AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವತಾರ ಪುರುಷ’ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​​ಪೋನ್​; ಕಾರಣವೇನು?

ಸಿಂಪಲ್​ ಸುನಿ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ಮತ್ತು ಶರಣ್​ ಜೋಡಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ.

‘ಅವತಾರ ಪುರುಷ’ ಸಿನಿಮಾ ರಿಲೀಸ್ ದಿನಾಂಕ ಪೋಸ್ಟ್​​ಪೋನ್​; ಕಾರಣವೇನು?
ಶರಣ್​, ಆಶಿಕಾ, ಪುಷ್ಕರ್
TV9 Web
| Edited By: |

Updated on: Dec 09, 2021 | 2:06 PM

Share

ವಿಶ್ವದಲ್ಲೆಡೆ ಕೊವಿಡ್​ ರೂಪಾಂತರಿಗಳು ಕಾಣಿಸಿಕೊಳ್ಳುತ್ತಿವೆ. ಈಗ ಒಮಿಕ್ರಾನ್​ ಹೆಸರಿನ ಹೊಸ ರೂಪಾಂತರಿ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕ ಮೂಡಿಸಿದೆ. ಇದರಿಂದ ಚಿತ್ರರಂಗದಲ್ಲಿ ಮತ್ತೆ ಅನಿಶ್ಚಿತತೆ ಕಾಡೋಕೆ ಆರಂಭವಾಗಿದೆ. ಇದರಿಂದ ಕೆಲ ಸಿನಿಮಾಗಳು ರಿಲೀಸ್ ದಿನಾಂಕ ಮುಂದೂಡುವ ಚಿಂತನೆ ನಡೆಸಿವೆ.  ಈಗ ‘ಸಿಂಪಲ್’​ ಸುನಿ ನಿರ್ದೇಶನದ, ಶರಣ್​ ಹಾಗೂ ಆಶಿಕಾ ರಂಗನಾಥ್​ ಅಭಿನಯದ ‘ಅವತಾರ ಪುರುಷ’ ಚಿತ್ರದ ಮೇಲೂ ಕೊರೊನಾ ಆತಂಕದ ಛಾಯೆ ಬಿದ್ದಿದೆ. ಹೀಗಾಗಿ, ಸಿನಿಮಾ ರಿಲೀಸ್​ ದಿನಾಂಕವನ್ನು ತಂಡ ಮುಂದೂಡಿದೆ.

ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನ ‘ಅವತಾರ ಪುರುಷ’ಕ್ಕೆ ಬಂಡವಾಳ ಹೂಡಿದ್ದಾರೆ.. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ತುಂಬ ಶ್ರೀಮಂತವಾಗಿ ಮೂಡಿಬಂದಿರುವ ‘ಅವತಾರ ಪುರುಷ’ ಚಿತ್ರ ಡಿ.10ರಂದು ದೇಶಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ಆಗುತ್ತಿಲ್ಲ.

‘ಅವತಾರ ಪುರುಷ’ ಸಿನಿಮಾದಲ್ಲಿ ನಟ ಶರಣ್​ ಅವರು ಜ್ಯೂನಿಯರ್​ ಆರ್ಟಿಸ್ಟ್​ ಪಾತ್ರ ಮಾಡಿದ್ದಾರೆ. ಹಾಗಾಗಿ ಅವರು ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶರಣ್​ ಎಂದರೆ ಕಾಮಿಡಿಗೆ ಫೇಮಸ್. ಇನ್ನು, ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಅವತಾರ ಪುರುಷ’ ಮೂಡಿಬಂದಿದ್ದು ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಸಿಗಲಿದೆ ಎಂಬ ಭರವಸೆಯನ್ನು ಚಿತ್ರತಂಡ ನೀಡಿತ್ತು. ಈ ಮನರಂಜನೆ ಸಂಪೂರ್ಣವಾಗಿ ಪ್ರೇಕ್ಷಕರಿಗೆ ತಲುಪಬೇಕು ಎಂಬುದು ಚಿತ್ರತಂಡದ ಆಶಯ.

ಈಗ ಎಲ್ಲೆಲ್ಲೂ ಕೊವಿಡ್​ ಭಯ ಆವರಿಸಿದೆ. ಈ ಸಂದರ್ಭದಲ್ಲಿ ನೈಟ್​ ಕರ್ಫ್ಯೂ ಮತ್ತು ವೀಕೆಂಡ್​ ಕರ್ಫ್ಯೂ ಹೇರಿದರೆ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಉಂಟಾಗಲಿದೆ. ಒಂದೊಮ್ಮೆ ಒಮಿಕ್ರಾನ್​ ಪ್ರಕರಣ ಹೆಚ್ಚಿದರೆ ಚಿತ್ರಮಂದಿರದಲ್ಲಿ ಶೇ.50 ಆಸನಭರ್ತಿಗೆ ಮಾತ್ರ ಅವಕಾಶ ನೀಡಿದರೆ ಚಿತ್ರದ ಕಲೆಕ್ಷನ್​ಗೆ ಹೊಡೆತಬೀಳಲಿದೆ. ಈ ಆತಂಕದ ಮಧ್ಯೆ ಸಾಕಷ್ಟು ಮಂದಿ ಸಿನಿಮಾ ನೋಡೋಕೆ ಹಿಂದೇಟು ಹಾಕುತ್ತಾರೆ. ಹಾಗಾಗಬಾರದು ಎಂಬುದು ಚಿತ್ರತಂಡದ ಆಶಯ. ಈ ಕಾರಣಕ್ಕೆ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ. ಕೊರೊನಾ ಭಯ ಕಳೆದ ನಂತರ ಸೂಕ್ತ ದಿನಾಂಕ ನಿಗದಿ ಮಾಡಿ ಈ ಬಗ್ಗೆ ಘೋಷಣೆ ಮಾಡಲು ಪುಷ್ಕರ್​ ಮಲ್ಲಿಕಾರ್ಜುನಯ್ಯ ನಿರ್ಧರಿಸಿದ್ದಾರೆ.

ಇದನ್ನೂ ಓದಿ: Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ

ಶಂಕರ್​ ನಾಗ್​ ಹೊಸ ಸಿನಿಮಾ ‘ಅಬ ಜಬ ದಬ’; ಕೌತುಕ ಮೂಡಿಸಿದ ‘ಕನ್ನಡ್​ ಗೊತ್ತಿಲ್ಲ’ ನಿರ್ದೇಶಕ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ