ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ […]

ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ
ಆಯೇಷಾ ಬಾನು

Updated on: Oct 11, 2020 | 3:46 PM

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶಿಸುತ್ತಿದ್ದಾರೆ. ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.

ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ RC ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ್ RC ಹಾಗೂ ಅಕ್ಷಯ್ CN ಅವರ ಸಹ ನಿರ್ಮಾಣವಿದೆ. PKH ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಚಿತ್ರಕ್ಕಿದೆ. ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರಿದ್ದಾರೆ.

Published On - 3:41 pm, Sun, 11 October 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us