AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕರ್ ನಾಗ್ ಜನ್ಮದಿನ: ಈ ವಿಶೇಷ ವ್ಯಕ್ತಿ ಕಂಡ ಕನಸು ಒಂದೆರಡಲ್ಲ..

ಶಂಕರ್ ನಾಗ್ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 1954ರಲ್ಲಿ ಜನಿಸಿದರು. ಸಣ್ಣ ವಯಸ್ಸಿನಲ್ಲಿರುವಾಗ ಮರಾಠಿ ನಾಟಕಗಳಿಂದ ಅವರು​ ಪ್ರಭಾವಕ್ಕೆ ಒಳಗಾಗಿದರು. ‘ಒಂದಾನೊಂದು ಕಾಲದಲ್ಲಿ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಶಂಕರ್ ನಾಗ್ ಜನ್ಮದಿನ: ಈ ವಿಶೇಷ ವ್ಯಕ್ತಿ ಕಂಡ ಕನಸು ಒಂದೆರಡಲ್ಲ..
ಶಂಕರ್ ನಾಗ್
ರಾಜೇಶ್ ದುಗ್ಗುಮನೆ
|

Updated on: Nov 09, 2023 | 8:17 AM

Share

ಶಂಕರ್​ ನಾಗ್ (Shankar Nag) ಅವರು ಇಂದು (ನವೆಂಬರ್ 9) ನಮ್ಮೊಂದಿಗೆ ಇದ್ದಿದ್ದರೆ 69ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳು ಕಳೆದಿವೆ. ಆದರೆ, ಅವರ ನೆನಪು ಎಂದಿಗೂ ನಮ್ಮನ್ನು ಬಿಟ್ಟು ಹೋಗುವಂಥದ್ದಲ್ಲ. ಅವರು ಮಾಡಿದ ಸಿನಿಮಾಗಳು, ಕಂಡ ಕನಸುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತ. ಸಣ್ಣ ವಯಸ್ಸಿಗೆ ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡ ಶಂಕರ್ ನಾಗ್, ಬದುಕಿದ್ದ ಕೆಲವೇ ವರ್ಷಗಳಲ್ಲಿ ಹಲವು ಸಿನಿಮಾಗಳನ್ನು ನೀಡಿದರು. ನಿರ್ದೇಶನ, ನಟನೆಯ ಜೊತೆ ನಮ್ಮ ರಾಜ್ಯದ ಅಭಿವೃದ್ಧಿ ಬಗ್ಗೆ ಅವರು ಕನಸು ಕಂಡಿದ್ದರು. ಅವರನ್ನು ಇಂದು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಶಂಕರ್ ನಾಗ್ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 1954ರಲ್ಲಿ ಜನಿಸಿದರು. ಸಣ್ಣ ವಯಸ್ಸಿನಲ್ಲಿರುವಾಗ ಮರಾಠಿ ನಾಟಕಗಳಿಂದ ಅವರು​ ಪ್ರಭಾವಕ್ಕೆ ಒಳಗಾಗಿದರು. ‘ಒಂದಾನೊಂದು ಕಾಲದಲ್ಲಿ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ. ಆ ಬಳಿಕ ಅವರು ಹಲವು ಪ್ರಯೋಗಗಳನ್ನು ಮಾಡಿದರು.

ಕೆಲವು ಸಿನಿಮಾಗಳಲ್ಲಿ ನಟಿಸಿದ ಬಳಿಕ ಅವರಿಗೆ ನಿರ್ದೇಶನದ ಕಡೆ ಒಲವು ಬಂತು. ‘ಮಿಂಚಿನ ಓಟ’ ಸಿನಿಮಾವನ್ನು ಅವರು ಮೊದಲ ಬಾರಿಗೆ ನಿರ್ದೇಶನ ಮಾಡಿದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಂಡಿತು. ಆ ಬಳಿಕ ‘ಗೀತಾ’, ‘ಜನ್ಮ ಜನ್ಮದ ಅನುಬಂಧ’ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ.

ರಾಜ್​ಕುಮಾರ್ ನಟನೆಯ ‘ಒಂದು ಮುತ್ತಿನ ಕಥೆ’ ಚಿತ್ರ ಗಮನ ಸೆಳೆಯಿತು. ಈ ಚಿತ್ರದಲ್ಲಿ ಬರುವ ಅಂಡರ್​ವಾಟರ್ ಶೂಟಿಂಗ್​ಗಾಗಿ ಶಂಕರ್ ನಾಗ್ ಸಾಕಷ್ಟು ಶ್ರಮ ಹಾಕಿದ್ದರು. 90ರ ದಶಕದಲ್ಲಿ ವಿದೇಶಕ್ಕೆ ಹೋಗಿ ಅಲ್ಲಿನ ಸಿನಿಮಾಗಳನ್ನು ನೋಡಿದ್ದರು. ಆ ತಂತ್ರಜ್ಞಾನ ಕನ್ನಡ ಚಿತ್ರರಂಗಕ್ಕೆ ಬರಬೇಕು ಎಂದು ಶಂಕರ್​ನಾಗ್​ ಆಲೋಚಿಸಿದ್ದರು. ಈ ಕುರಿತು ಅವರು ಹಲವು ಆಲೋಚನೆಗಳನ್ನು ಮಾಡಿದ್ದರು. ಮೆಟ್ರೋ ಸಾರಿಗೆಯನ್ನು ರಾಜ್ಯಕ್ಕೆ ತರಬೇಕು ಎಂದು ಆಗಲೇ ಆಲೋಚಿಸಿದ್ದರು.

ಇದನ್ನೂ ಓದಿ: ‘ಮರೆವು ದೇವರು ಕೊಟ್ಟಿರೋ ವರ’; ಶಂಕರ್ ನಾಗ್ ಇಲ್ಲ ಎಂಬ ನೋವಿನಿಂದ ಹೊರ ಬಂದಿರೋ ಅನಂತ್ ನಾಗ್

‘ಮಾಲ್ಗುಡಿ ಡೇಸ್​’ ಟಿವಿ ಸೀರೀಸ್​ ಶಂಕರ್ ನಾಗ್ ನಿರ್ದೇಶನದಲ್ಲಿ ಮೂಡಿಬಂತು. ನಾಲ್ಕು ಸೀಸನ್​ಗಳ ಪೈಕಿ ಮೊದಲ ಮೂರು ಸೀಸನ್​​ಗೆ ಅವರೇ ನೇತೃತ್ವ ವಹಿಸಿದ್ದರು. ಈ ಸರಣಿ ಯಶಸ್ಸು ಪಡೆಯಿತು. ಇದು ಶಂಕರ್ ನಾಗ್ ಅವರ ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಹಾಗೂ ಕೊನೆಯ ಸೀರಿಸ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್