ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ; ಕಾರಣವೇನು?

‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಒಟ್ಟಾಗಿ ‘ಛೂ ಮಂತರ್’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರವನ್ನು ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ‘ಕರ್ವ’ ಸಿನಿಮಾ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಇದನ್ನು ಜನರು ಇಷ್ಟಪಟ್ಟಿದ್ದರು. ಹೀಗಾಗಿ, ‘ಛೂ‌ ಮಂತರ್’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ಮೇ 10ಕ್ಕೆ ರಿಲೀಸ್ ಆಗುತ್ತಿಲ್ಲ ಶರಣ್ ನಟನೆಯ ‘ಛೂ ಮಂತರ್’ ಸಿನಿಮಾ; ಕಾರಣವೇನು?
ಶರಣ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 07, 2024 | 3:09 PM

ಲೋಕಸಭಾ ಚನಾವಣೆಯು ಕರ್ನಾಟಕದಲ್ಲಿ ಎರಡು ಹಂತದಲ್ಲಿ ನಡೆಯುತ್ತಿದೆ. ಇಂದಿಗೆ (ಮೇ 7) ಕರ್ನಾಟಕ ಭಾಗಕ್ಕೆ ಮತದಾನ ಪೂರ್ಣಗೊಳ್ಳುತ್ತಿದೆ. ಹೀಗಾಗಿ ಮೇ 10ರಂದು ಅನೇಕ ತಂಡಗಳು ಸಿನಿಮಾ ರಿಲೀಸ್ ಮಾಡುವ ಘೋಷಣೆ ಮಾಡಿವೆ. ಇದರಲ್ಲಿ ಶರಣ್ (Sharan) ನಟನೆಯ ‘ಛೂ ಮಂತರ್’ ಸಿನಿಮಾ ಕೂಡ ಇತ್ತು. ಆದರೆ, ಚಿತ್ರತಂಡ ಈಗ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ.

‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಒಟ್ಟಾಗಿ ‘ಛೂ ಮಂತರ್’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರವನ್ನು ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ‘ಕರ್ವ’ ಸಿನಿಮಾ ಹಾರರ್​ ಶೈಲಿಯಲ್ಲಿ ಮೂಡಿ ಬಂದಿತ್ತು. ಇದನ್ನು ಜನರು ಇಷ್ಟಪಟ್ಟಿದ್ದರು. ಹೀಗಾಗಿ, ‘ಛೂ‌ ಮಂತರ್’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಮೊದಲು ಸಿನಿಮಾನ ಮೇ 10ರಂದು ಬಿಡುಗಡೆ ಮಾಡಲು ತಂಡ ನಿರ್ಧರಿಸಿತ್ತು. ಆದರೆ, ಈಗ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ.

ಈ ಸಿನಿಮಾನ ನೋಡಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು ತಂಡಕ್ಕೆ ಒಂದು ಕಿವಿಮಾತು ಹೇಳಿದ್ದರು. ಇದನ್ನು ತಂಡ ಸ್ವೀಕರಿಸಿದೆ. ಸದ್ಯ ಕರ್ನಾಟಕದಲ್ಲಿ ಚುನಾವಣೆ ಪೂರ್ಣಗೊಂಡಿದ್ದರೂ ಉಳಿದ ಭಾಗಗಳಲ್ಲಿ ಹಂತ ಹಂತವಾಗಿ ಮತದಾನ ನಡೆಯುತ್ತಿದೆ. ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ಕೊಟ್ಟಿದ್ದರು. ಈ ಕಾರಣಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ. ಹೊಸ ಬಿಡುಗಡೆ ದಿನಾಂಕ ಶೀಘ್ರವೇ ಘೋಷಣೆ ಆಗಬೇಕಿದೆ.

ಇದನ್ನೂ ಓದಿ: Choo Mantar Movie: ‘ಛೂ ಮಂತರ್’ ಸಿನಿಮಾ ಸೆಟ್​​ನಲ್ಲಿ ಶರಣ್​ಗೆ ಹಾರರ್ ಅನುಭವ

‘ಛೂ ಮಂತರ್’ ಸಿನಿಮಾದಲ್ಲಿ ಶರಣ್ ಜೊತೆ ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮೊದಲಾದವರು ನಟಿಸಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ಸಂಯೋಜನೆ, ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​