ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರ ಬದಲಿಗೆ ವಾದ ಮಂಡಿಸುತ್ತಾರೆಯೇ ಅಥವಾ ಅನಿಲ್ ಬಾಬು, ರಂಗನಾಥ ರೆಡ್ಡಿ ಅವರುಗಳ ಜೊತೆಗೆ ಸಿವಿ ನಾಗೇಶ್ ಸಹ ವಾದ ಮಂಡಿಸುತ್ತಾರೆಯೇ ಕಾದು ನೋಡಬೇಕಿದೆ. ಒಬ್ಬ ಆರೋಪಿಯ ಪರವಾಗಿ ಇಬ್ಬರು ವಕೀಲರು ವಾದ ಮಂಡಿಸುವ ಅವಕಾಶವೂ ಇದೆ. ಅಥವಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ವಾದ ಮಂಡಿಸಿದರೆ, ದರ್ಶನ್ ಪರವಾಗಿ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:ದರ್ಶನ್ ಸೇರಿದಂತೆ 4 ಆರೋಪಿಗನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲು ಇವೆ ಪ್ರಮುಖ ಕಾರಣ

ಸಿವಿ ನಾಗೇಶ್ ಅವರ ಸಹಾಯಕ ವಕೀಲರಾಗಿರುವ ರಾಘವೇಂದ್ರ ಅವರು ಈಗಾಗಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ತೆರಳಿ ನಟ ದರ್ಶನ್ ಅವರನ್ನು ಭೇಟಿ ಆಗಿದ್ದಾರೆ. ಜಾಮೀನು ಅರ್ಜಿಯನ್ನು ಹಾಕಲು ಸಕಲ ತಯಾರಿ ನಡೆಸಿರುವುದಾಗಿ ತಿಳಿಸಿದ್ದು, ಅದಕ್ಕೆ ಬೇಕಿರುವ ಅಗತ್ಯ ಮಾಹಿತಿಯನ್ನು ದರ್ಶನ್ ಅವರಿಂದ ಪಡೆದುಕೊಂಡಿದ್ದಾರೆ. ರಿಮ್ಯಾಂಡ್ ಶೀಟ್ ಇನ್ನಿತರೆಗಳನ್ನು ಪೊಲೀಸರಿಂದ ಪಡೆದುಕೊಂಡಿದ್ದು, ಜೂನ್ 22 ರಂದೇ ಸಿವಿ ನಾಗೇಶ್ ಅವರು ತಮ್ಮ ವಾದ ಮಂಡಿಸಲಿದ್ದಾರೆ.

ಸಿವಿ ನಾಗೇಶ್ ಅವರು ಹೈಕೋರ್ಟ್​ನ ಹಿರಿಯ ವಕೀಲರಾಗಿದ್ದು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಅಪಹರಣ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಜೈಲು ಪಾಲಾದಾಗಿದ್ದಾಗ ಅವರ ಪರ ವಾದ ಮಂಡಿಸಿ ಕೆಲವೇ ದಿನಗಳಲ್ಲಿ ಅವರಿಗೆ ಜಾಮೀನು ದೊರಕಿಸಿದರು. ಭವಾನಿ ರೇವಣ್ಣ ಜೈಲು ಪಾಲಾಗದಂತೆ ತಡೆಯುವಲ್ಲಿಯೂ ನಾಗೇಶ್ ಅವರ ಪಾತ್ರವಿದೆ ಎನ್ನಲಾಗುತ್ತಿದೆ. ಹಲ್ಲೆ ಆರೋಪದಲ್ಲಿ ಜೈಲುಪಾಲಾಗಿದ್ದ ಮೊಹಮ್ಮದ್ ನಲಪಾಡ್ ಪರವಾಗಿಯೂ ನಾಗೇಶ್ ಅವರೇ ವಾದ ಮಂಡಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್