AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ ಚಿತ್ರೋತ್ಸವದಲ್ಲಿ ಭಾಷಣ ಮಾಡಲಿರುವ ಕನ್ನಡದ ಯುವ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ

ಪ್ರಿಯಾಂಕಾ ಉಪೇಂದ್ರ ನಟನೆಯ ‘ಸೆಪ್ಟೆಂಬರ್ 21’ ಸಿನಿಮಾಗೆ ಕರೆನ್ ಕ್ಷಿತಿ ಸುವರ್ಣ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಗ್ಗೆ ಅವರು ಕಾನ್ ಚಿತ್ರೋತ್ಸವದಲ್ಲಿ ಮಾತನಾಡಲಿದ್ದಾರೆ. ‘ಈ ವೇದಿಕೆಯು ಕರ್ನಾಟಕದ ಯುವ ನಿರ್ದೇಶಕರಿಗೆ ಸ್ಫೂರ್ತಿಯಾಗಲಿ’ ಎಂದು ಅವರು ಆಶಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕಾನ್ ಚಿತ್ರೋತ್ಸವದಲ್ಲಿ ಭಾಷಣ ಮಾಡಲಿರುವ ಕನ್ನಡದ ಯುವ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ
September 21 Movie Poster, Karen Kshiti Suvarna
ಮದನ್​ ಕುಮಾರ್​
|

Updated on: Apr 30, 2026 | 8:51 PM

Share

2026ನೇ ಸಾಲಿನ ಕಾನ್ ಚಿತ್ರೋತ್ಸವಕ್ಕೆ (Cannes Film Festival) ಸಿದ್ಧತೆ ನಡೆಯುತ್ತಿದೆ. ಈ ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಭಾಗವಹಿಸುವುದು ಎಂದರೆ ಹೆಮ್ಮೆಯೇ ಸರಿ. ಈ ಬಾರಿ ನಡೆಯಲಿರುವುದು 79ನೇ ಕಾನ್ ಚಿತ್ರೋತ್ಸವ. ಅದರ ಅಂಗವಾಗಿ ಆಯೋಜನೆಗೊಳ್ಳಲಿರುವ ‘ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಕನ್ನಡದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ (Karen Kshiti Suvarna) ಅವರು ಭಾಷಣ ಮಾಡಲಿದ್ದಾರೆ. 22ರ ಪ್ರಾಯದ ಈ ಯುವ ನಿರ್ದೇಶಕಿಗೆ ಪ್ರತಿಷ್ಠಿತ ಚಿತ್ರೋತ್ಸವದಿಂದ ಆಹ್ವಾನ ಬಂದಿದೆ. ‘ಸೆಪ್ಟೆಂಬರ್ 21’ (September 21) ಸಿನಿಮಾಗೆ ಅವರು ನಿರ್ದೇಶನ ಮಾಡಿದ್ದಾರೆ.

‘ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಕರೆನ್ ಕ್ಷಿತಿ ಸುವರ್ಣ ಅವರು ಭಾಗವಹಿಸಲಿದ್ದಾರೆ. ಅವರ ಜೊತೆ ಫೋರ್ಬ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಮೋಯಿರಾ ಫೋರ್ಬ್ಸ್ ಹಾಗೂ ಇನ್ನಿತರ ಮಹಿಳೆಯರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಈ ವೇದಿಕೆಯಲ್ಲಿ ಕರೆನ್ ಕ್ಷಿತಿ ಸುವರ್ಣ ಏನು ಮಾತನಾಡಲಿದ್ದಾರೆ ಎಂಬ ಕೌತುಕ ಮೂಡಿದೆ.

ಮೇ 12 ಮತ್ತು 13ರಂದು ಕಾನ್ ನಗರದ ಖಾಸಗಿ ಹೋಟೆಲ್​​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅದರಲ್ಲಿ ಕರೆನ್ ಕ್ಷಿತಿ ಸುವರ್ಣ ಅವರು ಸಿನಿಮಾ, AI ಹಾಗೂ ಸಾಮಾಜಿಕ ಕ್ರಿಯಾಶೀಲತೆ ಕುರಿತು ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಮರು-ಪ್ರಸಾರದ ಮೂಲಕ 10 ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ತಲುಪಲಿದೆ. ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ‘ಸೆಪ್ಟೆಂಬರ್ 21’ ಸಿನಿಮಾ ಈ ಬಾರಿಯ ಕಾನ್ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ.

‘ಸೆಪ್ಟೆಂಬರ್ 21’ ಚಿತ್ರವು ಹಿಂದಿ ಮತ್ತು ಕನ್ನಡದಲ್ಲಿ ಸಿದ್ಧವಾಗಿದೆ. ಮೇ 16ರಂದ ಸಂಜೆ 5.45ಕ್ಕೆ ಕಾನ್ ಚಿತ್ರೋತ್ಸವದಲ್ಲಿ ಪ್ರೀಮಿಯರ್ ಆಗಲಿದೆ. ಆಲ್ಜೈಮರ್ ಕಾಯಿಲೆ ಮತ್ತು ಆರೈಕೆದಾರರ ಹೋರಾಟದ ಕುರಿತಾದ ಕಥೆ ಈ ಸಿನಿಮಾದಲ್ಲಿದೆ. ಪ್ರಿಯಾಂಕಾ ಉಪೇಂದ್ರ, ಪ್ರವೀಣ್ ಸಿಂಗ್ ಸಿಸೋಡಿಯಾ, ಝರೀನಾ ವಹಾಬ್, ಅಜಿತ್ ಶಿಧಾಯೆ, ಅಮಿತ್ ಬೆಹ್ಲ್ ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಕಾನ್ ಚಿತ್ರೋತ್ಸವದಲ್ಲಿ ದಕ್ಷಿಣದ ನಟನ ಬಗ್ಗೆ ಆಲಿಯಾ ಭಟ್ ಮಾತು

ಈ ಮೊದಲು 56ನೇ ಗೋವಾ ಚಿತ್ರೋತ್ಸವದ ‘ವರ್ಕ್-ಇನ್-ಪ್ರೋಗ್ರೆಸ್’ ವಿಭಾಗದಲ್ಲಿ ‘ಸೆಪ್ಟೆಂಬರ್ 21’ ಸಿನಿಮಾ ಪ್ರದರ್ಶನ ಆಗಿತ್ತು. ಮೇ 22ರಂದು ಭಾರತದಲ್ಲಿ ಈ ಸಿನಿಮಾ ತೆರೆಕಾಣಲಿದೆ. ವಿಸಿಕಾ ಫಿಲ್ಮ್ಸ್, ಎಫ್​ಎಂಡಿ ಪ್ರೊಡಕ್ಷನ್ಸ್, ಹಮಾರಾ ಮೂವೀ ಸಂಸ್ಥೆಗಳ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ವಿನಯ್ ಚಂದ್ರ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ